Home namma chikmagalur ಗಿರಿ ಭಾಗದ ತಾಣಗಳಿಗೆ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯ ಅವೈಜ್ಞಾನಿಕ
namma chikmagalurchikamagalurLatest News

ಗಿರಿ ಭಾಗದ ತಾಣಗಳಿಗೆ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯ ಅವೈಜ್ಞಾನಿಕ

Share
Share

ಚಿಕ್ಕಮಗಳೂರು: ಗಿರಿ ಭಾಗದ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯಗೊಳಿಸಿರುವ ಜಿಲ್ಲಾಡಳಿತದ ಕ್ರಮ ಅವೈಜ್ಞಾನಿಕವಾಗಿದ್ದು, ಅದನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ರೆಸಾರ್ಟ್, ಹೋಂಸ್ಟೇ, ಲಾಡ್ಜ್, ಹೋಟೇಲ್ ಮಾಲೀಕರು ಹಾಗೂ ಟ್ಯಾಕ್ಸಿ, ಜೀಪ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಟೂರ್‍ಸ್ ಅಂಡ್ ಟ್ರಾವೇಲ್ಸ್ ಮಾಲೀಕರು ಗಿರಿಶ್ರೇಣಿಯ ನಾಗರೀಕರು ಒತ್ತಾಯಿಸಿದ್ದಾರೆ.

ಇಂದು ಸಂಘಟನೆಗಳ ಪ್ರತಿನಿಧಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೈಸರ್ಗಿಕ ಸೌಂದರ್ಯ ಸವಿಯಲು ಚಿಕ್ಕಮಗಳೂರಿಗೆ ನಾನಾ ಭಾಗಗಳಿಂದ ಪ್ರವಾಸಿಗರು ಬರುತ್ತಿದ್ದು, ಎಲ್ಲಾ ರೀತಿಯ ಜನರು ಇದನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಗಿರಿ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರ ವಾಹನಗಳಿಗೆ ನಿಯಂತ್ರಣಗೊಳಿಸುವುದರಿಂದ ಎಲ್ಲರಿಗೂ ಅನಾನುಕೂಲವಾಗಿದೆ ಎಂದು ತಿಳಿಸಿದರು.

ಪ್ರತಿ ದಿನ ೬೦೦ ವಾಹನಗಳಂತೆ ಎರಡು ಪಾಳಿಯಲ್ಲಿ ೧೨೦೦ ವಾಹನಗಳಿಗೆ ಮಾತ್ರ ಗಿರಿ ಭಾಗಕ್ಕೆ ಪ್ರವೇಶ ಎಂದು ಜಿಲ್ಲಾಡಳಿತ ತಿಳಿಸಿದೆ. ಅದೂ ಸಹ ಯಾವ ರೀತಿಯ ವಾಹನಕ್ಕೆ ಎಷ್ಟು ಅವಕಾಶ ಎನ್ನುವುದನ್ನು ತಿಳಿಸಿಲ್ಲ. ಈ ವಾಹನಗಳನ್ನೇ ನಂಬಿಕೊಂಡಿರುವುದರಿಂದ ಕುಟುಂಬಗಳು ಆತಂಕಕ್ಕೀಡಾಗಿವೆ ಎಂದು ಹೇಳಿದರು.

ಅನೇಕ ಕಾಫಿ ತೋಟಗಳು ಈ ಭಾಗದಲ್ಲಿವೆ, ಸಾವಿರಾರು ಮನೆಗಳಿಗೆ ಈ ನಡುವೆ ಆನ್‌ಲೈನ್ ಅನುಮತಿ ಎಂದರೆ ನೆಂಟರು, ಬಂಧುಗಳು ಬಂದಾಗ, ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಕರೆದೊಯ್ಯಬೇಕೆಂದರೆ ತಕ್ಷಣಕ್ಕೆ ಆನ್‌ಲೈನ್ ಬುಕ್ಕಿಂಗ್ ಮಾಡಿಕೊಂಡು ಓಡಾಡಲು ಆಗುವುದಿಲ್ಲ. ಒಂದು ಬಾರಿ ಆನ್‌ಲೈನ್ ಬುಕ್ಕಿಂಗ್ ಜಾರಿಗೆ ತಂದರೆ ಅದನ್ನು ನಿರ್ವಹಿಸುವ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಲು ಆರಂಭಿಸಿ ಜನರಿಗೆ ತೊಂದರೆ ಆದರೆ ನಾವು ಡಿಸಿ, ಎಸ್ಪಿ, ಪ್ರವಾಸೋದ್ಯಮದವರನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಊಟಿ ಮಾದರಿಯಲ್ಲಿ ಇಲ್ಲೂ ವಾಹನಗಳಿಗೆ ಅವಕಾಶ ಮಾಡಿಕೊಡಬೇಕು. ಹೊರಗಿನಿಂದ ಬರುವವರಿಗೆ ಮಾತ್ರ ಜಿಲ್ಲಾಡಳಿತದ ನಿಯಮಗಳು ಅನ್ವಯಿಸಬೇಕು. ಉಳಿದಂತೆ ಸ್ಥಳೀಯ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳು ಇರಬಾರದು ಎಂದು ಆಗ್ರಹಿಸಿದರು.
ನಮ್ಮ ಮೂಲಭೂತ ಹಕ್ಕು, ಸಂಸ್ಕೃತಿ, ಸಂಪ್ರದಾಯಗಳನ್ನು ಕಿತ್ತುಕೊಳ್ಳುವಂತಹ ನಿರ್ಬಂಧಗಳನ್ನು ಹಾಕಬಾರದು. ಹಿಂದಿನಿಂದಲೂ ನಾವು ಇಲ್ಲಿ ಪರಿಸರವನ್ನು ಕಾಪಾಡಿಕೊಂಡು ಬಂದಿದ್ದೇವೆ. ಇಲ್ಲಿನ ವಾಹನ ಚಾಲಕರು ನುರಿತವರಾಗಿರುತ್ತಾರೆ. ಯಾವುದೇ ರೀತಿಯಲ್ಲಿ ಯಾರಿಗೂ ತೊಂದರೆ ಆಗುತ್ತಿಲ್ಲ ಎಂದು ಹೇಳಿದರು.

ಜಿಲ್ಲಾಡಳಿತ ಆನ್‌ಲೈನ್ ನೋಂದಾವಣೆಯನ್ನು ನಮ್ಮೆಲ್ಲರ ಸಮಕ್ಷಮದಲ್ಲಿ ಸಾಧಕ ಬಾಧಕಗಳನ್ನು ಚರ್ಚೆಮಾಡದೆ ಏಕಪಕ್ಷೀಯವಾಗಿ ಜಾರಿಗೆ ತಂದಿದೆ. ಇದು ಸಮಂಜಸವಲ್ಲ. ಈ ನಿರ್ಧಾರವನ್ನು ಕೈಬಿಟ್ಟು ಬೇರೆ ಮಾರ್ಗೋಪಾಯವನ್ನು ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹೋಂಸ್ಟೇ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ, ವಕೀಲರಾದ ಎನ್.ಆರ್.ತೇಜಸ್ವಿ, ಹೋಟೆಲ್ ಮಾಲೀಕ ಶಿವಕುಮಾರ್, ಟಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಸತೀಶ್, ದಿನೇಶ್, ಮತ್ತಿತರರು ಇದ್ದರು

Mandatory online registration for tourists to hill stations is unscientific

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...