Home namma chikmagalur ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ
namma chikmagalurchikamagalurHomeLatest News

ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ

Share
Share

ಚಿಕ್ಕಮಗಳೂರು: ಶ್ರಾವಣ ಮಾಸದ ಪೂಜೆ ಕಾರ್ಯಕ್ರಮದ ಅಂಗವಾಗಿ ಬಸವನಹಳ್ಳಿಯ ಜಿಲ್ಲಾ ಮಡಿವಾಳರ ಸಂಘದ ಆವರಣದಲ್ಲಿ ಆ.೧೦ ರಂದು ಭಾನುವಾರ ಬೆಳಗ್ಗೆ ೧೦.೩೦ ಕ್ಕೆ ಶ್ರೀ ಬಸವ ಮಾಚಿದೇವ ಸ್ವಾಮಿಗಳ ಸಾಮೂಹಿಕ ಪಾದಪೂಜೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ವಿ ರಾಮಚಂದ್ರ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಮಡಿವಾಳ ಸಮಾಜದ ಬಂಧುಗಳು ಸಕುಟುಂಬ ಸಮೇತರಾಗಿ ಆಗಮಿಸಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಆಸಕ್ತ ಭಕ್ತಾಧಿಗಳು ವಯಕ್ತಿಕವಾಗಿ ತಮ್ಮ ತಮ್ಮ ಮನೆಯಲ್ಲಿ ಪಾದಪೂಜೆ ಮಾಡಲಿಚ್ಚಿಸುವವರು ಅಂದು ಮಧ್ಯಾಹ್ನ ೨ ಗಂಟೆಯ ನಂತರ ಶ್ರೀಗಳ ಪಾದಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ೩ ದಿನ ಮುಂಚಿತವಾಗಿ ಸಂಘಕ್ಕೆ ಮಾಹಿತಿ ತಿಳಿಸಬೇಕೆಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಮಡಿವಾಳ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ ಎಂದರು.

ಹೆಚ್ಚಿನ ಮಾಹಿತಿಗೆ ಪ್ರಧಾನ ಕಾರ್ಯದರ್ಶಿ ೯೩೪೨೦೨೩೨೩೫ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಡೂರು ತಾಲ್ಲೂಕು ಅಧ್ಯಕ್ಷ ಷಡಾಕ್ಷರಿ, ಖಜಾಂಚಿ ಸತೀಶ್, ಸದಸ್ಯ ಮಂಜುನಾಥ್ ಉಪಸ್ಥಿತರಿದ್ದರು.

Mass foot worship of Lord Basava Machideva on August 10th

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...