Home Latest News ನಗರದಲ್ಲಿ ವಿದ್ಯುತ್ ದೀಪಗಳಿಗೆ ಚಾಲನೆ
Latest NewschikamagalurHomenamma chikmagalur

ನಗರದಲ್ಲಿ ವಿದ್ಯುತ್ ದೀಪಗಳಿಗೆ ಚಾಲನೆ

Share
Share

ಚಿಕ್ಕಮಗಳೂರು: ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೧೨.೫ ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣಗೊಳಿಸಲು ಕ್ರಮ ವಹಿಸುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು.

ಅವರು ೧೫ನೇ ಹಣಕಾಸು ಯೋಜನೆಯಡಿ ೯೫ ಲಕ್ಷ ರೂ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಮಧ್ಯಭಾಗದಲ್ಲಿ ರಾಂಪುರದಿಂದ ಕತ್ರಿಮಾರಮ್ಮ ದೇವಸ್ಥಾನದವರೆಗೆ ಅಳವಡಿಸಲಾಗಿರುವ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿ ಮಾತನಾಡಿದರು.

ಅತೀ ಹೆಚ್ಚು ಮಳೆಯಿಂದ ನಗರದಲ್ಲಿ ರಸ್ತೆಗಳು ಹಾನಿಯಾಗಿದ್ದು, ನಗರಸಭೆ ಇಂಜಿನಿಯರ್‌ಗಳು ರಸ್ತೆ ದುರಸ್ಥಿಗೆ ಬೇಕಾದ ಟೆಂಡರ್ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಕಾರ್ಯಾದೇಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಮಳೆಗಾಲ ಮುಗಿದ ಬಳಿಕ ರಸ್ತೆಗಳನ್ನು ಡಾಂಬರೀಕರಣಗೊಳಿಸಿ ಅಭಿವೃದ್ಧಿಗೊಳಿಸಲಾಗುವುದೆಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶೇಷ ಅನುದಾನ ಘೋಷಣೆ ಮಾಡಿದ್ದು, ಜು.೩೦, ೩೧ ರಂದು ಭೇಟಿಮಾಡಿ ಬಹುಪಾಲು ಅನುದಾನವನ್ನು ಪಡೆದು ನಗರದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬದ್ಧವಾಗಿರುವುದಾಗಿ ತಿಳಿಸಿದರು.

ಬಹಳ ದಿನಗಳ ನಂತರ ನಗರದ ನಾಗರೀಕರಿಗೆ ಕತ್ತಲೆಯಿಂದ ತೊಂದರೆಯಾಗಿದ್ದು, ನಗರದ ಹೆದ್ದಾರಿಯಿಂದ ಸುತ್ತಮುತ್ತಲ ವಾರ್ಡ್‌ಗಳಿಗೆ ತೆರಳುವವರಿಗೆ ಇಂದು ವಿದ್ಯುತ್ ದೀಪಗಳಿಗೆ ಚಾಲನೆ ನೀಡಿರುವುದು ಬೆಳಕಿನೆಡೆಗೆ ತರುವ ಪ್ರಯತ್ನ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು, ಪುರಷರು ದೈರ್ಯವಾಗಿ ಸಂಚರಿಸಬಹುದಾಗಿದೆ ಎಂದು ಹೇಳಿದರು.

ನಗರದ ಜನತೆಗೆ ಸ್ವಚ್ಚತೆ, ಕುಡಿಯುವ ನೀರು, ಬೀದಿದೀಪ ಮುಂತಾದವುಗಳನ್ನು ಕಲ್ಪಿಸಲು ಮೊದಲ ಆದ್ಯತೆ ನೀಡುತ್ತೇನೆ. ಪ್ರತಿದಿನ ಕಸ ಸಂಗ್ರಹಣೆಗೆ ಗಂಟೆಗಾಡಿ ಬರುತ್ತಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಹೊಸ ಟೆಂಡರ್ ಕರೆದು ಪ್ರತೀ ದಿನ ಮನೆಯಲ್ಲಿಯೇ ಒಣ ಕಸ, ಹಸಿ ಕಸ ವಿಂಗಡಿಸಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ ಎಂದರು.

ಈ ಕಾರ್ಯ ಯಶಸ್ವಿಯಾಗಬೇಕಾದರೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ. ಹೌಸಿಂಗ್‌ಬೋರ್ಡ್ ಮತ್ತು ಕಲ್ಯಾಣ ನಗರದಲ್ಲಿ ಸ್ಥಳೀಯರು ವೆಲ್ಫೇರ್ ಟ್ರಸ್ಟ್ ರಚಿಸಿ ಸಹಕಾರ ನೀಡಿದ್ದಾರೆ. ಇದೇ ಮಾದರಿಯಲ್ಲಿ ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ವೆಲ್ಫೇರ್ ಟ್ರಸ್ಟ್ ರಚಿಸುವ ಮೂಲಕ ನಗರಸಭೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಕಸ ವಿಲೇವಾರಿ ಮಾಡುವುದು ದೇಶದಲ್ಲೇ ಒಂದು ಪಿಡುಗಾಗಿದ್ದು, ಜೊತೆಗೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ನಗರಸಭೆ ವಿಧಿಸಿರುವ ಸೂಚನೆಗಳನ್ನು ನಾಗರೀಕರು ಪಾಲಿಸುವ ಮೂಲಕ ಸಾರ್ವಜನಿಕ ಸಹಭಾಗಿತ್ವ ಅಗತ್ಯವಾಗಿದ್ದು, ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕ್ರಮವಹಿಸಬೇಕೆಂದು ಹೇಳಿದರು.

ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಬೀದಿದೀಪ ಉದ್ಘಾಟಿಸಿದ ಶಾಸಕ ಹೆಚ್.ಡಿ. ತಮ್ಮಯ್ಯ ಅವರಿಗೆ ನಗರಸಭೆ ಮತ್ತು ೩೫ ವಾರ್ಡ್ ಸದಸ್ಯರ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದರು.

ಸದಸ್ಯ ಎ.ಸಿ. ಕುಮಾರಗೌಡ ಮಾತನಾಡಿ, ನಮ್ಮ ವಾರ್ಡಿನಲ್ಲಿ ಬೀದಿದೀಪ ಇಲ್ಲದೆ ನಾಗರೀಕರಿಗೆ ತೊಂದರೆಯಾಗುತ್ತಿತ್ತು. ಜೊತೆಗೆ ವಾಹನ ಸಂಚಾರಕ್ಕೂ ಅಡಚಣೆಯಾಗುತ್ತಿತ್ತು. ಈ ಕತ್ತಲೆ ಕೂಪದಿಂದ ಹೊರತಂದ ಶಾಸಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನವನ್ನು ಶಾಸಕರು ತಂದು ನಗರದ ಎಲ್ಲಾ ವಾರ್ಡ್‌ಗಳಲ್ಲಿ ಗುಣಮಟ್ಟದ ಚರಂಡಿ, ಪಾರ್ಕ್, ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಅನುಮಧುಕರ್, ಸದಸ್ಯರುಗಳಾದ ಪರಮೇಶ್ ರಾಜ್ ಅರಸ್, ರೂಪಾ ಕುಮಾರ್, ಲಕ್ಷ್ಮಣ್, ಅರುಣ್ ಕುಮಾರ್, ಗೋಪಿ, ಗುರುಮಲ್ಲಪ್ಪ, ಸಿ.ಪಿ ಲಕ್ಷ್ಮಣ, ಮಾಜಿ ಸದಸ್ಯರುಗಳಾದ ದಿನೇಶ್, ಶ್ರೀಧರ್ ಉರಾಳ್, ಜೇಮ್ಸ್, ಎಂ.ಸಿ. ಪ್ರಕಾಶ್, ಪೌರಾಯುಕ್ತ ಬಿ.ಸಿ ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.

New electric lights launched in the city

Share

Leave a comment

Leave a Reply

Your email address will not be published. Required fields are marked *

Don't Miss

ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕಿ ನಯನ ಮೋಟಮ್ಮ ತಿಳಿಸಿದರು. ಅವರು ಇಂದು ಮಳಲೂರು,...

ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !

ಚಿಕ್ಕಮಗಳೂರು: ಸೋಷಿಯಲ್‌ ಮಿಡಿಯಾದಲ್ಲಿ ಪರಿಚಯವಾದ ಹುಡುಗ ,ಹುಡುಗಿಯರು ಪ್ರೀತಿಸಿ ಮೋಸ ಹೋಗುವ ಹಲವು ಘಟನೆಗಳಿವೆ. ಪಾಕಿಸ್ತಾನದ ಗೃಹಿಣಿ ಭಾರತದ ಯುವಕ,ಬಾಂಗ್ಲಾದೇಶ ಹುಡುಗ ಭಾರತದ ಯುವತಿ ಪ್ರೀತಿಯ ಜಾಲದಲ್ಲಿ ಮುಳುಗಿದ ಸುದ್ದಿಗಳನ್ನು ಕೇಳಿತ್ತಿರುವಾಗಲೇ...

Related Articles

ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು

ಕಡೂರು: ತಾಲ್ಲೂಕಿನ ಕನಕರಾಯನಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ...

ಬೀದಿ ನಾಯಿಗಳ ಹಾವಳಿ: 11 ಜನರಿಗೆ ಗಾಯ

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್, ಜಿಲ್ಲಾ ಪಂಚಾಯಿತಿ‌ ಕಚೇರಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,...

ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಧರ್ಮಸ್ಥಳ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ನಿಷ್ಪಕ್ಷಪಾತವಾಗಿ ನಡೆಸಿ...

ಜನಸಾಮಾನ್ಯರ ಏಳಿಗೆಗೆ ಜೀವನ ಮೀಸಲಿಟ್ಟವರು ಹೆಚ್.ಟಿ.ರಾಜೇಂದ್ರ

ಚಿಕ್ಕಮಗಳೂರು: :- ಸಮಾಜದಲ್ಲಿನ ಶೋಷಿತರು, ರೈತರು, ದಲಿತರ ಮೂಲಹಕ್ಕಿಗಾಗಿ ವೈ ಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ...