Home namma chikmagalur ಬೀರೂರು-ಕಡೂರು ಠಾಣೆಯ ಪೊಲೀಸರಿಂದ ಅಂತ‌ರ್ ಜಿಲ್ಲಾ ಸರಗಳ್ಳರ ಬಂಧನ
namma chikmagalurHomeKadurLatest News

ಬೀರೂರು-ಕಡೂರು ಠಾಣೆಯ ಪೊಲೀಸರಿಂದ ಅಂತ‌ರ್ ಜಿಲ್ಲಾ ಸರಗಳ್ಳರ ಬಂಧನ

Share
Share

ಕಡೂರು: ಬೀರೂರು ಹಾಗೂ ಕಡೂರು ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಅಂತ‌ರ್ ಜಿಲ್ಲಾ ಸರಗಳ್ಳರನ್ನು ಬಂಧಿಸಿ, ಅವರಿಂದ ₹6.40 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.

ಜೂನ್‌ ತಿಂಗಳಿನಲ್ಲಿ ಬೀರೂರು ವ್ಯಾಪ್ತಿಯ ಕುಡ್ಲೂರು ಗೇಟ್‌ ಬಳಿ ಹಾಗೂ ಕಡೂರು ವ್ಯಾಪ್ತಿಯ ತಂಗಲಿ, ಚಟ್ನಳ್ಳಿ ಗ್ರಾಮಗಳಲ್ಲಿ ಒಂಟಿ ಮಹಿಳೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ, ಸರಗಳ್ಳತನ ನಡೆದಿರುವ ಕುರಿತಂತೆ ಬೀರೂರು, ಕಡೂರು ಹಾಗೂ ಸಿಂಗಟಗೆರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಆರೋಪಿಗಳನ್ನು ಬಂಧಿಸಲು ಬೀರೂರು ಸರ್ಕಲ್‌ ಇನ್‌ಸ್ಪೆಕ್ಟರ್‌ ಶ್ರೀಕಾಂತ್ ಎಸ್.ಎನ್., ಕಡೂರು ಸರ್ಕಲ್‌ ಇನ್‌ಸ್ಪೆಕ್ಟರ್‌ ರಫೀಕ್ ಎಂ. ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎರಡು ತಂಡಗಳನ್ನು ರಚಿಸಿದ್ದರು.

ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಾದ ಬೆಳಗಾವಿ ಜಿಲ್ಲೆಯ ಶಹಬಂದರ್‌ ಗ್ರಾಮದ ಕನ್ನೇಶ್ವರ ಶಿವಪುತ್ರ ಮಠದವರ್, ಬಸವರಾಜ ಸುರೇಶ ಅಗಸಾಗಿ ಮತ್ತು ರಾಜು ಯಲಗುಂಡ ಮಠದವರ್ ಎಂಬುವರನ್ನು ಬಂಧಿಸಿ ಅವರಿಂದ ಬೀರೂರು ಪ್ರಕರಣದಲ್ಲಿ 20 ಗ್ರಾಂ, ಕಡೂರು ಪ್ರಕರಣದಲ್ಲಿ 21.5 ಗ್ರಾಂ ಮತ್ತು ಸಿಂಗಟಗೆರೆ ಪ್ರಕರಣದಲ್ಲಿ 20 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ರಾಣೆಬೆನ್ನೂರು ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಪಲ್ಸರ್‌ ಬೈಕ್‌ ಅನ್ನು ಕೃತ್ಯಕ್ಕೆ ಬಳಸಿ, ಬಳಿಕ ಅದನ್ನು ತುಮಕೂರು ಜಿಲ್ಲೆಯ ಶಿರಾ ಬಳಿಯ ಬಾವಿ ಒಂದರಲ್ಲಿ ಎಸೆದು ಹೋಗಿದ್ದರು. ಅದನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಿಎಸ್‌ಐಗಳಾದ ಜಿ.ಆರ್‌.ಸಜಿತ್ ಕುಮಾರ್, ಧನಂಜಯ್, ಲೀಲಾವತಿ, ತಿಪ್ಪೇಶ್, ರಂಗನಾಥ್, ಶಾಹಿದ್ ಅಫ್ರಿದಿ, ಗಣಪತಿ ಆರ್. ಶೇರುಗಾರ್, ಎಎಸ್‌ಐ ವೇದಮೂರ್ತಿ, ಕೃಷ್ಣಮೂರ್ತಿ, ಸಿಬ್ಬಂದಿ ಡಿ.ವಿ.ಹೇಮಂತ್ ಕುಮಾರ್, ವಸಂತ್ ಕುಮಾರ್, ರಾಜು, ರೇಣುಕಮೂರ್ತಿ, ಸಿದ್ದಾನಾಯಕ, ಮಂಜಾನಾಯ್ಕ, ಶಿವಕುಮಾ‌ರ್, ರಾಜಪ್ಪ, ಮಧುಕುಮಾರ, ಹರೀಶ್, ಧನಪಾಲ ನಾಯ್ಕ, ಮಹಮ್ಮದ್ ರಿಯಾಜ್, ಸ್ವಾಮಿ, ಪರಮೇಶ್ವರ ನಾಯ್ಕ, ರೇಣುಕಾ ಪ್ರಸಾದ್, ಬೀರೇಶ, ಈಶ್ವರಪ್ಪ, ದೇವರಾಜ, ಶ್ರೀಧರ, ಅರುಣ್ ಕುಮಾರ್, ಹರೀಶ್, ಅಭಿಷೇಕ್, ನಜೀರ್, ಕಿಶೋರ್, ಚಾಲಕರಾದ ನಾಗೇಗೌಡ, ನವೀನ, ಅನೂಪ್ ಕುಮಾರ್ ಕೆ.ಎಲ್, ಜಿಲ್ಲಾ ತಾಂತ್ರಿಕ ವಿಭಾಗದ ರಬ್ಬಾನಿ ಹಾಗೂ ನಯಾಜ್ ಅಂಜುಮ್ ಕಾರ್ಯಾಚರಣೆಯಲ್ಲಿ ಇದ್ದರು. ಅಪರಾಧ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ಎಸ್‌.ಪಿ ಬಹುಮಾನ ಘೋಷಿಸಿದ್ದಾರೆ.

Inter-district drug gang arrested by Birur-Kadur police station

Share

Leave a comment

Leave a Reply

Your email address will not be published. Required fields are marked *

Don't Miss

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಭಾನುವಾರ...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ ಒಳ್ಳೆಯದಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ...

Related Articles

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಕಾಫಿ ಸಿಟಿ ಈಗ...

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ...