Home namma chikmagalur ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ಅಮಾನತು
namma chikmagalurchikamagalurHomeLatest News

ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ಅಮಾನತು

Share
Share

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.

ಪ್ರಾಂಶುಪಾಲ ರಜಿನಿ ಮತ್ತು ನಿಲಯ ಪಾಲಕ (ಪ್ರಭಾರ) ಸುಂದರ ನಾಯ್ಕ ಅವರನ್ನು ಅಮಾನತು ಮಾಡಿ ಮತ್ತೊಂದು ಆದೇಶವನ್ನು ಕಾಂತರಾಜು ಪಿ.ಎಸ್. ಹೊರಡಿಸಿದ್ದಾರೆ. ಇಬ್ಬರ ಕರ್ತವ್ಯ ಲೋಪ ಮತ್ತು ನಿರ್ಲಕ್ಷತೆಯಿಂದ ವಿದ್ಯಾರ್ಥಿನಿ ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ನ್ಯಾಯಾಧೀಶರಿಂದ ತನಿಖೆ: ಆತ್ಮಹತ್ಯೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಭೆ ಇತ್ತೀಚೆಗೆ ನಡೆದು ತೆಗೆದುಕೊಂಡ ನಿರ್ಧಾರದ ಆಧಾರದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶೋಭಎಸ್, ಇವರನ್ನು ತನಿಖಾಧಿಕಾರಿಯನ್ನಾಗಿ ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಕೆ.ಪಿ.ಶೈಲಾ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಹರಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೯ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಮಿತ ಎಸ್, ಜೂನ್ ೨೮ ರಂದು ವಸತಿ ಶಾಲೆಯ ಸ್ನಾನ ಗೃಹದಲ್ಲಿ ನೇಣು ಬಿಗಿದುಕೊಂಡು ಮೃತ ಪಟ್ಟಿದ್ದಳು. ಇದಕ್ಕೂ ಮೊದಲು ಇದೆ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ೯ನೇ ತರಗತಿಯ ಅಮೂಲ್ಯ ಎನ್. ಎಮ್. ವಸತಿ ಶಾಲೆಯಲ್ಲಿ ನೇಣು ಬೀಗಿದುಕೊಂಡು ಮೃತಪಟ್ಟಿದ್ದಳು. ಮೇಲ್ಕಂಡ ಎರಡೂ ಪ್ರಕರಣಗಳ ಕುರಿತು ತನಿಖೆ ನಡೆಸಿ ವರದಿ ಪಡೆಯಲು ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು ನೇಮಿಸಲಾಗಿದೆ.

ಎರಡೂ ಪ್ರಕರಣದ ಬಗ್ಗೆ ವ್ಯಾಪಕ ಸಂಶಯ ವ್ಯಕ್ತಪಡಿಸಿದ್ದ ಸಾರ್ವಜನಿಕರು/ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿ ತನಿಖೆಗೆ ಒತ್ತಾಯಿಸಿದ್ದರು. ಘಟನೆಗೆ ವಸತಿ ಶಾಲೆಯ ಸಿಬ್ಬಂದಿ ವರ್ಗವೇ ಕಾರಣ ಎನ್ನುವ ಆರೋಪ ವ್ಯಕ್ತವಾಗಿತ್ತು. ತನಿಖೆಯಿಂದ ಆರೋಪ ಸಾಬೀತು ಆದಲ್ಲಿ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದ್ದರು.

ಆದರೂ ಸ್ಥಳೀಯ ಅಧಿಕಾರಿಗಳು ನಡೆಸುವ ತನಿಖೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಸಿಬ್ಬಂದಿ ಅಮಾನತು ಮಾಡಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಿಂದ ತೀವ್ರಗೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Suspension of Principal of Koppa Morarji Desai Residential School

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...