ಚಿಕ್ಕಮಗಳೂರು: ತಾಲೂಕಿನ ಸತ್ತಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಗ್ರಾಪಂ ಅಧ್ಯಕ್ಷ ರಾಮಯ್ಯ ಅವರು ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಧ್ರುವ ಕುಮಾರ್ ತಿಳಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಫಂ ಮಾಜಿ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಲ್ ಗಳಿಗೆ ಸಹಿ ಮಾಡಿದ್ದಾರೆ. ಪಿಡಿಒ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಬಿಲ್ ಮಂಜೂರು ಮಾಡಿದ್ದಾರೆ ಎಂಬ ಆರೋಪದಲ್ಲಿ ಹುರುಳಿನ ಎಂದರು.
ತಾವು ಗ್ರಾಪಂ ಅಧ್ಯಕ್ಷರಾಗಿದ್ದಾಗ 2024-25ನೇ ಸಾಲಿನ ಹಣಕಾಸು ಯೋಜನೆ ಅಡಿ ಕಾಮಗಾರಿಗಳಿಗೆ ಸಭೆಯಲ್ಲಿಯೇ ಕ್ರಿಯಾ ಯೋಜನೆ ತಯಾರಿಸಿ ಕಾರ್ಯದೇಶ ನೀಡಲಾಗಿತ್ತು. ಬಳಿಕ ಗುತ್ತಿಗೆದಾರರು ಕಾಮಗಾರಿ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಸಂಬಂಧಿಸಿದ ಇಲಾಖೆಗಳು ಕಾಮಗಾರಿಯ ಬಿಲ್ ನೀಡಿವೆ. ಹೀಗೆ ಗ್ರಾಫಂಗೆ ಬಂದ ಬಿಲ್ ಗಳನ್ನು ಪರಿಶೀಲನೆ ನಡೆಸಿ, ಜಿಪಿಎಸ್ ಮಾಡಿ ಪಾಸ್ ಮಾಡಲಾಗಿದೆ. ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡುವ ಮೊದಲೇ ಈ ಎಲ್ಲ ಬಿಲ್ ಗಳಿಗೆ ಸಹಿ ಮಾಡಿದ್ದೇನೆ. ಆದರೆ ತಾಂತ್ರಿಕ ದೋಷದಿಂದ ಗುತ್ತಿಗೆದಾರರಿಗೆ ಹಣ ಬಿಡುಗಡೆಯಾಗುವುದು ನಾಲ್ಕೈದು ದಿನ ತಡವಾಗಿರಬಹುದು. ಇದಕ್ಕೆ ತಾವು ಯಾವುದೇ ಕಾರಣಕ್ಕೂ ಹೊಣೆಯಲ್ಲ ಎಂದರು.
ಹಾಗೂ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕಾಮಗಾರಿಯನ್ನು ನಡೆಸದೆ ಯಾವುದೇ ಬಿಲ್ ಮಾಡಿಲ್ಲ. ನನ್ನ ಅವಧಿಯಲ್ಲಿ ಅಕ್ರಮ ನಡೆದಿದೆ ಎನ್ನುವುದಾದರೆ ಯಾವುದೇ ತನಿಖೆ ಎದುರಿಸಲು ಸಿದ್ಧನಾಗಿದ್ದೇನೆ. ಗ್ರಾಪಂ ಪಿಡಿಒ ತುಂಬಾ ಶಿಸ್ತಿನವರಾಗಿದ್ದಾರೆ. ಇದನ್ನು ಇಂದಿನ ಅಧ್ಯಕ್ಷರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣದಿಂದಾಗಿ ಪಿಡಿಒ ಮೇಲೆ ಸುಳ್ಳು ಆರೋಪ ಮಾಡಿ ಅವರನ್ನು ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಸದಸ್ಯರಾದ ಪದ್ಮಶ್ರೀ, ಗೀತಾ, ರಮ್ಯಾ ಉಪಸ್ಥಿತರಿದ್ದರು
Allegations of Sattihalli Grama Panchayat mismanagement are far from the truth.
Leave a comment