ಚಿಕ್ಕಮಗಳೂರು: ನೇಣು ಬಿಗಿದುಕೊಂಡು ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯ ಪೊಲೀಸ್ ಕ್ವಾಟ್ರಸ್ನಲ್ಲಿ ಗುರುವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೇಬಲ್ ಕಾಂತರಾಜ್ (೪೫) ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಪಘಾತದಲ್ಲಿ ಬಲಗಾಲು ಕಳೆದುಕೊಂಡು ಕೃತಕ ಕಾಲು ಜೋಡಣೆ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು.
ಅಪಘಾತದಲ್ಲಿ ಕಾಲು ಕಳೆದು ಕೊಂಡಾಗಿನಿಂದ ಮಾನಸಿಕವಾಗಿ ಖಿನ್ನತೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಈ ಹಿಂದೆ ನಕ್ಸಲ್ ನಿಗ್ರಹ ಪಡೆ ಹಾಗೂ ಕಳಸ ಠಾಣೆಯಲ್ಲಿ ಕಾಂತರಾಜ್ ಕರ್ತವ್ಯ ನಿರ್ವಹಿಸಿದ್ದು.
ಅವರ ಕುಟುಂಬಸ್ಥರು ಊರಿಗೆ ತೆರಳಿದ್ದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Head constable committed suicide by hanging himself
Leave a comment