Home namma chikmagalur ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್-103 ಪ್ರವಾಸಿಗರು ಪೊಲೀಸರು ವಶಕ್ಕೆ
namma chikmagalurchikamagalurHomeLatest News

ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್-103 ಪ್ರವಾಸಿಗರು ಪೊಲೀಸರು ವಶಕ್ಕೆ

Share
Share

ಚಿಕ್ಕಮಗಳೂರು: ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ ೧೦೩ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

ಈ ಘಟನೆ ಶನಿವಾರ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಆಳವಾದ ಕಾಡು ಪ್ರದೇಶದಲ್ಲಿ ಸಂಭವಿಸಿದೆ. ಕಾನೂನುಬಾಹಿರವಾಗಿ ಅರಣ್ಯ ಪ್ರದೇಶ ಪ್ರವೇಶಿಸಿ ಟ್ರಕ್ಕಿಂಗ್ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇಲೆ ಬಣಕಲ್ ಹಾಗೂ ಬಾಳೂರು ಪೊಲೀಸ್ ಠಾಣೆಗಳ ಪೊಲೀಸರು ದಾಳಿ ನಡೆಸಿದರು.

ಬಣಕಲ್ ಪಿಎಸ್‌ಐ ರೇಣುಕಾ ಮತ್ತು ಬಾಳೂರು ಪಿಎಸ್‌ಐ ದಿಲೀಪ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಲ್ಲ ೧೦೩ ಜನರನ್ನು ವಶಕ್ಕೆ ಪಡೆಯಲಾಗಿದೆ. ಈ ತಂಡದಲ್ಲಿ ಭಾಗವಹಿಸಿದ್ದವರು ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಗಳ ಉದ್ಯೋಗಿಗಳು ಎಂದು ಮಾಹಿತಿ ಲಭ್ಯವಾಗಿದೆ.

ಕಾರ್ಯಾಚರಣೆ ವೇಳೆ ಪ್ರಯಾಣಿಸಿದ್ದ ಎರಡು ಪ್ರವಾಸಿ ಬಸ್ಸುಗಳು ಹಾಗೂ ಎರಡು ಪಿಕಪ್ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರವಾಸಿಗರನ್ನು ನಿಷೇಧಿತ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು ಸ್ಥಳೀಯ ಒಬ್ಬ ವ್ಯಕ್ತಿ ಎಂಬ ಮಾಹಿತಿ ಲಭ್ಯವಾಗಿದ್ದು, ಅವರ ಬಗ್ಗೆ ತನಿಖೆ ನಡೆಯುತ್ತಿದೆ.

ಅರಣ್ಯ ಇಲಾಖೆಯ ಅನುಮತಿಯಿಲ್ಲದೇ ನಿಷೇಧಿತ ಪ್ರದೇಶದಲ್ಲಿ ಪ್ರವೇಶಿಸುವುದು ಅರಣ್ಯ ಕಾಯ್ದೆಯ ಪ್ರಕಾರ ಗಂಭೀರ ಅಪರಾಧವಾಗಿದೆ.

ಈ ಹಿನ್ನೆಲೆ, ಬಂಧಿತರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Police arrest 103 tourists for trekking in prohibited forest area

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮ ಮನೆ ಮಂಜೂರು: ಬಿಲ್ ಕಲೆಕ್ಟರ್-ಪಿಡಿಒಗೆ ಒಂದು ವರ್ಷ ಸಜೆ

ಚಿಕ್ಕಮಗಳೂರು: ಅಕ್ರಮವಾಗಿ ತನ್ನ ತಾಯಿಯ ಹೆಸರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಿಕೊಂಡಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ತಲಾ ಒಂದು ವರ್ಷ ಸಜೆ ಹಾಗೂ ೧೫ ಸಾವಿರ ರೂ....

ರೈತ ಸಂಘಟನೆ ದಾರಿ ಬಿಟ್ಟಿತು ? ಎಲ್ಲಿಗೆ ಪಯಣ ಯಾವುದೋ ದಾರಿ !

ಮಾಸದಿರಲಿ ಬದಲಾಯಿಸದಿರಲಿ ರೈತರ ಹೆಗಲ ಮೇಲೇರಿರುವ ಶಾಲಿನ ಹಸಿರು ಬಣ್ಣ. ದೇಶಕ್ಕೆ ಅನ್ನ ಕೊಡುವ ರೈತ ಇಂದಿಗೂ ಖಾಲಿ ಹೊಟ್ಟೆಯ ಬರಿಗೈ ಬಂಟ. ಇದು 45ನೇ ರೈತ ಹುತಾತ್ಮ ದಿನಾಚರಣೆ ಸಂದರ್ಭ....

Related Articles

ಕರ್ತಿಕೆರೆ ಪಂಚಾಯತಿ ಅಕ್ರಮ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿಕ್ಕಮಗಳೂರು:  ಇಲ್ಲಿನ ಕರ್ತಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಅವ್ಯವಹಾರಗಳು ನಡೆದಿರುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...

ರಸಗೊಬ್ಬರ ದಾಸ್ತಾನು ಮಾಡದ ರೈತ ವಿರೋಧಿ ಸರ್ಕಾರ

ಚಿಕ್ಕಮಗಳೂರು: ರಾಜ್ಯಸರ್ಕಾರ ರೈತರ ಬೇಡಿಕೆಗನುಗುಣವಾಗಿ ರಸಗೊಬ್ಬರ ದಾಸ್ತಾನು ಮಾಡುವಲ್ಲಿ ವಿಫಲವಾಗಿದ್ದು, ಕೇಂದ್ರ ಸರ್ಕಾರದ ಮೇಲೆ ಗೂಬೆ...

ಬಾಳೆಹೊನ್ನೂರಿನ ಪುಂಡಾನೆಗಳ ಸೆರೆಗೆ ಸಚಿವರ ಆದೇಶ

ಚಿಕ್ಕಮಗಳೂರು:  ಹೊಸ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ನೆರೆ ಜಿಲ್ಲೆಯ ಆನೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯ ನೆರವು...

ಭದ್ರಾ ನದಿಯಲ್ಲಿ ಪತ್ತೆ ಚಾಲಕ ಶಮಂತಾ ಮೃತದೇಹ ಪತ್ತೆ

ಕಳಸ: ಜೀಪ್ ಸಮೇತ ಚಾಲಕ ಭದ್ರಾ ನದಿಗೆ ಬಿದ್ದ ಪ್ರಕರಣದಲ್ಲಿ ಕೊಳಮಾಗೆಯಿಂದ ೧ ಕಿ.ಮೀ ದೂರದ...