Home namma chikmagalur ಸೀಗೋಡಿನಲ್ಲಿ 299 ಅನಧಿಕೃತ ರಸಗೊಬ್ಬರ ಚೀಲ ಪತ್ತೆ
namma chikmagalurchikamagalurHomeLatest News

ಸೀಗೋಡಿನಲ್ಲಿ 299 ಅನಧಿಕೃತ ರಸಗೊಬ್ಬರ ಚೀಲ ಪತ್ತೆ

Share
Share

ಚಿಕ್ಕಮಗಳೂರು:  ಕೊಪ್ಪ ತಾಲ್ಲೂಕಿನ ಸಿಗೋಡು ಗ್ರಾಮದಲ್ಲಿರುವ ಸುಭಾಷ್‌ನಗರ ಪ್ರದೇಶದಲ್ಲಿ ನಡೆಯುತ್ತಿದ್ದ ಅನಧಿಕೃತ ರಸಗೊಬ್ಬರ ದಾಸ್ತಾನು ಹಾಗೂ ಸಾಗಾಟ ಪ್ರಕರಣವನ್ನು ಪತ್ತೆಹಚ್ಚಿರುವ ಕೃಷಿ ಮತ್ತು ಪೊಲೀಸ್ ಇಲಾಖೆ ಸುಮಾರು ೫ ಲಕ್ಷ ರೂ. ಮೌಲ್ಯದ ೨೯೯ ಯೂರಿಯಾ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದೆ.

ನಿನ್ನೆ (ಆಗಸ್ಟ್೭) ಮಧ್ಯಾಹ್ನ ಜರುಗಿದ ಈ ಜಂಟಿ ಕಾರ್ಯಾಚರಣೆಯಲ್ಲಿ ರಸಗೊಬ್ಬರ ಮಾರಾಟ ಪರವಾನಗಿ ಅಥವಾ ಇ-ವೇ ಬಿಲ್‌ಗಳಿಲ್ಲದೇ, ಸುಭಾಷ್‌ನಗರದ ಮನೆಯೊಂದರ ಮುಂಭಾಗ ಲಾರಿ (ವಾಹನ ಸಂಖ್ಯೆ ಕೆ.ಎ.೦೩ ಎಎ ೩೯೨೪)ಯಲ್ಲಿ ೨೨೦ ಯೂರಿಯಾ ರಸಗೊಬ್ಬರ ಚೀಲಗಳನ್ನು ಲೋಡ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅದೇ ಮನೆಯ ಗೋದಾಮಿನಲ್ಲಿ ಇನ್ನೂ ೭೯ ಯೂರಿಯಾ ಚೀಲಗಳನ್ನು ಕಾನೂನು ಬಾಹಿರವಾಗಿ ದಾಸ್ತಾನಿರಿಸಿರುವುದು ಪತ್ತೆಯಾಗಿದೆ.

ರಸಗೊಬ್ಬರ ನಿಯಂತ್ರಣ ಆದೇಶ ೧೯೮೫ (ಕಲಂ ೭ ಮತ್ತು ೮) ಹಾಗೂ ಅಗತ್ಯ ವಸ್ತುಗಳ ಕಾಯ್ದೆ ೧೯೫೫ರ ಉಲ್ಲಂಘನೆಯಾಗಿರುವ ಕಾರಣ ಒಟ್ಟು ೨೯೯ (ಅಂದಾಜು ರೂ. ೫ ಲಕ್ಷ ಮೌಲ್ಯ) ಯೂರಿಯಾ ಚೀಲಗಳನ್ನು ಕೃಷಿ ಇಲಾಖಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಜಪ್ತಿಯಾದ ರಸಗೊಬ್ಬರವನ್ನು ಬಾಳೆಹೊನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮಿನಲ್ಲಿ ಸುರಕ್ಷಿತವಾಗಿ ದಾಸ್ತಾನಿರಿಸಲಾಗಿದ್ದು, ಮಾದರಿಗಳನ್ನು ವಿಧಾಯಕ ಹಾಗೂ ಗುಣಮಟ್ಟ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.

ಅಕ್ರಮ ಸಾಗಾಟಕ್ಕೆ ಬಳಸುತ್ತಿದ್ದ ಲಾರಿ ಮತ್ತು ಮಾಲೀಕ ವಿಲ್ಫ್ರೆಡ್ ಕ್ಲೋಡ್ ಲೋಬೊ ಎಂಬಾತನನ್ನು ಬಾಳೆಹೊನ್ನೂರು ಪೊಲೀಸ್ ಠಾಣಾಧಿಕಾರಿಗಳಿಗೆ ಒಪ್ಪಿಸಲಾಗಿದೆ. ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ತಿಮ್ಮನಗೌಡ ಎಸ್.ಪಾಟೀಲ್ ನೀಡಿರುವ ದೂರಿನ ಮೇರೆಗೆ ಬಾಳೆಹೊನ್ನೂರು ಠಾಣೆಯ ಪಿಎಸ್‌ಐ ರವೀಶ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ರೈತರಿಗೆ ಸರ್ಕಾರದ ಮೂಲಕ ಸರಿಯಾದ ದರದಲ್ಲಿ ಗುಣಮಟ್ಟದ ರಸಗೊಬ್ಬರ ದೊರಕಿಸಿಕೊಡಲು ಜಿಲ್ಲಾಡಳಿತ ಬದ್ಧವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಹಾಗೂ ಕೃಷಿ ಇಲಾಖೆಯ ಜಂಟಿ ಪರಿಶೀಲನೆ ಮುಂದುವರೆಯಲಿದೆ. ಯಾವುದೇ ಅಕ್ರಮ ದಾಸ್ತಾನು, ಸಾಗಾಟ ಅಥವಾ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

299 bags of illegal fertilizer found in Seagod

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...