Home namma chikmagalur ಕೇಂದ್ರ ಕಾರ್ಮಿಕ ನೀತಿ ವಿರುದ್ಧ ನಗರದಲ್ಲಿ ಬೃಹತ್‌ ಪ್ರತಿಭಟನೆ
namma chikmagalurHomeLatest News

ಕೇಂದ್ರ ಕಾರ್ಮಿಕ ನೀತಿ ವಿರುದ್ಧ ನಗರದಲ್ಲಿ ಬೃಹತ್‌ ಪ್ರತಿಭಟನೆ

Share
Share

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದೇಶದ ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸುವಂತೆ ನೀಡಿರುವ ಕರೆಯ ಭಾಗವಾಗಿ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು,ಕಟ್ಟಡಕಾರ್ಮಿಕರು,ಬ್ಯಾಂಕ್ ನೌಕರರು, ಕಾರ್ಮಿಕಸಂಘಟನೆಗಳ ಜಂಟಿ ಸಮಿತಿ, ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ ನ್ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಭಾರತಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ನಿವೃತ್ತರಾಗಿರುವ ಅಂಗನವಾಡಿ ಕಾರ್ಯಕರ್ತೆಯರುಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಕ್ಕೂ ಹೆಚ್ಚು ವಯೋವೃದ್ಧ ನಿವೃತ್ತ ಅಂಗನವಾಡಿ ನೌಕರರು ತಮ್ಮ ಇಳಿ ವಯಸ್ಸಿನಲ್ಲಿ ಜೀವನ ನಿರ್ವಹಿಸಲು ಅನುಕೂಲ ವಾಗುವಂತೆ ಗ್ರಾಚ್ಯುಟಿ ಸೌಲಭ್ಯವನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಅಂಗನವಾಡಿಕಾರ್ಯಕರ್ತೆಯರನ್ನು ಡಿ.ದರ್ಜೆನೌಕರರನ್ನಾಗಿ ಪರಿಗಣಿಸಬೇಕು, ಪೌಷ್ಟಿಕಾಹಾರ ವಿತರಣೆಗೆ ಜಾರಿತಂದಿರುವ ಎಫ್.ಆರ್ .ಎಸ್ ಪದ್ದತಿಯನ್ನು ಕೈಬಿಡಬೇಕು,ಗೌರವ ಧನದ ಬದಲಾಗಿ ಕನಿಷ್ಟವೇತನ ೨೬೦೦೦ ನಿಗಧಿಗೊಳಿಸಬೇಕು, ನೀಡುತ್ತಿರುವ ಗೌರವಧನ ಹೆಚ್ಚಿಸಬೇಕು,ನಿವೃತ್ತರಿಗೆ ಮಾಸಿಕ ೧೦೦೦೦ ಪಿಂಚಣಿ ಯೋಜನೆ ರೂಪಿಸಬೇಕು,ಸಮಗ್ರಶಿಶುಅಭಿವೃದ್ದಿಯೋಜನೆಗೆ ಕೇಂದ್ರಸರ್ಕಾರ ಅನುದಾನ ಹೆಚ್ಚಿಸಬೇಕು,ನಿವೃತ್ತಿಯ ವಯಸ್ಸನ್ನು ೬೫ಕ್ಕೆ ಏರಿಸಬೇಕು,ಹೆಚ್ಚುವರಿ ಪ್ರಭಾರ ನಿಯೋಜನೆಗಳಿಗೆ ಭತ್ಯೆನೀಡಬೇಕು,ಬೇರೆಇಲಾಖೆಗಳ ಕೆಲಸಕ್ಕೆ ನಿಯೋಜಿಸಬಾರದು ಮಾರಕವಾಗಿರುವ ನಾಲ್ಕು ಸಂಹಿತೆಗಳನ್ನು ಕೂಡಲೆ ಹಿಂಪಡೆಯಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಅಂಗನವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಬಿ. ಅಮ್ಜದ್ ಜಿಲ್ಲಾಧ್ಯಕ್ಷೆ ಗ್ರೇಟ್ಟಾ ಫರ್ನಾಂಡಿಸ್ ವಿವಿಧ ತಾಲೂಕುಗಳ ಅಧ್ಯಕ್ಷರಾದ ,ಶೈಲಾ ಬಸವರಾಜು, ಯು. ಆರ್. ಪಾರ್ವತಮ್ಮ, ,ಶೈಲಾ ನಾರಾಯಣಗೌಡ, ಸವಿತಾ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಸ್. ಎಲ್. ರಾಧಾ ಸುಂದರೇಶ್, ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಸಿ. ಧರ್ಮರಾಜು ಹಾಗೂ ಜಿ. ರಮೇಶ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

Massive protest in the city against central labor policy

Share

Leave a comment

Leave a Reply

Your email address will not be published. Required fields are marked *

Don't Miss

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಭಾನುವಾರ...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ ಒಳ್ಳೆಯದಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ...

Related Articles

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಕಾಫಿ ಸಿಟಿ ಈಗ...

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ...