ಚಿಕ್ಕಮಗಳೂರು: ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ಮಾಡುವ ಧೋರಣೆ ವಿರೋ ಧಿಸಿ ಮತ್ತು ಕಾರ್ಮಿಕರಿಗೆ ಕನಿಷ್ಟ ವೇತನ ಕಾಯ್ದೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬ್ಯಾಂಕ್ ನೌಕರರ ಸಂಘವು ಬುಧವಾರ ನಗರದ ಗುರುನಾಥ ಟಾಕೀಸ್ ಸಮೀಪದ ಕೆನರಾ ಬ್ಯಾಂಕ್ ಕಚೇರಿ ಮುಂ ಭಾಗದಲ್ಲಿ ಪ್ರತಿಭಟನೆ ನಡೆಸಿತು.
ಈ ಕುರಿತು ಮಾತನಾಡಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಬಸವರಾಜ್ ಕೇಂದ್ರ ಸರ್ಕಾರ ಜನ, ಕಾರ್ಮಿಕ, ರೈತ ವಿರೋಧಿ ಧೋರಣೆ, ಕಾರ್ಮಿಕರ ಕಾನೂನುಗಳಿಗೆ ತಿದ್ದುಪಡಿ ತರುವುದ ನ್ನು ಖಂಡಿಸಿ ಇಂದು ರಾಷ್ಟ್ರ ವ್ಯಾಪಿ ನೌಕರರು ಸಾರ್ವತಿಕ ಮುಷ್ಕರ ಹಮ್ಮಿಕೊಂಡು ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದರು.
ನೌಕರರ ಮುಖ್ಯ ಬೇಡಿಕೆಗಳಾದ ಸಾರ್ವಜನಿಕ ಬ್ಯಾಂಕ್‌ಗಳನ್ನು ಬಲಪಡಿಸುವುದು, ಬ್ಯಾಂಕ್ ಮತ್ತು ವಿಮಾ ಕಂಪನಿಗಳ ಖಾಸಗೀಕರಣ ಮತ್ತು ಬಂಡವಾಳ ಹಿಂತೆಗೆತ, ರಾಷ್ಟ್ರೀಕೃತ ಬ್ಯಾಂಕ್ ಮತ್ತು ವಿಮಾ ಕಂ ಪನಿಗಳ ವಿಲೀನವನ್ನು ರದ್ದುಗೊಳಿಸಬೇಕು. ಹೆಚ್ಚಿನ ಉದ್ಯೋಗ ನೇಮಕಾತಿ ಮಾಡಬೇಕು ಎಂದು ಒತ್ತಾಯಿ ಸಿದರು.
ನೌಕರರ ಗುತ್ತಿಗೆ ಆಧಾರ ಹಾಗೂ ಹೊರಗುತ್ತಿಗೆ ನಿಲ್ಲಿಸಬೇಕು. ಎನ್.ಪಿ.ಸಿ. ವ್ಯವಸ್ಥೆಯನ್ನು ವಜಾಗೊ ಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಗ್ರಾಹಕರ ಸುಲಿಗೆಗೆ ಕಾರಣವಾಗಿರುವ ಸರ್ವೀ ಸ್ ಚಾರ್ಚ್ ವ್ಯವಸ್ಥೆಯನ್ನು ನಿಲ್ಲಿಸಬೇಕು. ಎಲ್‌ಐಸಿ ಕಂತುಗಳ ಮೇಲೆ ವಿಧಿಸುತ್ತಿರುವ ಜಿಎಸ್‌ಟಿ ಶುಲ್ಕವ ನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ನೌಕರರಿಗೆ ಬ್ಯಾಂಕ್‌ಗಳಲ್ಲಿ ಸಾಕಷ್ಟು ನೇಮಕಾತಿ ಮಾಡಲು, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. ಪಿಂಚಣಿ ಸೌಲಭ್ಯ ಕಲ್ಪಿಸಿಕೊಡಲು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ, ಅಧಿಕಾರಿಗಳ ಸಂಘ, ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳ, ಜೀವವಿಮಾ ನೌಕರರು, ಸಾಮಾನ್ಯ ವಿಮಾ ನೌಕರರು ಹಾಗೂ ಕಾರ್ಮಿಕರ ಸಂಘಟನೆಗಳೊಂದಿಗೆ ದೇಶಾದ್ಯಂತ ೨೦ ಕೋಟಿ ಕಾರ್ಮಿಕರು ರಾಷ್ಟ್ರದಲ್ಲಿ ಮುಷ್ಕರ ಹಮ್ಮಿಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ.ನಾಗರಾಜ್, ಸಂಘಟನಾ ಕಾರ್ಯದರ್ಶಿ ಉಜ್ವಲ್ ಪಡುಬಿದ್ರಿ, ನೌಕರರಾದ ದಾನೇಂದ್ರ, ಪ್ರದೀಪ್‌ಕುಮಾರ್, ನಿವೃತ್ತ ನೌಕರ ಹೆಚ್.ಟಿ.ಹಾಲಪ್ಪ ಸೇರಿದಂತೆ ಮತ್ತಿತರರಿ ದ್ದರು.
Employees protest against privatization of nationalized banks
Leave a comment