Home Latest News ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ
Latest NewschikamagalurHomenamma chikmagalur

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ ದರ ಪ್ರಚಾರ ಮಾಡುತ್ತಿರುವ ವಿರುದ್ಧ ಶ್ರೀರಾಮಮಂದಿರ ಆರ್‍ಯನಯ ನಜ ಕ್ಷತ್ರಿಯ ಸಂಘ ಮತ್ತು ಜಿಲ್ಲಾ ಸವಿತಾ ಸಮಾಜದ ಮುಖಂಡರುಗಳು ನಗರದ ಆಜಾದ್ ಪಾರ್ಕ್ ವೃತ್ತ ದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಮಹಾಲಿಂಗಪ್ಪ ಪೂರ್ವಜರ ಕಾಲದಿಂದಲೂ ಕ್ಷೌರಿಕ ವೃತ್ತಿಯನ್ನು ಜೀವನದ ಭಾಗವಾಗಿ ಅಲಂಬಿಸಿಕೊಂಡಿದ್ದೇವೆ. ಈ ವೃತ್ತಿ ಹೊರತಾಗಿ ಬೇರೆ ಯಾವುದೇ ಕೆಲ ಸವನ್ನು ತಿಳಿಯದ ಸಮಾಜ ಬಾಂಧವರಿಗೆ ಕೆಲವರು ತೊಂದರೆ ನೀಡುತ್ತಿದ್ದಾರೆ ಎಂದರು.

ಸವಿತಾ ಸಮಾಜದ ಬಾಂಧವರ ಒಳಿತಿಗಾಗಿ ವೃತ್ತಿಯ ದರಪಟ್ಟಿಯನ್ನು ಸ್ಥಾಪಿಸಿದ್ದು, ಕ್ಷೌರಿಕ ವೃತ್ತಿದಾ ರರು ಈ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಹೊರರಾಜ್ಯದಿಂದ ಕೆಲ ವರನ್ನು ಕರೆತಂದಿರುವ ಬಂಡವಾಳ ಶಾಹಿಗಳು ಕಡಿಮೆ ದರ ನಿಗಧಿಪಡಿಸಿ ಮೂಲ ವೃತ್ತಿಗೆ ಧಕ್ಕೆಯುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕ್ಷತ್ರಿಯ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಎಂ.ಯೋಗೇಶ್ ಮಾತನಾಡಿ ಕ್ಷೌರಿಕ ವೃತ್ತಿಯವರಿಗೆ ಸಮಾ ಜವು ನಿಗಧಿಪಡಿಸಿ ದರದಲ್ಲೇ ಕೆಲಸ ಮಾಡಲಾಗುತ್ತಿದೆ. ಆದರೆ ಕೆಲವರು ವೃತ್ತಿಯವರ ಹೊಟ್ಟೆಮೇಲೆ ಹೊಡೆ ದು ಕಡಿಮೆ ದರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿಸುವುದು ಸರಿಯಲ್ಲ. ಕೂಡಲೇ ಈ ಬಗ್ಗೆ ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಸವಿತಾ ಸಮಾಜ ಜಿಲ್ಲಾಧ್ಯಕ್ಷ ವಿಶ್ವನಾಥ್ ಮಾತನಾಡಿ ನಾಯಿ ಕೊಡೆಗಳಂತೆ ತಲೆ ಎತ್ತುತ್ತಿರುವ ಹೊರ ರಾಜ್ಯದ ಕ್ಷೌರಿಕರು ಸ್ಥಳೀಯ ಮೂಲ ವೃತ್ತಿ ಕುತ್ತು ತಂದಿದ್ದಾರೆ. ಸಮಾಜದ ದರವನ್ನು ಮನದಟ್ಟು ಮಾಡಿ ಕೊಳ್ಳದೇ ಮನಸ್ಸಿಗೆ ಬಂದಂತೆ ದರ ನಿಗಧಿಪಡಿಸಿ ಪ್ರಚಾರಪಡಿಸುತ್ತಿರುವ ಕಾರಣ ಸವಿತಾ ಸಮಾಜದ ವೃತ್ತಿ ದಾರರು ಆತಂಕಕ್ಕೆ ಒಳಗಾಗಿದ್ದು ಈ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದರು.

ಪ್ರತಿಭಟನೆಗೂ ಮುನ್ನ ತಾಲೂಕು ಕಚೇರಿಯಿಂದ ಸವಿತಾ ಸಮಾಜದ ನೂರಾರು ಬಂಧುಗಳು ಅಂಗ ಡಿ ಮುಂಗಟ್ಟು ಬಂದ್‌ಗೊಳಿಸಿ ಬಂಡವಾಳ ಶಾಹಿಗಳ ವಿರುದ್ಧ ಘೋ?ಣೆ ಕೂಗುತ್ತಾ ಎಂಜಿ ರಸ್ತೆ ಮೂಲಕ ಆಜಾದ್ ಪಾಕ್ ವೃತ್ತದವರೆಗೆ ಮೆರವಣಿಗೆ ಜಾಥಾ ನಡೆಸಿದರು.

ಈ ಸಂದರ್ಭದಲ್ಲಿ ಕ್ಷತ್ರಿಯ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಶ್ರೀಧರ್, ತಾಲ್ಲೂಕು ಪ್ರಧಾನ ಕಾ ರ್ಯದರ್ಶಿ ಡಿ.ಶೇಷಾದ್ರಿ, ಖಜಾಂಚಿ ಗಿರೀಶ್, ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ಜೆ.ಸತ್ಯನಾರಾಯ ಣ್, ಸಮಾಜದ ಮುಖಂಡರುಗಳಾದ ಎನ್.ಸತೀಶ್, ಡಿ.ವೆಂಕಟೇಶ್, ಬಾಲಕೃಷ್ಣಪ್ಪ, ಅಶಕ್, ಲಕ್ಷ್ಮೀ ಕಾಂ ತ್, ವಿ.ಬಿ.ನಾರಾಯಣ್, ಧನರಾಜ್, ಚಂದ್ರಶೇಖರ್, ಬಸವರಾಜ್, ಗೋಗಿ ಮತ್ತಿತರರು ಹಾಜರಿದ್ದರು.

Society protests against barbering rate list

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...