Home Latest News ಕುರಕುಚ್ಚಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ-ಇಬ್ಬರ ಬಂಧನ
Latest NewsCrime NewsHomenamma chikmagalurTarikere

ಕುರಕುಚ್ಚಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ-ಇಬ್ಬರ ಬಂಧನ

Share
Share

ಚಿಕ್ಕಮಗಳೂರು: ತಂಗಿಯನ್ನು ಕೊಲೆಗೈದಿದ್ದ ಭಾವನನ್ನು ಬಾಮೈದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತರೀಕೆರೆ ತಾಲೂಕಿನ ಕುರಕುಚ್ಚಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಚರಣ್ (೨೩) ಕೊಲೆಯಾದ ದುರ್ದೈವಿ. ಆರೋಪಿಗಳಾದ ಚರಣ್ ಅವರ ಬಾಮೈದ ಸಂತೋಷ್ ಹಾಗೂ ಸಚಿನ್ ನಾಯಕ್ ಅವರನ್ನು ಲಕ್ಕವಳ್ಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಚರಣ್ ಅವರು ಸಂತೋಷ್ ಅವರ ತಂಗಿ ಮೇಘನಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ತನ್ನನ್ನು ಬಿಟ್ಟು ತವರಿಗೆ ಹೋದಳು ಎಂಬ ಕಾರಣಕ್ಕೆ ಚರಣ್ ೨೦೨೪ರ ಏಪ್ರಿಲ್ ೨೯ ರಂದು ಪತ್ನಿ ಮೇಘನಾ ಬಟ್ಟೆ ತೊಳೆಯಲು ಹೋದಾಗ ಅವರನ್ನು ಕೊಲೆ ಮಾಡಿ ಶವವನ್ನು ಕಾಲುವೆಗೆ ಬಿಸಾಕಿದ್ದ. ಪತ್ನಿ ಕೊಲೆಗೈದು ಜೈಲು ಸೇರಿದ್ದ ಚರಣ್, ಮೂರು ತಿಂಗಳ ಹಿಂದೆ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ.

ಚರಣ್ ಅವರು ವರ ಮಹಾಲಕ್ಷ್ಮಿ ಹಬ್ಬಕ್ಕೆ ಊರಿಗೆ ಬಂದು ವಾಪಸ್ ಬಾವಿಕೆರೆಯಿಂದ ಕರಕುಚ್ಚಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸಂತೋಷ್ ಹಾಗೂ ಆತನ ಸ್ನೇಹಿತ ಸಚಿನ್ ನಾಯಕ್ ಅವರುಗಳು ಮಾರಕಾಸ್ತ್ರಗಳಿಂದ ಚರಣ್ ಮೇಲೆ ಹಲ್ಲೆ ನಡೆಸಿ ಆತನನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಲು ತರೀಕೆರೆ ಡಿವೈಎಸ್ಪಿ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಲಾಗಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರು ತಿಳಿಸಿದ್ದಾರೆ.

Man murdered in Karakuchi village two arrested

 

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...