Home namma chikmagalur ಗ್ಯಾರಂಟಿ ಯೋಜನೆ ಜಾರಿ ಬಳಿಕ ಜನರ ಜೀವನದಲ್ಲಿ ಸುಧಾರಣೆ
namma chikmagalurchikamagalurHomeLatest News

ಗ್ಯಾರಂಟಿ ಯೋಜನೆ ಜಾರಿ ಬಳಿಕ ಜನರ ಜೀವನದಲ್ಲಿ ಸುಧಾರಣೆ

Share
Share

ಚಿಕ್ಕಮಗಳೂರು:  ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಾದ ಬಳಿಕ ಜನರ ಜೀವನ ಮಟ್ಟದಲ್ಲಿ ಬಹಳಷ್ಟು ಸುಧಾರಣೆಯಾಗಿದೆ. ಟೀಕೆಗಳ ನಡುವೆಯೂ ಈ ಯೋಜನೆಗಳು ಯಶಸ್ಸು ಕಂಡಿವೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಕಡೂರು ಪಟ್ಟಣದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕೇಂದ್ರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಶ್ರಯದಲ್ಲಿ ಎರಡು ವರ್ಷಗಳ ಸಾಧನಾ ಸಂಭ್ರಮ ಪ್ರಗತಿಯತ್ತ ಕರ್ನಾಟಕ ಕುರಿತ ವಸ್ತು ಪ್ರದರ್ಶನವನ್ನು ಇಂದು ಬೆಳಿಗ್ಗೆ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಯಶಸ್ವಿ ಎರಡು ವರ್ಷಗಳು ಕಳೆದಿವೆ. ಈ ಯೋಜನೆಗಳು ಜನರಿಗೆ ಶಕ್ತಿಯನ್ನು ತುಂಬಿವೆ. ಅಭಿವೃದ್ಧಿ ಕಾರ್ಯದಲ್ಲೂ ನಮ್ಮ ಸರ್ಕಾರ ಹಿಂದೆ ಬಿದ್ದಿಲ್ಲ. ಆ ಯಶಸ್ಸಿನ ಬಗ್ಗೆ ವಾರ್ತಾ ಇಲಾಖೆಯ ಮೂಲಕ ಗ್ಯಾರಂಟಿಯ ಪ್ರಗತಿ ನೋಟವನ್ನು ವೀಕ್ಷಿಸಲು ಅನುವಾಗುವಂತೆ ಇದೀಗ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದರು.

ಶಕ್ತಿ ಯೋಜನೆಯಿಂದ ಮಹಿಳೆಯರು ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ತುಂಬಾ ಅನುಕೂಲವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರು ನೆಮ್ಮದಿಯಿಂದ ಸಂಸಾರ ನಡೆಸುತ್ತಿದ್ದಾರೆ. ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಗಳಿಂದ ಪ್ರತಿ ಕುಟುಂಬಗಳಿಗೆ ವಾರ್ಷಿಕ ತಲಾ ಸುಮಾರು ೩೫ ಸಾವಿರ ರೂ. ಉಳಿತಾಯವಾಗುತ್ತಿದೆ. ಫಲಾನುಭವಿಗಳು ಈ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ ಎಂದರು.

ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಅವರು ಮಾತನಾಡಿ, ರಾಜ್ಯ ಸರ್ಕಾರವು ನುಡಿದಂತೆ ನಡೆದಿದ್ದು, ಎರಡು ವರ್ಷಗಳಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಕೇವಲ ಗ್ಯಾರಂಟಿ ಯೋಜನೆಗೆ ಸೀಮಿತವಾಗದೆ ಜನರ ಬದುಕಿಗೆ ಪೂರಕವಾಗಿ ಸಮಾಜದಲ್ಲಿ ಸುಧಾರಣೆ ತರುವಂತಹ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ಬಣ್ಣಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಗ್ಯಾರಂಟಿ ಯೋಜನೆಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು. ವಸ್ತುಪ್ರದರ್ಶನದಲ್ಲಿ ಸರ್ಕಾರದ ಸಾಧನೆಗಳ ವಿವರ, ಫಲಾನುಭವಿಗಳ ಅನಿಸಿಕೆಗಳು, ಗ್ಯಾರಂಟಿ ಯೋಜನೆಗಳ ವಿವರವನ್ನು ಅನಾವರಣ ಮಾಡಲಾಗಿತ್ತು.

ಕಡೂರು ಪುರಸಭೆಯ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಕಡೂರು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಆಸಂದಿ ಕಲ್ಲೇಶ್, ಜಿಲ್ಲಾ ಕೆಡಿಪಿ ಸದಸ್ಯ ಗುಮ್ಮನಹಳ್ಳಿ ಅಶೋಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಹೇಮಾವತಿ, ಸದಸ್ಯರುಗಳಾದ ಪುಷ್ಪಾ ರಮೇಶ್, ಸುಜಾತ ಚಂದ್ರಶೇಖರ್, ತಾ.ಪಂ. ಮಾಜಿ ಅಧ್ಯಕ್ಷ ದಾಸಯ್ಯನಗುತ್ತಿ ಚಂದ್ರಪ್ಪ, ಪುರಸಭಾ ಸದಸ್ಯ ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು. ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ, ಪ್ರತಿರೂಪಿ ಸಂಸ್ಥೆಯ ಆನಂದ್ ಕಾರ್ಯಕ್ರಮದಲ್ಲಿದ್ದರು.

Improvement in people’s lives after implementation of guarantee scheme

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...