Home namma chikmagalur ಆ.4 ರಂದು ಸಿರವಾಸೆಯಲ್ಲಿ ಬೃಹತ್ ಪ್ರತಿಭಟನೆ
namma chikmagalurchikamagalurHomeLatest News

ಆ.4 ರಂದು ಸಿರವಾಸೆಯಲ್ಲಿ ಬೃಹತ್ ಪ್ರತಿಭಟನೆ

Share
Share

ಚಿಕ್ಕಮಗಳೂರು: ತಾಲೂಕಿನ ಸಿರವಾಸೆ ಗ್ರಾಮದ ಸುಗಡವಾನಿ ಮತ್ತಿತರೆ ಊರುಗಳಲ್ಲಿನ ಜನವಸತಿ ಪ್ರದೇಶ, ಕೃಷಿ ಭೂಮಿಯ ವಿವಿಧ ಸರ್ವೆ ನಂಬರ್‌ಗಳನ್ನು ಡೀಮ್ಡ್ ಫಾರೆಸ್ಟ್ ಮತ್ತು ೪(೧) ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ ಆ.೪ ರಂದು ಸಿರವಾಸೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಾಗರೀಕ ಮತ್ತು ರೈತ ಹೋರಟ ಸಮಿತಿ ಸಂಚಾಲಕ ವಾಸುಪೂಜಾರಿ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸ್ಥಳೀಯ ಸಂಘ-ಸಂಸ್ಥೆಗಳು, ಜನಪರ, ದಲಿತ, ಕನ್ನಡಪರ ಸಂಘಟನೆಗಳು, ಕೃಷಿ ಕಾರ್ಮಿಕ, ಕಾಫಿ ಬೆಳೆಗಾರರ ಸಹಯೋಗದಲ್ಲಿ ರೈತ ಹೋರಾಟ ಸಮಿತಿಯು ಈ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಿದ್ದು, ಬೆಳಗ್ಗೆ ೧೦ ಕ್ಕೆ ಸಿರವಾಸೆಯ ಇಂದಿರಾನಗರದಿಂದ ಗ್ರಾಮಪಂಚಾಯಿತಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ನಂತರ ಸೊಸೈಟಿ ನೂತನ ಸಭಾಂಗಣದಲ್ಲಿ ಬಹಿರಂಗ ಸಭೆ ನಡೆಯಲಿದೆ ಎಂದು ಹೇಳಿದರು.

ಅರಣ್ಯ ಇಲಾಖೆಯು ಈಗಾಗಲೇ ಸಿರವಾಸೆ ಗ್ರಾಮದ ವಿವಿಧ ಸರ್ವೆ ನಂಬರ್‌ಗಳ ಕೃಷಿಯೋಗ್ಯ ಮತ್ತು ಜನವಸತಿ ಪ್ರದೇಶಗಳನ್ನು ಡೀಮ್ಡ್ ಫಾರೆಸ್ಟ್ ಮತ್ತು ೪(೧) ನೊಟೀಸ್‌ನಲ್ಲಿ ಸೇರ್ಪಡೆ ಮಾಡಿದೆ. ಇದರಿಂದ ೯೪ ಸಿ, ೫೩, ೫೭ ಅರ್ಜಿಗಳು ವಿಲೇವಾರಿ ಆಗುತ್ತಿಲ್ಲ. ಇ-ಖಾತೆ, ಪೋಡಿ ಆಗುತ್ತಿಲ್ಲ. ವಸತಿರಹಿತರಿಗೆ, ನಿವೇಶನರಹಿತರಿಗೆ ನಿವೇಶನ ಮಂಜೂರಾಗುತ್ತಿಲ್ಲ. ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನ ಮಂಜೂರಾಗುತ್ತಿಲ್ಲ ಎಂದು ಹೇಳಿದರು.

ಈ ಸಮಸ್ಯೆಗಳಿಂದ ಆ ಭಾಗದ ಜನಜೀವನವೇ ಮುಂದೆ ಅಪಾಯದಲ್ಲಿ ಸಿಲುಕಲಿದ್ದು, ಈ ಬಗ್ಗೆ ಜನಜಾಗೃತಿ ಮೂಡಿಸಲು ಸರಕಾರದ ಕಣ್ಣು ತೆರೆಸಲು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಸಿರವಾಸೆ ಗ್ರಾಪಂ ಅಧ್ಯಕ್ಷ ರಘುನಾಥ್ ಜಾಥಾಗೆ ಚಾಲನೆ ನೀಡಲಿದ್ದು, ನಾಗರೀಕ ರೈತ ಹೋರಾಟ ಸಮಿತಿ ಸಂಚಾಲಕ ಎಸ್. ವಿಜಯ್‌ಕುಮಾರ್ ಸಮಾವೇಶ ಉದ್ಘಾಟಿಸಲಿದ್ದಾರೆ. ಜಿ.ರಘು, ಕಾಫಿ ಬೆಳೆಗಾರ ಚಂದ್ರೇಗೌಡ, ಜಾರ್ಜ್ ಆಸ್ಟಿನ್, ಕೆ.ಕೆ. ರಘು ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರಾದ ಚಂದ್ರೇಗೌಡ, ಜಾರ್ಜ್ ಆಸ್ಟಿನ್, ನರೇಂದ್ರ ಇದ್ದರು.

Massive protest in Siravase on 4th October

Share

Leave a comment

Leave a Reply

Your email address will not be published. Required fields are marked *

Don't Miss

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆ – ಅಂಗನವಾಡಿಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...

Related Articles

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...

ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಆಹ್ವಾನ

ಚಿಕ್ಕಮಗಳೂರು:  ಸೀಗೋಡುವಿನ ಪಿ.ಎಂ.ಶ್ರೀ ಜವಾಹರ ನವೋದಯ ವಿದ್ಯಾಲಯವು  ವಸತಿಯುತ ಸಹಶಿಕ್ಷಣ ವಿದ್ಯಾಲಯವಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾವಂತ...