Home namma chikmagalur 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬಾನು ಮುಷ್ತಾಕ್‌ ಆಯ್ಕೆ
namma chikmagalurLatest NewsState News

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬಾನು ಮುಷ್ತಾಕ್‌ ಆಯ್ಕೆ

Share
Share

ಬಳ್ಳಾರಿ: ಬಳ್ಳಾರಿಯಲ್ಲಿ ಇದೇ ಡಿಸೆಂಬರ್‌ ನಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ನಿರೀಕ್ಷೆಯಂತೆಯೇ ಲೇಖಕಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ಕನ್ನಡ ಸಾಹಿತ್ಯ ಪರಿಷತ್ತು ಹೊಸ ಪದ್ಧತಿಯನ್ನು ಆರಂಭಿಸಿದೆ.

ಬಳ್ಳಾರಿ ನಗರದ ಹೊಟೇಲ್‌ನಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನು ಅಂತಿಮಗೊಳಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಮಾಧ್ಯಮಗಳಿಗೆ ತಿಳಿಸಿದರು.

‘ಸಮ್ಮೇಳನದ ಅಧ್ಯಕ್ಷತೆಗೆ ಬಾನು ಮುಷ್ತಾಕ್‌ ಅವರ ಹೆಸರನ್ನು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. 56 ಸದಸ್ಯ ಬಲದ ಸಮಿತಿಯಲ್ಲಿ ಹಾಜರಿದ್ದ 44 ಮಂದಿ ಬಾನು ಮುಷ್ತಾಕ್‌ ಹೆಸರಿಗೆ ಸರ್ವಾನುಮತದ ಸಮ್ಮತಿ ಸೂಚಿಸಿದರು. ಇವರನ್ನು ಹೊರತುಪಡಿಸಿದರೆ, ಕಸಾಪದ ಧಾರವಾಡ ಘಟಕದ ಅಧ್ಯಕ್ಷರು ಮಾಲತಿ ಪಟ್ಟಣಶೆಟ್ಟಿ ಅವರ ಹೆಸರನ್ನೂ, ಬೆಂಗಳೂರು ನಗರ ಘಟಕದ ಅಧ್ಯಕ್ಷರು ವೀಣಾ ಶಾಂತೇಶ್ವರ ಅವರ ಹೆಸರನ್ನೂ ಪ್ರಸ್ತಾಪಿಸಿದರು.

ಆದರೆ ಅಂತಿಮವಾಗಿ ಬಾನು ಮುಷ್ತಾಕ್‌ ಹೆಸರನ್ನೇ ಆಯ್ಕೆ ಮಾಡಲಾಯಿತು’ ಎಂದರು. ‘ಬಾನು ಮುಷ್ತಾಕ್‌ ಅವರು ನಮ್ಮ ಪ್ರಸ್ತಾವವನ್ನು ಒಪ್ಪಿಕೊಂಡಿದ್ದಾರೆ. ಕನ್ನಡದ ಕೆಲಸ ನನ್ನ ಮೊದಲ ಕರ್ತವ್ಯ ಎಂದು ನನಗೆ ಸಂದೇಶ ಕಳುಹಿಸಿದ್ದಾರೆ’ ಎಂದು ಜೋಶಿ ಸ್ಪಷ್ಟಪಡಿಸಿದರು.

ಈವರೆಗೆ ಸಮ್ಮೇಳನ ನಡೆಯುವ ಒಂದೆರಡು ತಿಂಗಳ ಮೊದಲಷ್ಟೇ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಆರು ತಿಂಗಳಿಗೆ ಮೊದಲೇ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರ ಆಯ್ಕೆಗೂ ಮೊದಲೇ ಸಮ್ಮೇಳನದ ಸ್ವಾಗತ ಸಮಿತಿ, ಉಪ ಸಮಿತಿಗಳು ರಚನೆಯಾಗಿರುತ್ತಿದ್ದವು.

ಜತೆಗೇ, ಸ್ಥಳ, ದಿನ ನಿಗದಿಯಾಗುತ್ತಿತ್ತು. ಆದರೆ, ಈ ಬಾರಿ ಇವು ಯಾವುವೂ ಆಗಿಲ್ಲ. ಪ್ರಮುಖವಾಗಿ, ಪರಿಷತ್ತಿನಿಂದ ಅಧಿಕೃತವಾಗಿ ಘೋಷಣೆಯಾಗು ವವರೆಗೆ ಸಮ್ಮೇಳನದ ಅಧ್ಯಕ್ಷರ ಹೆಸರು ಗೋಪ್ಯವಾ ಗಿರುತ್ತಿತ್ತು. ಈ ಸಲ ಅದಕ್ಕೂ ಚ್ಯುತಿಯಾಗಿದ್ದು, ಬಾನು ಮುಷ್ತಾಕ್‌ ಅವರೇ ಸರ್ವಾಧ್ಯಕ್ಷರು ಎಂಬುದು ವಾರದ ಮೊದಲೇ ಬಹಿರಂಗವಾಗಿತ್ತು.

ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ, ಹೆಚ್ಚು ಮಾತನಾಡದೇ ಸುದ್ದಿಗೋಷ್ಠಿಯಿಂದ ನಿರ್ಗಮಿಸಿದರು.

Banu Mushtaq elected as the President of the 88th All India Kannada Sahitya Sammelan

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನೂತನ ಸಂಚಾರ ವ್ಯವಸ್ಥೆ

ಚಿಕ್ಕಮಗಳೂರು: : ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು ಗಿರಿಭಾಗಕ್ಕೆ ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು....

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ...

Related Articles

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...

ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚನೆ ಕಡ್ಡಾಯ 

ಚಿಕ್ಕಮಗಳೂರು:  ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು...

ವೇದಾನದಿ ನೀರಿನ ಹಂಚಿಕೆಯಲ್ಲಿ ರೈತರು ಸಂಯಮ ಕಾಪಾಡಬೇಕು

ಚಿಕ್ಕಮಗಳೂರು: ವೇದಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರೈತರು ಸಂಯಮ ಕಾಪಾಡಬೇಕು. ಜೊತೆಗೆ ಕೆರೆ ತುಂಬಿಸುವ...