ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತಾಡಲು ಸ್ವತಂತ್ರವಿದೆ. ರಾಜಣ್ಣ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಅವರು ಸೆಪ್ಟಂಬರ್ ಬಳಿಕ ಸರ್ಕಾರದಲ್ಲಿ ಬದಲಾವಣೆ ಕುರಿತ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಿನಿಮಾ ರೀತಿ ಸ್ಕ್ರಿಪ್ಟ್ ಇರುವುದಿಲ್ಲ. ಇಲ್ಲಿ ಏಳು-ಬೀಳು, ಅಡರು-ತೊಡರು ಇದ್ದೇ ಇರುತ್ತದೆ. ಅದರ ಮಧ್ಯೆಯೂ ಕೆಲಸ ಮಾಡುವುದಕ್ಕಾಗಿ ಜನ ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ ಎಂದು ತಿಳಿಸಿದರು.
ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆಯೋ ಗೊತ್ತಿಲ್ಲ. ಆದರೆ ಅಧಿಕಾರದಲ್ಲಿ ಇರುವಷ್ಟು ದಿನ ಜನರಿಗೆ ಒಳ್ಳೆಯದಾಗುವ ಕೆಲಸ ಮಾಡೋಣ ಎಂದರು.
ಯಾವ ಬದಲಾವಣೆ ಆಗುತ್ತದೆಯೋ ನನಗೆ ಗೊತ್ತಿಲ್ಲ. ಆದರೆ ಕಂದಾಯ ಇಲಾಖೆಯಲ್ಲಿ ಯಾವ ಬದಲಾವಣೆ ಮಾಡಬೇಕು ಎನ್ನುವುದು ಗೊತ್ತಿದೆ. ಇಲ್ಲಿ ಏನೇನು ಬದಲಾವಣೆ ಮಾಡಬೇಕು ಎಂದು ಸಿಎಂ ಹಾಗೂ ಪಕ್ಷ ಹೇಳಿದೆ. ಬೇರೆ ಬದಲಾವಣೆಗಳ ಬಗ್ಗೆ ನನಗೆ ಗೊತ್ತಿಲ್ಲ. ಜೊತೆಗೆ ಅದು ನನಗೆ ಬೇಕಾಗಿಯೂ ಇಲ್ಲ. ಯಾವ ಜನ್ಮದ ಪುಣ್ಯವೋ ಏನೋ ನನಗೆ ಜನರ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಅಷ್ಟು ಸಾಕು ಎಂದು ಹೇಳಿದರು.
Everyone has freedom of speech in a democracy.
Leave a comment