Home namma chikmagalur ಅಕ್ರಮ ಮನೆ ಮಂಜೂರು: ಬಿಲ್ ಕಲೆಕ್ಟರ್-ಪಿಡಿಒಗೆ ಒಂದು ವರ್ಷ ಸಜೆ
namma chikmagalurchikamagalurCrime NewsHomeLatest News

ಅಕ್ರಮ ಮನೆ ಮಂಜೂರು: ಬಿಲ್ ಕಲೆಕ್ಟರ್-ಪಿಡಿಒಗೆ ಒಂದು ವರ್ಷ ಸಜೆ

Share
Share

ಚಿಕ್ಕಮಗಳೂರು: ಅಕ್ರಮವಾಗಿ ತನ್ನ ತಾಯಿಯ ಹೆಸರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಿಕೊಂಡಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ತಲಾ ಒಂದು ವರ್ಷ ಸಜೆ ಹಾಗೂ ೧೫ ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಅವರು ತೀರ್ಪು ನೀಡಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಳಗೂರು ಗ್ರಾಮ ಪಂಚಾಯಿತಿಯಲ್ಲಿ ೨೦೧೦-೧೧ನೇ ಸಾಲಿನಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಎಂ.ಎನ್.ಮಂಜುನಾಥ್ ತನ್ನ ತಾಯಿಗೆ ಅರ್ಹತೆ ಇಲ್ಲದಿದ್ದರೂ ಸರ್ಕಾರದ ಬಸವ ವಸತಿ ಯೋಜನೆಯಡಿ ಕಾನೂನು ಬಾಹಿರವಾಗಿ ಮನೆ ಮಂಜೂರು ಮಾಡಿಸಿಕೊಂಡು ಈ ಸಂಬಂಧ ಸರ್ಕಾರದಿಂದ ಬಿಡುಗಡೆಯಾದ ಹಣವನ್ನೂ ಪಡೆದುಕೊಂಡಿದ್ದರು. ಗ್ರಾಮ ಪಂಚಾಯಿತಿಯಲ್ಲಿ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭ ಮಂಜುನಾಥನ ತಾಯಿಯನ್ನು ಆಯ್ಕೆ ಮಾಡಿರಲಿಲ್ಲ. ಆದರೆ ಫಲಾನುಭವಿಗಳ ಪಟ್ಟಿಯನ್ನು ತಾಲ್ಲೂಕು ಪಂಚಾಯಿತಿಗೆ ಸಲ್ಲಿಸುವ ಸಂದರ್ಭ ಮಂಜುನಾಥ ಅಂದಿನ ಪಿಡಿಒ ಕೆ.ಎಂ.ಲಕ್ಷ್ಮಣಗೌಡ ಜೊತೆ ಸೇರಿ ತನ್ನ ತಾಯಿಯ ಹೆಸರನ್ನು ಸೇರಿಸಿದ್ದರು.

ಈ ಸಂಬಂಧ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಹಾಗೂ ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅಂದಿನ ಲೋಕಾಯುಕ್ತ ಡಿವೈಎಸ್‌ಪಿ ಪ್ರಸನ್ನ ವಿ.ರಾಜು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಗೌರವಾನ್ವಿತ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಅವರು ಆರೋಪಿಗಳಿಗೆ ಒಂದು ವರ್ಷ ಸಜೆ ಹಾಗೂ ೧೫ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಲೋಕಾಯುಕ್ತದ ಪರವಾಗಿ ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕ ವಿ.ಟಿ.ಥೋಮಸ್ ವಾದ ಮಂಡಿಸಿದ್ದರು.

Bill collector-PDO sentenced to one year in jail

Share

Leave a comment

Leave a Reply

Your email address will not be published. Required fields are marked *

Don't Miss

ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕಿ ನಯನ ಮೋಟಮ್ಮ ತಿಳಿಸಿದರು. ಅವರು ಇಂದು ಮಳಲೂರು,...

ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !

ಚಿಕ್ಕಮಗಳೂರು: ಸೋಷಿಯಲ್‌ ಮಿಡಿಯಾದಲ್ಲಿ ಪರಿಚಯವಾದ ಹುಡುಗ ,ಹುಡುಗಿಯರು ಪ್ರೀತಿಸಿ ಮೋಸ ಹೋಗುವ ಹಲವು ಘಟನೆಗಳಿವೆ. ಪಾಕಿಸ್ತಾನದ ಗೃಹಿಣಿ ಭಾರತದ ಯುವಕ,ಬಾಂಗ್ಲಾದೇಶ ಹುಡುಗ ಭಾರತದ ಯುವತಿ ಪ್ರೀತಿಯ ಜಾಲದಲ್ಲಿ ಮುಳುಗಿದ ಸುದ್ದಿಗಳನ್ನು ಕೇಳಿತ್ತಿರುವಾಗಲೇ...

Related Articles

ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು

ಕಡೂರು: ತಾಲ್ಲೂಕಿನ ಕನಕರಾಯನಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ...

ಬೀದಿ ನಾಯಿಗಳ ಹಾವಳಿ: 11 ಜನರಿಗೆ ಗಾಯ

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್, ಜಿಲ್ಲಾ ಪಂಚಾಯಿತಿ‌ ಕಚೇರಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,...

ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಧರ್ಮಸ್ಥಳ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ನಿಷ್ಪಕ್ಷಪಾತವಾಗಿ ನಡೆಸಿ...

ಜನಸಾಮಾನ್ಯರ ಏಳಿಗೆಗೆ ಜೀವನ ಮೀಸಲಿಟ್ಟವರು ಹೆಚ್.ಟಿ.ರಾಜೇಂದ್ರ

ಚಿಕ್ಕಮಗಳೂರು: :- ಸಮಾಜದಲ್ಲಿನ ಶೋಷಿತರು, ರೈತರು, ದಲಿತರ ಮೂಲಹಕ್ಕಿಗಾಗಿ ವೈ ಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ...