Home State News ದೇವನಹಳ್ಳಿ 1,777 ಎಕರೆ ಭೂ ಸ್ವಾಧೀನ ನೋಟಿಫಿಕೇಶನ್ ರದ್ದು
State News

ದೇವನಹಳ್ಳಿ 1,777 ಎಕರೆ ಭೂ ಸ್ವಾಧೀನ ನೋಟಿಫಿಕೇಶನ್ ರದ್ದು

Share
Share

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಸುತ್ತಮುತ್ತಲಿನ ಒಟ್ಟ 13 ಹಳ್ಳಿಗಳ 1,777 ಎಕರೆ ಭೂ ಸ್ವಾಧೀನ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ರೈತರು, ಹೋರಾಟಗಾರರು, ಸಂಘಟನೆಗಳ ಸಭೆಯಲ್ಲಿ ನೋಟಿಫಿಕೇಶನ್ ರದ್ದು ಮಾಡುವ ಬಗ್ಗೆ ಘೋಷಣೆ ಮಾಡಿದರು.

ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು, 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಸರ್ಕಾರ ನೋಟಿಫಿಕೇಶನ್ ಹೊರಡಿಸಿತ್ತು. ಕೃಷಿ ಭೂಮಿ ಭೂಸ್ವಾಧೀನ ಮಾಡದಂತೆ ರೈತರು ಹೋರಾಟ ಮಾಡುತ್ತಿದ್ದರು. ಕೃಷಿ ಚಟುವಟಿಕೆಗಳು ಮುಂದುವರೆಸುವ ದೃಷ್ಟಿಯಿಂದ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನ ರದ್ದು ಮಾಡಿರುವುದಾಗಿ ಸ್ಪಷ್ಟಪಡಿಸಿದರು. ಈ ಮೂಲಕ 1777 ಎಕರೆ ಕೃಷಿ ಜಮೀನು ಉಳಿಸಿಕೊಳ್ಳಲು 1197 ನಡೆದ ರೈತರ ಹೋರಾಟಕ್ಕೆ ಬಹುದೊಡ್ಡ ಜಯಸಿಕ್ಕಿದೆ.

ಒಂದು ವೇಳೆ ರೈತರು ಸ್ವಯಂ ಪ್ರೇರಿತರಾಗಿ ಜಮೀನು ಕೊಟ್ಟರೆ ಆ ಭೂಮಿ ಸರ್ಕಾರ ಪಡೆಯಲಿದೆ. ಜೊತೆಗೆ ಸೂಕ್ತ ಪರಿಹಾರ ಕೊಡುವ ಜೊತೆಗೆ ಅಭಿವೃದ್ಧಿಪಡಿಸಿದ 50% ಭೂಮಿಯನ್ನು ಜಮೀನು ಕೊಡುವ ರೈತರಿಗೆ ಕೊಡಲಾಗುತ್ತದೆ. ಸರ್ಕಾರದ ಈ ನಿರ್ಧಾರ ದೇವನಹಳ್ಳಿ ಜಮೀನಿಗೆ ಮಾತ್ರ ಅನ್ವಯ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ನಟ ಪ್ರಕಾಶ್ ರಾಜ್, ಇದು 3 ವರ್ಷಗಳ ಪ್ರತಿಭಟನೆಗೆ ಸಿಕ್ಕ ಜಯ. ಇದು ರೈತರ ಜಯ ಇದು. ಸಂಘಟನೆಗಳ ಜಯ. ಐತಿಹಾಸಿಕ ಚಳುವಳಿಯ ಜಯ ಇದು. ಸರ್ಕಾರಕ್ಕೆ, ಸಿಎಂಗೆ ಧನ್ಯವಾದಗಳನ್ನು ಹೇಳ್ತೀನಿ. ದೇವನಹಳ್ಳಿ ಹೋರಾಟಕ್ಕೆ ಜಯವಾಗಿದೆ. ಮುಂದಿನ ಹೋರಾಟದ ಬಗ್ಗೆ ಮುಂದೆ ನೋಡೋಣ ಎಂದರು.

ರೈತ ನಾಯಕ ಬಡಗಲಪುರ ನಾಗೇಂದ್ರ ಮಾತಾಡಿ, ಇದೊಂದು ಸಂಘಟಿತ ಹೋರಾಟ. ಎಲ್ಲರು ಒಟ್ಟಾಗಿ ಹೋರಾಟ ಮಾಡಿದ್ವಿ. ಇದೊಂದು ಐತಿಹಾಸಿಕ ಜಯ. ಯಾವುದೇ ಕೃಷಿ ಭೂಮಿಗೆ ಸಮಸ್ಯೆ ಮಾಡಿದ್ರೆ ಹೋರಾಟ ಮಾಡ್ತೀವಿ. ಫಲವತ್ತಾದ ಭೂಮಿ ಸ್ವಾಧೀನ ಮಾಡಿಕೊಳ್ಳಬಾರದು. ಭೂಮಿ ಬಲಾತ್ಕಾರವಾಗಿ ವಶ ಮಾಡಿಕೊಂಡರೇ ಹೋರಾಟ ಮಾಡ್ತೀವಿ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯ ಇದು. ಇಲ್ಲಿ ಯಾವುದೇ ಮಾಫಿಯಾದ ಕೈಗಳು ಇಲ್ಲ. ಇದು ರೈತರು, ಮಹಿಳೆಯರ ಹೋರಾಟಕ್ಕೆ ಸಿಕ್ಕ ಜಯ ಎಂದು ಸಂತಸ ವ್ಯಕ್ತಪಡಿಸಿದರು.
Devanahalli 1777 acres land acquisition notification cancelled
Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ರಾಜ್ಯದಲ್ಲಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...