ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆಯನ್ನು ಆರಂಭಿಸಲಾಗಿದ್ದು, ಅಧ್ಯಕ್ಷರಾಗಿ ಕೆ.ಟಿ. ಆನಂದ್, ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್, ಮಹಿಳಾ ಅಧ್ಯಕ್ಷರಾಗಿ ಕೆಂಪಮ್ಮ, ಗೌರವ ಅಧ್ಯಕ್ಷರಾಗಿ ಅಜಯ್ ಕುಮಾರ್, ಉಪಾಧ್ಯಕ್ಷರಾಗಿ ಕುಮಾರ್ ನಾಯ್ಕ, ಗೌರವ ಕಾರ್ಯದರ್ಶಿಯಾಗಿ ಚನ್ನಬಸಪ್ಪ ತಡಗ ಇವರುಗಳನ್ನು ಆಯ್ಕೆಮಾಡಲಾಗಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ. ಆನಂದ್, ಸಂಘದ ವರಿಷ್ಟರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ್, ಕೆ.ಎಸ್. ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಣಗಾಲ್ ಮೂರ್ತಿ ನೇತೃತ್ವದಲ್ಲಿ ಈಗಾಗಲೇ ೧೮ ಜಿಲ್ಲೆಯಲ್ಲಿ ಸಂಘಟನೆಯನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯ ವರಿಷ್ಟರ ತೀರ್ಮಾನದಂತೆ ಜು.೨ ರಂದು ಇಲ್ಲಿನ ಎಪಿಎಂಸಿಯಲ್ಲಿ ಜಿಲ್ಲಾಮಟ್ಟದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಧ್ಯದಲ್ಲೇ ತಾಲ್ಲೂಕು ಮಟ್ಟದ ಸಂಘಟನೆಗಳನ್ನು ರಚನೆ ಮಾಡಲಾಗುವುದೆಂದು ತಿಳಿಸಿದರು.
ರೈತ ಸಂಘದ ಕಡೂರು ತಾಲ್ಲೂಕು ಅಧ್ಯಕ್ಷರಾಗಿ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಮತ್ತು ಮಲ್ಲಪ್ಪ, ಉಪಾಧ್ಯಕ್ಷರುಗಳಾಗಿ ಮಂಜುನಾಥ್ ಮತ್ತು ಬ್ಯಾಗಡೇಹಳ್ಳಿ ಬಸವರಾಜ್ ಇವರುಗಳನ್ನು ಆಯ್ಕೆಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಅಜಯ್ ಕುಮಾರ್, ಬಸವರಾಜ್, ಕುಮಾರ್ ನಾಯ್ಕ, ಕೆ.ಆರ್. ವಿಜಯ್ ಕುಮಾರ್, ಕೆಂಪಮ್ಮ ಮತ್ತಿತರರು ಉಪಸ್ಥಿತರಿದ್ದರು.
New Karnataka State Farmers’ Association comes into existence
Leave a comment