Home namma chikmagalur ಅರಣ್ಯ ಇಲಾಖೆ ವಿರುದ್ಧ ಗೋಬ್ಯಾಕ್ ಚಳವಳಿ
namma chikmagalurchikamagalurHomeLatest News

ಅರಣ್ಯ ಇಲಾಖೆ ವಿರುದ್ಧ ಗೋಬ್ಯಾಕ್ ಚಳವಳಿ

Share
Share

ಚಿಕ್ಕಮಗಳೂರು: ಸೆಕ್ಷನ್ ೪(೧) ಮೀಸಲು ಅರಣ್ಯ ಘೋಷಣೆಯಾಗಿರುವ ಬ್ಲಾಕ್‌ಗಳಿಗೆ ಸೆಟಲ್‌ಮೆಂಟ್ ಮಾಡಲು ನಿಯೋಜಿಸಿರುವ ಅರಣ್ಯ ವ್ಯವಸ್ಥಾಪಕರು ರೈತರ ಪರವಾಗಿರದೆ ಏಕಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದು, ಅವರ ವಿರುದ್ಧ ಗೋಬ್ಯಾಕ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ಅಧ್ಯಕ್ಷ ಎಸ್. ವಿಜಯ್‌ಕುಮಾರ್ ಎಚ್ಚರಿಸಿದರು.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆಕ್ಷನ್ ೪(೧) ಮೀಸಲು ಅರಣ್ಯ ಸಮಸ್ಯೆ ಬಗ್ಗೆ ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು, ಎಫ್‌ಎಸ್‌ಒ ಸೇರಿದಂತೆ ಅರಣ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದಾರೆ ಎಂದರು.

ರೈತರು ಮನೆ ಕಟ್ಟಿಕೊಂಡು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಎ ಎಂದು ವರ್ಗೀಕರಿಸಿ, ರೈತರು ಸಾಗುವಳಿ ಮಾಡದೆ ಖಾಲಿ ಇರುವ ಭೂಮಿಯನ್ನ ಬಿ ಎಂದು ವರ್ಗೀಕರಿಸಿ ರೈತರಿಲ್ಲದ ಬಿ ವರ್ಗೀಕರಣದ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಿ, ಎ ವರ್ಗೀಕರಣದ ಭೂಮಿಯನ್ನು ಸರಕಾರ ತೀರ್ಮಾನ ತೆಗೆದು ಕೊಳ್ಳುವವರೆಗೂ ಅದನ್ನು ಹಾಗೇ ಉಳಿಸಬೇಕು ಎಂದು ಸಭೆಯಲ್ಲಿ ತೀರ್ಮಾನವಾಗಿದೆ ಎಂದು ತಿಳಿಸಿದರು.

ಆದರೆ, ಇಲಿನ ಎಫ್‌ಎಸ್‌ಒ ಅವರು ಈ ತೀರ್ಮಾನವನ್ನು ಧಿಕ್ಕರಿಸಿ ಯಥಾವತ್ತಾಗಿ ರೈತರ ಜಮೀನಿಗೆ ಭೇಟಿ ನೀಡದೆ ಸ್ಕೆಚ್ ತಯಾರಿ ಮಾಡದೆ ನ್ಯಾಯಾಲಯದ ನಿಯಮಾವಳಿಗಳನ್ನು ಪಾಲಿಸದೆ ಏಕಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇವರ ಧೋರಣೆ ಇದೇ ರೀತಿ ಮುಂದುವರಿದರೆ ಅವರ ವಿರುದ್ಧ ಗೋಬ್ಯಾಕ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಮೂನೆ ೫೦-೫೩ ರಲ್ಲಿ ಮಂಜೂರಾಗಿದ್ದ ಭೂಮಿಯನ್ನು ಅಕ್ರಮ ಎಂದು ಪರಿಗಣಿಸಿ ರದ್ದುಪಡಿಸಿದ್ದು, ಕೂಡಲೇ ಇದನ್ನು ಪುನರ್‌ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು. ನಿಯಮಾವಳಿಗೆ ತಿದ್ದುಪಡಿ ಮಾಡಿ ನಮೂನೆ ೫೭ ರಲ್ಲಿ ಪ್ಲಾಂಟೇಶನ್ ಬೆಳೆಗಳಿಗೂ ಹಕ್ಕುಪತ್ರ ನೀಡುವಂತೆ ಕಂದಾಯ ಸಚಿವರಲ್ಲಿ ಒತ್ತಾಯ ಮಾಡಬೇಕು ಎಂದು ಜನಪ್ರತಿನಿಧಿಗಳನ್ನು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಕೆ.ಕೆ. ರಘು, ಮುಖಂಡರುಗಳಾದ ವಾಸುಪೂಜಾರಿ, ಪೂರ್ಣೇಶ್, ಈಶ್ವರ್, ರವಿಕುಮಾರ್, ಚಂದ್ರೇಗೌಡ, ಕುಮಾರಸ್ವಾಮಿ ಉಪಸ್ಥಿತರಿದ್ದರು.

Go back movement against the forest department

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ ಕೃಷಿ ವೈವಿಧ್ಯತೆ ಹಾಗೂ ನಾವೀನ್ಯತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಚಿಕ್ಕಮಗಳೂರಿನ ಕಾಫಿ ಬೆಳೆಗಾರರು ಸಾಂಪ್ರದಾಯಿಕ ಕಾಫಿ...

Related Articles

ನೂತನ ಪಶ್ಚಿಮ ವಲಯ ಡಿಐಜಿ ಆರ್. ಚೇತನ್ ಭೇಟಿ

ಚಿಕ್ಕಮಗಳೂರು: ನೂತನ ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿರುವ ಆರ್....

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ

ಚಿಕ್ಕಮಗಳೂರು: ಹಾಫ್ ಹೆಲ್ಮೆಟ್ ಹಾಕುವವರೇ ಎಚ್ಚರ.. ಎಚ್ಚರ.. ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ...

ಕರ್ವಾಲೊ ಚಿತ್ರಕಲಾ ಸ್ಪರ್ಧೆಯಲ್ಲಿ ಹರ್ಷ ಕಾವೇರಿಪುರ ಪ್ರಥಮ

ಕೊಟ್ಟಿಗೆಹಾರ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ವಿ ಅವರ ೮೮ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕರ್ವಾಲೊ ಕೃತಿ...

₹1,281.80 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ₹1,281.80 ಕೋಟಿ ಅಂದಾಜು ವೆಚ್ಚದ ಮಹತ್ವಾಕಾಂಕ್ಷಿ...