Home namma chikmagalur ದತ್ತು ಸಂಸ್ಥೆಯ ಸಿಬ್ಬಂದಿ ಆಯಾ ಅಮಾನತು
namma chikmagalurchikamagalurHomeLatest News

ದತ್ತು ಸಂಸ್ಥೆಯ ಸಿಬ್ಬಂದಿ ಆಯಾ ಅಮಾನತು

Share
Share

ಚಿಕ್ಕಮಗಳೂರು: ನಗರದ ದತ್ತು ಸಂಸ್ಥೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗು ಸುಟ್ಟ ಗಾಯದಿಂದ ನರಳುವಂತಾಗಿದ್ದು, ಪ್ರಕರಣ ಸಂಬಂಧ ದತ್ತು ಸಂಸ್ಥೆಯ ಆಯಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಮಾನತ್ತು ಗೊಳಿಸಲಾಗಿದೆ. ಜತೆಗೆ ಮಗುವಿಗೆ ಪ್ಲಾಸ್ಟಿಕ್ ಸರ್ಜರಿ ನಡೆಯಲಿದೆ.

ದತ್ತು ಸಂಸ್ಥೆಯಲ್ಲಿ ಮಗುವನ್ನು ಸ್ನಾನ ಮಾಡಿಸಲು ಸ್ನಾನಗೃಹಕ್ಕೆ ಕರೆದೊಯ್ದು ಗ್ಲಿಸರ್‌ನಿಂದ ಬಕೆಟ್‌ಗೆ ಬಿಸಿನೀರು ಬಿಟ್ಟು ಮಗು ಶೌಚ ಮಾಡಿದ್ದನ್ನು ಸ್ವಚ್ಛಗೊಳಿಸಲು ಸಂಸ್ಥೆಯ ಆಯಾ ಹೊರಗೆ ತೆರಳಿದ್ದರು. ಕುದಿಯುವ ಬಿಸಿನೀರು ಬಕೆಟ್ ತುಂಬಿ ಸ್ನಾನಗೃಹದಲ್ಲಿ ಹರಿದಿದ್ದು, ಸ್ನಾನಗೃಹದ ನೆಲಹಾಸು ಮೇಲೆ ಕುಳಿತ್ತಿದ್ದ ಮಗುವಿನ ಸುತ್ತ ಬಿಸಿನೀರು ಹರಿದಿದೆ. ಇದರಿಂದ ಮಗುವಿನ ಸೊಂಟದ ಕೆಳಭಾಗದಲ್ಲಿ ಸುಟ್ಟು ಹೋಗಿದೆ. ಸಿಬ್ಬಂದಿಯ ಬೇಜವಾಬ್ದಾರಿಯಿಂದ ಮಗು ನರಳುವಂತಾಗಿದೆ.

ಸರ್ಕಾರಿ ವಿಶೇಷ ದತ್ತು ಸಂಸ್ಥೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ದತ್ತು ಸಂಸ್ಥೆಯಲ್ಲಿ ಅನಾಥ ಮಕ್ಕಳನ್ನು ರಕ್ಷಿಸಿ ಆರೈಕೆ ಮಾಡಲಾಗುತ್ತದೆ. ಜು.೯ ರಂದು ಘಟನೆ ನಡೆದಿದ್ದರು ಮೇಲಾಧಿಕಾರಿಗಳಿಗೆ ತಿಳಿಯದಂತೆ ಸಿಬ್ಬಂದಿ ಮುಚ್ಚಿಟ್ಟಿದ್ದರು. ಮಗು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದತ್ತು ಸಂಸ್ಥೆಯಲ್ಲಿ ಆಯಾ ಕೆಲಸ ನಿರ್ವಹಿಸುವ ಲತಾ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದತ್ತು ಸಂಸ್ಥೆಯ ಸಿಬ್ಬಂದಿಗೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ನೋಟಿಸ್ ನೀಡಿದ್ದಾರೆ.

The staff of the adoption agency were suspended.

Share

Leave a comment

Leave a Reply

Your email address will not be published. Required fields are marked *

Don't Miss

ರೈತಸಂಘ ಸದೃಢಗೊಳಿಸಲು ಜಿಲ್ಲಾ ಸಮಿತಿಗೆ ಪದಾಧಿಕಾರಿ ನಮೇಕ

ಚಿಕ್ಕಮಗಳೂರು:  ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲೆಯಲ್ಲಿ ಸಂಘಟನಾತ್ಮಕವಾಗಿ ಬಲಗೊಳ್ಳುತ್ತಿದ್ದು, ಇನ್ನೂ ಹೆಚ್ಚು ಸದೃಢಗೊಳಿಸಲು ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಿ. ಮಹೇಶ್ ಹೇಳಿದರು. ಅವರು...

ನೊಳಂಬ ಸಮಾಜದ ಅವಮಾನ ಖಂಡಿಸಿ ಡಿ.ಎಸ್. ಸುರೇಶ್ ಮನೆ ಎದುರು ಪ್ರತಿಭಟನೆ

ಚಿಕ್ಕಮಗಳೂರು:  ಅಜ್ಜಂಪುರದ ಗುರು ಸಿದ್ದರಾಮೇಶ್ವರ ಭವನದಲ್ಲಿ ಏರ್ಪಡಿಸಲಾಗಿದ್ದ ನೊಳಂಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಶಾಸಕ ಡಿ.ಎಸ್ ಸುರೇಶ್‌ರವರು ಸಮಾಜದ ಬಗ್ಗೆ ಉದ್ದಟತನದ ಹೇಳಿಕೆ...

Related Articles

ರೈತರ ಅನುಕೂಲಕ್ಕಾಗಿ ಚಾನಲ್ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹ

ಚಿಕ್ಕಮಗಳೂರು: ಅಯ್ಯನಕೆರೆ ಕೋಡಿಬಿದ್ದು ಹರಿಯುವ ನೀರಿನಿಂದ ಕೆರೆಗಳನ್ನು ತುಂಬಿಸುವ ಕಾಮಗಾರಿ ಎಂದು ಸರ್ಕಾರ ಅನುಮೋದನೆ ನೀಡಿದ್ದು,...

ರೈತರನ್ನು ಆರ್ಥಿಕ ಸದೃಢರನ್ನಾಗಿ ಮಾಡುವುದು ಅಗತ್ಯ

ಚಿಕ್ಕಮಗಳೂರು: ದೇಶದ ಜನತೆಗೆ ಅನ್ನ ನೀಡುವ ಅನ್ನದಾತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಅಗತ್ಯ ಎಂದು ಶಾಸಕ...

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...