Home Crime News ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು
Crime NewsState News

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು

Share
Share

ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

  • ಐಪಿಸಿ ಸೆಕ್ಷನ್ 376 (2)(k)ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ
  • 376(2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಜೈಲು, 5 ಲಕ್ಷ ರೂ. ದಂಡ
  • ಐಪಿಸಿ ಸೆಕ್ಷನ್‌ 354(A) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
  • ಐಪಿಸಿ ಸೆಕ್ಷನ್‌ 354 (B) ಅಡಿ 7 ವರ್ಷ ಸೆರೆವಾಸ, 50,000 ರೂಪಾಯಿ ದಂಡ
  • ಐಪಿಸಿ ಸೆಕ್ಷನ್‌ 354 (c) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
  • ಸೆಕ್ಷನ್ 506 ಅಡಿ 2 ವರ್ಷ ಸೆರೆವಾಸ 10,000 ರೂ. ದಂಡ
  • ಸೆಕ್ಷನ್ 201 ಅಡಿ 3 ವರ್ಷ ಸೆರೆವಾಸ 25,000 ರೂ. ದಂಡ
  • ಐಟಿ ಕಾಯ್ದೆ ಸೆ.66(E) ಅಡಿ 3 ವರ್ಷ 25,000 ರೂ. ದಂಡ.
  • ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭ, ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ.
  • ಏಕೆಂದರೆ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್‌ ಮೇಲೆ ಪ್ರಜ್ವಲ್‌ನನ್ನು ವಶಕ್ಕೆ ಪಡೆಯಲಾಗಿತ್ತು.

ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ.

ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು.

ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.

Former MP Prajwal Revanna jailed for life

Share

Leave a comment

Leave a Reply

Your email address will not be published. Required fields are marked *

Don't Miss

ತುಂಬಿ ಹರಿಯುತ್ತಿರುವ ತುಂಗಾ, ಭದ್ರಾ – ಹೇಮಾವತಿ ನದಿಗಳು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿರುವುದರಿಂದ ಮನೆಯಿಂದ ಹೊರ...

ಹುಯಿಗೆರೆ ಗ್ರಾಮ ಬಳಿ ಕಾಡಾನೆ ದಾಳಿಗೆ ಕೃಷಿಕನ ಸಾವು

ಬಾಳೆಹೊನ್ನೂರು: ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡವಾನೆ ಜಾಗರ ಬಳಿ ಕೃಷಿಕ ಸಬ್ರಾಯಗೌಡ (65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ...

Related Articles

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ

ಚಿಕ್ಕಮಗಳೂರು  ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಇಬ್ಬರ ಮೇಲೆ ಅಟ್ಯಾಕ್ ಮಾಡಿದ ಚಿರತೆ ಕಡೂರು...

ನಯನಮೋಟಮ್ಮ ಅಲಿಯಾಸ್ ನಯನ ಕಮಲಮ್ಮ?

ಮೂಡಿಗೆರೆ: ಮೂಡಿಗೆರೆ ಶಾಸಕಿ ನಯನಮೋಟಮ್ಮ ಕೇಸರಿ ಶಾಲು ಧರಿಸಿ ಹಿಂದು ಮಹಸಭಾ ಗಣಪತಿ ಕಾರ್ಯಕ್ರಮದಲ್ಲಿ ಪ್ರಮೋದ್...

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ. ಆಲ್ದೂರು ಠಾಣೆ...

ಪೋ‌ಕ್ಸೋ ನ್ಯಾಯಾಲಯದಿಂದ ನಾಲ್ವರಿಗೆ ಕಠಿಣ ಶಿಕ್ಷೆ

ಚಿಕ್ಕಮಗಳೂರು: ನಗರದ ಬಾಲಮಂದಿರದಲ್ಲಿ ವಾಸವಿದ್ದ ಈರ್ವರು ಅಪ್ರಾಪ್ತ ಬಾಲಕಿಯರನ್ನು ಪುಸಲಾಯಿಸಿ ಹಾಸನಕ್ಕೆ ಕರೆದೊಯ್ದು ಬಾಡಿಗೆ ಮನೆಯೊಂದ...