Home namma chikmagalur ರಸಗೊಬ್ಬರ ಸರಬರಾಜು ಮಾಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಜೆಡಿಎಸ್ ಮನವಿ
namma chikmagalurchikamagalurHomeLatest News

ರಸಗೊಬ್ಬರ ಸರಬರಾಜು ಮಾಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಜೆಡಿಎಸ್ ಮನವಿ

Share
Share

ಚಿಕ್ಕಮಗಳೂರು:  ರೈತರಿಗೆ ಅಗತ್ಯವಾಗಿ ಬೇಕಾಗಿರುವ ಯೂರಿಯಾ-ಡಿಎಪಿ ರಸಗೊಬ್ಬರವನ್ನು ಅತೀ ಶೀಘ್ರ ವಿತರಣೆ ಮಾಡುವಂತೆ ಆಗ್ರಹಿಸಿ ಇಂದು ಜೆಡಿಎಸ್ ವತಿಯಿಂದ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದ್ದು, ಈ ನಿಟ್ಟಿನಲ್ಲಿ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ರೈತರಿಗೆ ಅಗತ್ಯ ಕೃಷಿ ಪರಿಕರಗಳನ್ನು ಕೂಡಲೇ ಸರಬರಾಜು ಮಾಡುವಂತೆ ಕೃಷಿ ಸಚಿವರನ್ನು ಒತ್ತಾಯಿಸಿದರು.

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಜೆಡಿಎಸ್ ಹೋರಾಟ ರೂಪಿಸಲಿದೆ. ಕಾಡು ಪ್ರಾಣಿಗಳು, ಮಾನವ ಸಂಘರ್ಷ ಒಂದೆಡೆಯಾದರೆ, ಕಾಡಾನೆಗಳ ದಾಳಿಗೆ ತುತ್ತಾಗುತ್ತಿರುವ ಕಾರ್ಮಿಕರ ರಕ್ಷಣೆ ಮಾಡಬೇಕು, ಜೊತೆಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ರೈತರನ್ನು ಒಕ್ಕಲೆಬ್ಬಿಸುವ ಸಲುವಾಗಿ ಮದಗದ ಕೆರೆ ಬಳಿ ಚಿರತೆ ತಂದುಬಿಟ್ಟು ಅರಣ್ಯ ಇಲಾಖೆ ಆ ಭಾಗದ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಮಲೆನಾಡು ಭಾಗದಲ್ಲಿ ಗಿಡ್ಡ ತಳಿ ಹಸುಗಳನ್ನು ಸಾಕಾಣೆ ಮಾಡಿದ್ದು, ಅರಣ್ಯ ಸಚಿವರು ಅರಣ್ಯದ ಒಳಭಾಗದಲ್ಲಿ ದನಗಳನ್ನು ಮೇಯಿಸಲು ಬಿಡಬಾರದು ಎಂದು ಆದೇಶ ಮಾಡಿರುವುದು ಸರಿಯಾದ ಕ್ರಮವಲ್ಲ. ಕೂಡಲೇ ಈ ಆದೇಶವನ್ನು ವಾಪಾಸ್ ಪಡೆಯುವಂತೆ ಹೇಳಿದರು.

ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಸರ್ಕಾರದ ವಿರುದ್ಧ ಜೆಡಿಎಸ್ ಸಧ್ಯದಲ್ಲೇ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷ ಲಕ್ಷ್ಮಣ್‌ಗೌಡ, ಮುಖಂಡರಾದ ಜಿ.ಹೆಚ್ ಚಂದ್ರಪ್ಪ, ಸಿ.ಕೆ. ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

JDS appeals to the district administration demanding supply of fertilizer

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...