Home Latest News ಆರ್‌ಟಿಒ ಕಚೇರಿಯ ಅಧೀಕ್ಷಕ ತಿಪ್ಪೇಶಪ್ಪ ಸಾವು
Latest NewsajjampuraCrime NewsHomenamma chikmagalur

ಆರ್‌ಟಿಒ ಕಚೇರಿಯ ಅಧೀಕ್ಷಕ ತಿಪ್ಪೇಶಪ್ಪ ಸಾವು

Share
Share

ದಾವಣಗೆರೆ: ನಗರದ ನಿಜಲಿಂಗಪ್ಪ ಬಡಾವಣೆಯ ರಿಂಗ್‌ ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಕಚೇರಿಯ ಅಧೀಕ್ಷಕ ಪಿ.ತಿಪ್ಪೇಶಪ್ಪ (45) ಮೃತಪಟ್ಟವರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಶಿವನಿಯ ಇವರು ಆರ್‌ಟಿಒ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

‘ತಿಪ್ಪೇಶ್‌ ಅವರು ಜೆ.ಎಚ್‌. ಪಟೇಲ್‌ ಬಡಾವಣೆಯ ಮನೆಯಿಂದ ಶುಕ್ರವಾರ ಬೆಳಿಗ್ಗೆ ರಿಂಗ್‌ ರಸ್ತೆಯ ಮೂಲಕ ಆರ್‌ಟಿಒ ಕಚೇರಿಗೆ ತೆರಳುತ್ತಿದ್ದರು.

ಎಜು ಏಷಿಯಾ ಶಾಲೆಯ ಸಮೀಪ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಸವಾರನ ತಲೆಯ ಮೇಲೆ ಬಸ್‌ ಹಿಂಬದಿ ಚಕ್ರಗಳು ಹರಿದಿವೆ’ ಎಂದು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

RTO office superintendent Thippeshappa passes away

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...