Home namma chikmagalur ಭದ್ರಾ ಅಭಯಾರಣ್ಯದಲ್ಲಿ ನಡೆದ ಕಾದಾಟದಲ್ಲಿ ಹುಲಿ ಸಾವು
namma chikmagalurchikamagalurHomeLatest News

ಭದ್ರಾ ಅಭಯಾರಣ್ಯದಲ್ಲಿ ನಡೆದ ಕಾದಾಟದಲ್ಲಿ ಹುಲಿ ಸಾವು

Share
Share

ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿ ಲಕ್ಕವಳ್ಳಿ ವಲಯದ ಸಾವೇ ಅರಣ್ಯ ಪ್ರದೇಶದ ಕೂಟ್ ರಸ್ತೆಯಲ್ಲಿ ಅಂದಾಜು ಏಳು ವರ್ಷ ಪ್ರಾಯದ ಹೆಣ್ಣು ಹುಲಿಯೊಂದು ಮೃತಪಟ್ಟಿದೆ. ಎರಡು ಹುಲಿಗಳ ನಡುವಿನ ಕಾದಾಟದಲ್ಲಿ ಹುಲಿ ಮೃತಪಟ್ಟಿದೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎಂಬAತೆ ಮೃತ ಹುಲಿಯ ದೇಹದಲ್ಲಿ ಕದಾಟದ ಗಾಯಗಳ ಗುರುತು ಪತ್ತೆಯಾಗಿದೆ.

ಎನ್.ಆರ್.ಪುರ ಸರ್ಕಾರಿ ಪಶುವೈದ್ಯ ಶಿವಕುಮಾರ್ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜಿನ ವೈದ್ಯರು ಸಹಕರಿಸಿದರು. ಹುಲಿ ದೇಹದ ಕೆಲವು ತುಣುಕು ಮತ್ತು ರಕ್ತ ಮಾದರಿ ಸಂಗ್ರಹಿಸಿ ಸಾವಿನ ನಿಖರ ಮಾಹಿತಿ ತಿಳಿಯಲು ಉನ್ನತ ಮಟ್ಟದ ಪ್ರಯೋಗಲಕ್ಕೆ ಕಳುಹಿಸಲು ತೀರ್ಮಾನಿಸಲಾಯಿತು.

ಸ್ಥಳದಲ್ಲಿ ಲೋಹ ಪರಿಶೋಧಕ ಯಂತ್ರ ಬಳಸಿ ದೇಹದ ಮೇಲೆ ಲೋಹ, ಮದ್ದು ಗುಂಡು ಯಾವುದಾದರೂ ಇದೆಯೇ? ಎಂದು ಪರಿಶೀಲನೆ ನಡೆಸಲಾಯಿತು. ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಯಮಗಳ ಪ್ರಕಾರ ಸೂಕ್ತ ಕ್ರಮಗಳನ್ನು ಅನುಸರಿಸಿ ಎಲ್ಲ ರೀತಿಯಲ್ಲೂ ಹುಲಿ ಕಳೇಬರ ಪರಿಶೀಲನೆ ಮಾಡಲಾಯಿತು.

ಬಳಿಕ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲೇ ಹುಲಿಯ ಕಳೇಬರ ಸುಡಲಾಯಿತು. ಲಕ್ಕವಳ್ಳಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಸಾಗರ್, ವಲಯ ಅರಣ್ಯಾಧಿಕಾರಿ ಸಂತೋಷ್ ಸೂರಿಮಠ, ಗೌರವ ವನ್ಯಜೀವಿ ಪರಿಪಾಲಕ ಜಿ.ವೀರೇಶ್, ವೈಲ್ಡ್ ಕೇರ್ ಸಂಸ್ಥೆಯ ಮುಖ್ಯಸ್ಥ ಮಧು ಮೂಗ್ತಿಹಳ್ಳಿ, ಶಿವಮೊಗ್ಗದ ವನ್ಯಜೀವಿ ಮಾಜಿ ಪರಿಪಾಲಕ ವಿನಾಯಕ, ಸ್ಥಳೀಯ ಪಂಚಾಯಿತಿ ಪ್ರತಿನಿಧಿಗಳು ಸೇರಿದಂತೆ ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು, ಸಿಬ್ಬಂದಿ ಮರಣೋತ್ತರ ಪರೀಕ್ಷೆ ವೇಳೆ ಹಾಜರಿದ್ದರು.

Tiger dies in fight at Bhadra Sanctuary

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...