Home ನಾಡು-ನುಡಿಯ ಏಳಿಗೆಗೆ ಶ್ರಮಿಸುವುದು ಪ್ರತಿಯೊಬ್ಬರ ಕರ್ತವ್ಯ 
HomechikamagalurLatest Newsnamma chikmagalur

ನಾಡು-ನುಡಿಯ ಏಳಿಗೆಗೆ ಶ್ರಮಿಸುವುದು ಪ್ರತಿಯೊಬ್ಬರ ಕರ್ತವ್ಯ 

Share
Share
ಚಿಕ್ಕಮಗಳೂರು: ನಾಡು-ನುಡಿಯ ಏಳಿಗೆಗೆ ಶ್ರಮಿಸುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವರಾದ ಸಗೀರ್ ಅಹಮ್ಮದ್‌ ತಿಳಿಸಿದ್ದಾರೆ.
ಅವರು ಇಂದು ಮಂಡ್ಯದಲ್ಲಿ ಜರುಗಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವವನ್ನು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸ್ವೀಕರಿಸಿ ಮಾತನಾಡಿದರು.
ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ಶ್ರೀಮಂತ ಸಂಸ್ಕೃತಿಯನ್ನು ಒಳಗೊಂಡಿದೆ. ಈ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದರೊಂದಿಗೆ ನಾಡು-ನುಡಿಯ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ತಿಳಿಸಿದರು.
ತನ್ನ ಅಧಿಕಾರ ಅವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುಗಳಿಗೆ ಉಚಿತ ಬಸ್ ಪಾಸ್ ವಿತರಿಸಿದ್ದನ್ನು ಸ್ಮರಿಸಿಕೊಂಡ ಅವರು ಕನ್ನಡದ ಕೆಲಸ ಮಾಡುವವರಿಗೆ ಬೆನ್ನು ತಟ್ಟುವ ಕೆಲಸವನ್ನು ಮಾಡುವ ಮೂಲಕ ನಾಡು-ನುಡಿಯ ಕೆಲಸಕ್ಕೆ ಕೈಜೋಡಿಸುವುದು ಪುಣ್ಯದ ಕೆಲಸ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸೂರಿ ಶ್ರೀನಿವಾಸ್ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಉಚಿತ ಬಸ್ ಪಾಸ್ ನೀಡುವ ಮೂಲಕ ಕನ್ನಡದ ಕೆಲಸಕ್ಕೆ ಶ್ರೀ ಸಗೀರ್ ಅಹಮ್ಮದ್ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿ ಮಂಡ್ಯದಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ “ಕನ್ನಡ ಶ್ರೀ” ಪ್ರಶಸ್ತಿಯನ್ನು ನೀಡಿದ ಬಗ್ಗೆ ಪ್ರಸ್ತಾಪಿಸಿದರು.
ಜಿಲ್ಲಾ ಕ.ಸಾ.ಪ. ಪ್ರಧಾನ ಕಾರ್ಯದರ್ಶಿ ಎಸ್.ಎಸ್. ವೆಂಕಟೇಶ್, ತಾಲ್ಲೂಕು ಕ.ಸಾ.ಪ. ಅಧ್ಯಕ್ಷ ಮಾವಿನಕೆರೆ ದಯಾನಂದ್, ನಗರ ಘಟಕದ ಅಧ್ಯಕ್ಷ ಸಚಿನ್ ಸಿಂಗ್, ಚಿಕ್ಕಮಗಳೂರು ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ವಿಶ್ವನಾಥ್,  ಸುಜಾತ, ಕೆಸವಿನಮನೆ ಭೈರೇಗೌಡ, ಹೆಚ್.ಆರ್. ನಂಜೇಗೌಡ ಹಾಜರಿದ್ದರು.
It is everyone’s duty to strive for the prosperity of the country and language.
Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...