ಚಿಕ್ಕಮಗಳೂರು: ವಿದ್ಯಾರ್ಥಿಗಳು ದೃಢ ಆತ್ಮವಿಶ್ವಾಸ, ಉತ್ತಮ ನಡವಳಿಕೆಯನ್ನು ಮೈಗೂಡಿಸಿಕೊಳ್ಳ ಬೇಕೆಂದು ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ತಿಳಿಸಿದರು.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜ ಸೇವೆ, ಮಾನವೀಯ ಮೌಲ್ಯಗಳು ಮತ್ತು ತತ್ವಗಳು, ಸಾಮಾಜಿಕ ಕಳಕಳಿ, ಪೋಷಕರಿಗೆ ಗುರು ಹಿರಿಯರಿಗೆ ಗೌರವಕೊಡುವುದು, ಬದುಕಿನಲ್ಲಿ ಧನಾತ್ಮಕತೆಯನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.
ಹೆಚ್ಚುವರಿ ಪೊಲೀಸ್ ಮುಖ್ಯಾಧೀಕಾರಿ ಸಿ.ಟಿ.ಜಯಕುಮಾರ್ ಮತ್ತು ಪೊಲೀಸರ ಕುಟುಂಬದ ಸದಸ್ಯರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಶೇ. ೯೦ ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳಿಸಿದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಒಟ್ಟು ೩೦ ಮಕ್ಕಳಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ಪ್ರೋತ್ಸಾಹ ಧನ ಮತ್ತು ಪ್ರಶಂಸನಾ ಪತ್ರಗಳನ್ನು ವಿತರಿಸಲಾಯಿತು.
Talent Award from the District Police Department
Leave a comment