Home namma chikmagalur ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ
namma chikmagalurchikamagalurHomeLatest News

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

Share
Share

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ.

ಒಂದು ತಿಂಗಳಿನಿಂದ ಭುವನೇಶ್ವರಿ ಗುಂಪಿನ 25, ಬೀಟಮ್ಮ 2 ಗುಂಪಿನ 8 ಕಾಡಾನೆಗಳು ಜಿ. ಹೊಸಳ್ಳಿ, ಟಾಟಾ ಎಸ್ಟೇಟ್, ಸಿಲ್ವರ್ ಕಾನು ಎಸ್ಟೇಟ್, ಪಡಿಯ ಕಾಲೊನಿ, ಹೊಸಪುರ, ಹನುಮನಹಳ್ಳಿ ಗ್ರಾಮಗಳಲ್ಲಿ ನಿರಂತರವಾಗಿ ತಿರುಗಾಡುತ್ತಾ ಸಾರ್ವಜನಿಕರಿಗೆ ಉಪಟಳ ನೀಡುತ್ತಿವೆ.

ಬೀಟಮ್ಮ ಗುಂಪಿನ 8 ಆನೆಗಳು ಮೂರು ದಿನದಿಂದ ಹೊಸಪುರ ಗ್ರಾಮದಲ್ಲಿ ಬೀಡುಬಿಟ್ಟಿವೆ. ಭುವನೇಶ್ವರಿ ಗುಂಪಿನಿಂದ ಬೇರ್ಪಟ್ಟ ಮೂರು ಕಾಡಾನೆಗಳು ಜಿ. ಹೊಸಳ್ಳಿಯಿಂದ ಬುಧವಾರ ರಾತ್ರಿ ಹೊರಟು ಬೆಳಿಗ್ಗೆ 5.45ಕ್ಕೆ ಆನೆದಿಬ್ಬ ಗ್ರಾಮದ ಮೂಲಕ ತುಮಕೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಸ್ಕೇಬೈಲ್ ಗ್ರಾಮದ ಮೂಲಕ ಕಮ್ಮರಗೋಡು ಗ್ರಾಮದತ್ತ ಸಾಗಿವೆ.

ಭುವನೇಶ್ವರಿ ಹಾಗೂ ಬೀಟಮ್ಮ ಎರಡು ಗುಂಪಿನ ಕಾಡಾನೆಗಳು ಜಿ.ಹೊಸಳ್ಳಿ ವ್ಯಾಪ್ತಿಯಲ್ಲಿ ಬೀಡುಬಿಟ್ಟಿವೆ. ಗೋಣಿಬೀಡು ಹೋಬಳಿಯಲ್ಲಿಯೇ 40ಕ್ಕೂ ಅಧಿಕ ಕಾಡಾಣೆಗಳು ತಿರುಗಾಡುತ್ತಿದ್ದು, ರೈತರ ಬೆಳೆಯನ್ನು ದ್ವಂಸಗೊಳಿಸುತ್ತಿವೆ. ಅರಣ್ಯ ಇಲಾಖೆಯ ಕಾಡಾನೆ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾಡಾನೆಯಿರುವ ಪ್ರದೇಶದಲ್ಲಿ ಬೀಡು ಬಿಟ್ಟಿದ್ದಾರೆ. ಟಾಸ್ಕ್ ಪೋರ್ಸ್ ಸಿಬ್ಬಂದಿ ಅರ್ಧ ಗಂಟೆಗೊಮ್ಮೆ ವಾಟ್ಸ್‌ಆ್ಯಪ್‌ ಗ್ರೂಪ್ ಮೂಲಕ ಕಾಡಾನೆಗಳು ಇರುವ ಗ್ರಾಮಗಳ ಜನರಿಗೆ ಮಾಹಿತಿ ರವಾನಿಸುತ್ತಾ ಪಟಾಕಿ ಸಿಡಿಸಿ ಜನವಸತಿ ಪ್ರದೇಶದತ್ತ ಲಗ್ಗೆ ಇಡದಂತೆ ಎಚ್ಚರ ವಹಿಸಿದ್ದಾರೆ.

ಜಿ.ಹೊಸಳ್ಳಿ ಗ್ರಾಮದ ದೀಪಕ್, ರಾಜೇಗೌಡ, ಪೂರ್ಣೇಶ್, ವಿನಾಯಕ ಎಸ್ಟೇಟ್, ಶೈಲೇಶ್, ಯೋಗೇಶ್, ಹನುಮನಹಳ್ಳಿ ಗ್ರಾಮದ ಆದರ್ಶ, ಕಮ್ಮರಗೋಡು ಗ್ರಾಮದ ಅರುಣ್ ಸೆರಾವೋ, ಕಣ್ಣಪ್ಪ ಗೌಡ, ಕಸ್ಕೇಬೈಲ್ ಗ್ರಾಮದ ಬಿಳಿಗೌಡ ಸೇರಿದಂತೆ 25ಕ್ಕೂ ಹೆಚ್ಚು ರೈತರ ತೋಟಗಳನ್ನು ನಾಶಪಡಿಸಿವೆ. ವಾಟ್ಸ್‌ಆ್ಯಪ್‌ ಗ್ರೂಪ್ ನಲ್ಲಿ ಟಾಸ್ಕ್ ಫೋರ್ಸ್ ಸಿಬ್ಬಂದಿ ಸಂದೇಶ ರವಾನಿಸುತ್ತಿದ್ದರೂ ನಿರ್ದಿಷ್ಟವಾಗಿ ಯಾವ ಸ್ಥಳದಲ್ಲಿ ಕಾಡಾನೆ ಗುಂಪು ಇರುತ್ತವೆಂದು ತಿಳಿಯದೆ ಜನ ಕಂಗಾಲಾಗಿದ್ದಾರೆ.

ಅಗತ್ಯ ವಸ್ತುಗಳ ಖರೀದಿಗೆ ತೆರಳಲು ಜನ ಭಯಪಡುತ್ತಿದ್ದಾರೆ. ಸಂಜೆ 5 ರ ನಂತರ ಗೋಣಿಬಿಡು ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಜನರಿಲ್ಲದೆ ಬಿಕೋ ಎನ್ನುತ್ತಿವೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಗ್ರಾಮಸ್ಥರು ಹಾಗೂ  ಗೋಣಿಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಎಸ್.ದಿನೇಶ್ ಒತ್ತಾಯಿಸಿದರು.

More than 40 wild elephants attacked in three groups

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನೂತನ ಸಂಚಾರ ವ್ಯವಸ್ಥೆ

ಚಿಕ್ಕಮಗಳೂರು: : ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು ಗಿರಿಭಾಗಕ್ಕೆ ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು....

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ...

Related Articles

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...

ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚನೆ ಕಡ್ಡಾಯ 

ಚಿಕ್ಕಮಗಳೂರು:  ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು...

ವೇದಾನದಿ ನೀರಿನ ಹಂಚಿಕೆಯಲ್ಲಿ ರೈತರು ಸಂಯಮ ಕಾಪಾಡಬೇಕು

ಚಿಕ್ಕಮಗಳೂರು: ವೇದಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರೈತರು ಸಂಯಮ ಕಾಪಾಡಬೇಕು. ಜೊತೆಗೆ ಕೆರೆ ತುಂಬಿಸುವ...