Home Latest News ಕಪ್ಪಕಾಣಿಕೆ ಪಡೆದವರನ್ನು ಪಕ್ಷದಿಂದ ಅಮಾನತು ಮಾಡಬೇಕು
Latest NewschikamagalurHomenamma chikmagalur

ಕಪ್ಪಕಾಣಿಕೆ ಪಡೆದವರನ್ನು ಪಕ್ಷದಿಂದ ಅಮಾನತು ಮಾಡಬೇಕು

Share
Share

ಚಿಕ್ಕಮಗಳೂರು:  ನಗರಸಭೆ ಮಾಜಿ ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಅವರಿಂದ ಕಪ್ಪಕಾಣಿಕೆ ಪಡೆದವರನ್ನು ಪಕ್ಷದಿಂದ ಅಮಾನತು ಮಾಡುವಂತೆ ನಗರಸಭೆ ಮಾಜಿ ಅಧ್ಯಕ್ಷ ವರಸಿದ್ದಿವೇಣುಗೊಪಾಲ್ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ನಗರಸಭೆ ಅಧ್ಯಕ್ಷರು ಅಧಿಕಾರ ಹಿಡಿಯುವ ಸಂದರ್ಭದಲ್ಲಿ ಕೆಲವು ಬಿಜೆಪಿ ಮುಖಂಡರು ಅವರಿಂದ ಹಣ ಪಡೆದು ಅಧ್ಯಕ್ಷರಿಗೆ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಸಾರ್ವಜನಿಕವಾಗಿ ಆರೋಪ ಕೇಳಿಬಂದಿದೆ ಎಂದು ಹೇಳಿದರು.

ಇಂತಹವರನ್ನು ಬಿಜೆಪಿ ಪಕ್ಷದಲ್ಲಿ ಇಟ್ಟುಕೊಳ್ಳುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿ, ನಗರದ ಜನತೆ ಮೆಚ್ಚುವಂತಹ ಕೆಲಸ ಮಾಡಿದ್ದ ನನ್ನನ್ನು ಅಧ್ಯಕ್ಷ ಸ್ಥಾನದಿಂದ ರಾಜೀನಾಮೆ ನೀಡಲಿಲ್ಲ ಎಂಬ ಒಂದೇ ಕಾರಣಕ್ಕೆ ಪಕ್ಷದಿಂದ ಉಚ್ಛಾಟಿಸಲಾಯಿತು. ಆದರೆ, ಅಧ್ಯಕ್ಷರಿಂದ ಅಕ್ರಮವಾಗಿ ಹಣ ಪಡೆದವರಿಗೆ ಪಕ್ಷದಿಂದ ಯಾವುದೇ ಕ್ರಮ ಇಲ್ಲವೇ ಎಂದು ಪ್ರಶ್ನಿಸಿದರು.

ಕಪ್ಪಕಾಣಿಕೆ ಪಡೆಯುವಂತಹ ನೀಚ ಕೆಲಸ ಬಿಜೆಪಿಯಲ್ಲಿಲ್ಲ. ಹೀಗಾಗಿ ಹಣ ಪಡೆದವರನ್ನು ತಕ್ಷಣಕ್ಕೆ ಉಚ್ಛಾಟಿಸುವಂತೆ ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇದ್ರ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.

ನಗರಸಭೆಯಲ್ಲಿ ನಾನು ಅಧ್ಯಕ್ಷನಾಗಿದ್ದಾಗ ಕರವಸೂಲಿಯಲ್ಲಿ ನಮ್ಮ ನಗರಸಭೆ ಎರಡನೇ ಸ್ಥಾನದಲ್ಲಿತ್ತು. ಇದಕ್ಕೆ ಕೇಂದ್ರ ಸರಕಾರ ಬಹುಮಾನ ರೂಪದಲ್ಲಿ ೬ ಕೋಟಿ ರೂ.ಗಳನ್ನು ನಗರಸಭೆಗೆ ನೀಡಿದೆ. ೩೦ ತಿಂಗಳ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದೇನೆ. ಆದರೂ ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಿದರು. ಈಗ ಪಕ್ಷದ ಒಳಗೇ ಇದ್ದುಕೊಂಡು ಅಕ್ರಮ ನಡೆಸುತ್ತಿರುವವರಿಗೆ ಯಾವ ಶಿಕ್ಷೆ ಎಂದು ಕೇಳಿದರು.

Those who received black money should be suspended from the party

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...