Home namma chikmagalur ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ
namma chikmagalurHomeKadurLatest News

ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ

Share
Share

ಚಿಕ್ಕಮಗಳೂರು: ಸಖರಾಯಪಟ್ಟಣ ಹೋಬಳಿ ಅಗ್ರಹಾರ ಗ್ರಾಮದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದ್ದು, ಉಭಯ ಕಡೆ ಅಹಿತಕರ ಘಟನೆ ನಡೆಯುವ ಸಂಭವವಿರುವುದರಿಂದ ಸ್ಥಳದಿಂದ ಒಂದು ಕಿ.ಮೀ. ವ್ಯಾಪ್ತಿಯವರೆಗೆ ಜುಲೈ ೨೮ ರಿಂದ ಆಗಸ್ಟ್ ೩ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತರೀಕೆರೆ ಉಪವಿಭಾಗಾಧಿಕಾರಿಗಳಾದ ಎನ್.ವಿ.ನಟೇಶ್ ಅವರು ಆದೇಶ ಹೊರಡಿಸಿದ್ದಾರೆ.

ಅಯ್ಯನಕೆರೆಯಿಂದ ಕೋಡಿ ಬಿದ್ದ ನೀರು ವೇದಾವತಿ ಹಳ್ಳದ ಮೂಲಕ ಕಡೂರು, ಯಗಟಿ ಮಾರ್ಗವಾಗಿ ಚಿತ್ರದುರ್ಗ ತಾಲ್ಲೂಕಿನ ಮಾರಿಕಣಿವೆಗೆ ಹರಿಯುತ್ತದೆ. ಹೀಗೆ ಹರಿಯುವ ನೀರನ್ನು ಅಗ್ರಹಾರ ಗ್ರಾಮದ ಬಳಿ ಇರುವ ಚೆಕ್‌ಡ್ಯಾಂ ಮೇಲ್ಭಾಗದಲ್ಲಿ ಸುಮಾರು ೫ ಮೀಟರ್ ಎತ್ತರದಲ್ಲಿ ಟ್ಯಾಂಕ್ ನಿರ್ಮಿಸಿ ಈ ಟ್ಯಾಂಕ್‌ಗೆ ಕೋಡಿ ಬಿದ್ದ ನೀರು ಸಂಗ್ರಹಿಸಿ ಪೈಪ್‌ಲೈನ್ ಮೂಲಕ ನಾಗೇನಹಳ್ಳಿ ಗ್ರಾಮದ ಕಟ್ಟೆ ಹಾಗೂ ಹುಲಿಕೆರೆ ಗ್ರಾಮದ ಕಟ್ಟೆ ಹಾಗೂ ಹುಲಿಕೆರೆಗೆ ಸಮೀಪವಿರುವ ಬೆರಟಿಕೆರೆಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ೨೦೨೩ರ ಫೆಬ್ರವರಿಯಲ್ಲಿ ಶಂಕುಸ್ಥಾಪನೆ ನಡೆದಿತ್ತು. ಇತ್ತೀಚೆಗೆ ಕಾಮಗಾರಿ ಆರಂಭಗೊಂಡಿದ್ದು, ವೇದಾವತಿ ಹಳ್ಳ ಹರಿಯುವ ಕೆಳಭಾಗದ ಗ್ರಾಮಗಳ ರೈತರು ತಡೆಯೊಡ್ಡಿದ್ದರು.

ವೇದಾವತಿ ಹಳ್ಳ ಹರಿಯುವ ಕೆಳಭಾಗದ ಗ್ರಾಮಗಳ ಗುಬ್ಬಿಹಳ್ಳಿ, ಜಿಗಣೆಹಳ್ಳಿ, ಕುರುಬಗೆರೆ, ದೊಡ್ಡಪಟ್ಟಣಗೆರೆ, ದೊಂಬರಹಳ್ಳಿ, ಚನ್ನಾಪುರ, ಬಂಡಿಕೊಪ್ಪಲು, ಕಡೂರುಹಳ್ಳಿ ಮತ್ತಿತರ ಗ್ರಾಮಗಳ ರೈತರು ಈ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ್ದರೆ, ಹುಲಿಕೆರೆ ನಾಗೇನಹಳ್ಳಿ, ಕಂಚುಗಾರನಹಳ್ಳಿ, ಮಡಿಕೆಹೊಸಳ್ಳಿ ಸುತ್ತಮುತ್ತಲ ಗ್ರಾಮಗಳ ರೈತರು ಕಾಮಗಾರಿಯ ಪರವಾಗಿದ್ದಾರೆ.

