Home namma chikmagalur ಬಿಜೆಪಿ ಎಸ್‌ಸಿ ಮೋರ್ಚಾದಿಂದ ಮೌನ ಪ್ರತಿಭಟನೆ
namma chikmagalurchikamagalurHomeLatest News

ಬಿಜೆಪಿ ಎಸ್‌ಸಿ ಮೋರ್ಚಾದಿಂದ ಮೌನ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸಲು ನಿರ್ಧರಿಸಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ವೆಂಕಟೇಶ್ ಖಂಡಿಸಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೩೯ ಸಾವಿರ ಕೋಟಿ ರೂ ಎಸ್‌ಸಿ, ಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ರಾಜ್ಯಸರ್ಕಾರ ಬಳಸಿರುವುದರ ವಿರುದ್ಧ ಆಜಾದ್ ವೃತ್ತದಲ್ಲಿ ಆ.೧೩ ರಂದು ಬೆಳಗ್ಗೆ ೧೧ ಗಂಟೆಗೆ ಪ್ರತಿಭಟನಾ ಧರಣಿಯನ್ನು ಆರಂಭಿಸಿ ಆ.೧೫ ರಂದು ಸ್ವತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಕಪ್ಪುಪಟ್ಟಿ ಧರಿಸಿ ಬಾಗವಹಿಸುತ್ತೇವೆ ಎಂದು ಎಚ್ಚರಿಸಿದರು.

ಅಂಬೇಡ್ಕರ್ ಭವನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಸಂಪೂರ್ಣ ಅಭಿವೃದ್ಧಿಪಡಿಸಿ ಒಂದು ಮಾದರಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕೆಂದು ಸ್ಥಳೀಯ ಶಾಸಕ ಹೆಚ್.ಡಿ. ತಮ್ಮಯ್ಯ ಅವರನ್ನು ಆಗ್ರಹಿಸಿದರು.

ವಿಧಾನಸಭಾ ಕ್ಷೇತ್ರದಲ್ಲಿ ೫೨ ಅಂಬೇಡ್ಕರ್ ಭವನದಲ್ಲಿ ೨೭ ಕಾಮಗಾರಿಗಳು ನಿರ್ಮಾಣವಾಗಿಲ್ಲ, ಹೆಚ್ಚುವರಿಯಾಗಿ ೨೫ ಅಂಬೇಡ್ಕರ್ ಭವನ ನಿರ್ಮಿಸಲು ಒಟ್ಟು ೬ ಕೋಟಿ ಅನುದಾನದಲ್ಲಿ ೧ ಕೋಟಿ ರೂಗಳನ್ನು ಮಾತ್ರ ಸಂಬಂಧಪಟ್ಟ ಇಲಾಖೆಗೆ ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.

ಈವರೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೈಗೊಳ್ಳಲಾಗುವ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿಲ್ಲ. ಆಗಸ್ಟ್ ತಿಂಗಳಾದರೂ ನಿಗಮದಿಂದ ಯಾವುದೇ ಅಧಿಸೂಚನೆ ಹೊರಡಿಸಿಲ್ಲ ಎಂದು ಆರೋಪಿಸಿದರು.

ನಮ್ಮ ಹಕ್ಕಿಗಾಗಿ ಸಮಾಜದ ಪರವಾಗಿ ಸರ್ಕಾರದ ಗಮನ ಸೆಳೆಯಲು ಆಯೋಜಿಸಿರುವ ಈ ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಹೊರತುಪಡಿಸಿ ದಲಿತಪರವಾದ ಚಿಂತಕರು, ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸೀತಾರಾಂಭರಣ್ಯ, ಹಂಪಯ್ಯ, ಕೊಲ್ಲಾಬೋವಿ, ಕೇಶವ, ಬೀರಪ್ಪ, ಕೃಷ್ಣಮೂರ್ತಿ, ರೇವನಾಥ್ ಉಪಸ್ಥಿತರಿದ್ದರು.

Silent protest by BJP SC Morcha

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...