ಜುಲೈ ೧೯ ರಂದು ಉಭಯ ಕಡೆಯವರು ಅಗ್ರಹಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಉಭಯ ಬಣದ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಿಗಿ ಪೊಲೀಸ್ ರಕ್ಷಣೆ ಒದಗಿಸಿದ್ದರಿಂದ ಯಾವುದೇ ಅಹಿತಕರ ಘಟನೆಗೆ ಆಸ್ಪದವಾಗಿರಲಿಲ್ಲ. ಆದರೂ ಉಭಯ ಕಡೆಯ ನಡುವೆ ಯಾವುದೇ ಅಹಿತಕರ ಘಟನೆಗಳ ಸಂಭವಿಸಬಾರದೆನ್ನುವ ದೃಷ್ಟಿಯಿಂದ ಇದೀಗ ನಿಷೇಧಾಜ್ಞೆ ಹೊರಡಿಸಿರುವುದಾಗಿ ಅವರು ತಿಳಿಸಿದ್ದಾರೆ.

Prohibitory order imposed near Agrahara in Sakharayapattana

Share

Leave a comment

Leave a Reply

Your email address will not be published. Required fields are marked *

Don't Miss

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಗಣಪತಿಕಟ್ಟೆಯ ರಮೇಶ ಮತ್ತು ರವಿಕಲಾ ದಂಪತಿಯ ಮಗ ಶಮಂತ (22)...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು ಅಂತ ಹೋದ್ರೆ ನಾಲ್ಕೈದು ಗಂಟೆ ಕಾಯಿಸುತ್ತಾರೆ. ರಾಜ್ಯದ ಕೃಷಿ ಸಚಿವರು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ...

Related Articles

ಅಜ್ಜಂಪುರ ಗರಿಗೆದರಿದ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ:ಗ್ರಾಮ ಪಂಚಾಯಿತಿಯಾಗಿದ್ದನ್ನು ಮೇಲ್ದರ್ಜೆಗೆ ಏರಿಸಿ ಪಟ್ಟಣ ಪಂಚಾಯತಿಯಾಗಿ ಹಲವು ತಕರಾರುಗಳಿಂದಾಗಿ ಐದಾರು ವರ್ಷಗಳು ಚುನಾವಣೆ ನಡೆದಿಲ್ಲ....

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ

ಚಿಕ್ಕಮಗಳೂರು  ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಇಬ್ಬರ ಮೇಲೆ ಅಟ್ಯಾಕ್ ಮಾಡಿದ ಚಿರತೆ ಕಡೂರು...

ಹಕ್ಕುಪತ್ರಕ್ಕಾಗಿ ಸಿ.ಟಿ.ರವಿ ಪ್ರತಿಭಟನೆ ಹಾಸ್ಯಾಸ್ಪದ

ಚಿಕ್ಕಮಗಳೂರು: : ಕಳೆದ ೧೯ ವರ್ಷದಲ್ಲಿ ಆಡಳಿತದಲ್ಲಿದ್ದಾಗ ಬಡವರಿಗೆ ನಿವೇಶನ, ಮನೆಯ ಹಕ್ಕುಪತ್ರ ನೀಡದ ಮಾಜಿ...

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಸಚಿವರಲ್ಲಿ ಸಂಸದರ ಮನವಿ

ಚಿಕ್ಕಮಗಳೂರು: ಜೀವ ಹಾನಿ, ಬೆಳೆ ಹಾನಿ ಜೊತೆಗೆ ಭಯಭೀತಿ ನಿಯಂತ್ರಣ ಮಾಡಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ವೈಜ್ಞಾನಿಕ...