Home namma chikmagalur ಸಮಾಜವು ಸಂಘಟಿತರಾದರೆ ಮಾತ್ರ ಅಭಿವೃದ್ದಿ ಸಾಧ್ಯ
namma chikmagalurchikamagalurHomeLatest News

ಸಮಾಜವು ಸಂಘಟಿತರಾದರೆ ಮಾತ್ರ ಅಭಿವೃದ್ದಿ ಸಾಧ್ಯ

Share
Share

ಚಿಕ್ಕಮಗಳೂರು:  ಮಡಿವಾಳ ಸಮಾಜವು ಎಲ್ಲಾ ಸಮಾಜಕ್ಕಿಂತ ಚಿಕ್ಕ ಜನಾಂಗವಾಗಿದೆ. ಸಮಾಜ ಬಾಂಧವರು ಒಂದುಗೂಡಿ ಸರ್ಕಾರದ ಯೋಜನೆಗಳನ್ನು ಪಡೆದುಕೊಂಡು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ಚಿತ್ರದುರ್ಗದ ಮಹಾಸಂಸ್ಥಾನ ಮಠದ ಶ್ರೀ ಬಸವ ಮಾಚಿದೇವ ಮಹಾ ಸ್ವಾಮೀಜಿ ಹೇಳಿದರು.

ನಗರದ ಬಸವನಹಳ್ಳಿ ಸಮೀಪದ ಜಿಲ್ಲಾ ಮಡಿವಾಳ ಸಂಘದ ಭವನದಲ್ಲಿ ಭಾನುವಾರ ಏರ್ಪಡಿಸಿ ದ್ಧ ‘ಮನ ಮನೆಗೆ ಮಾಚಿದೇವ’ ಶ್ರಾವಣ ಮಾಸದ ನಿಮಿತ್ಯ ವಿಶೇಷ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆರ್ಶೀವಚನ ನೀಡಿ ಸಮಾಜ ಮತ್ತು ಸಮುದಾಯದ ಒಳಿತಿಗಾಗಿ ಮಾಚಿದೇವರ ಆದೇಶ ಮಾಡುತ್ತಾರೋ ಅಂತಹ ಕಾ ರ್ಯವನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತೇವೆ. ಸಮುದಾಯದವರು ಸಂಘಟಿತರಾದರೆ ಮಾತ್ರ ಸಮಾ ಜವು ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಮುನ್ನೆಲೆಗೆ ಬರಲು ಸಾಧ್ಯ ಎಂಬುದು ಅರಿತುಕೊಳ್ಳಬೇಕು ಎಂದರು.

ಮಡಿವಾಳ ಸಮಾಜದ ಮುಂದಿನ ಪೀಳಿಗೆ ಉಳಿಸಿ ಬೆಳೆಸಲು ಇಂದಿನಿಂದಲೇ ಜನಾಂಗದ ಮುಖ ಂಡರು ಪ್ರಜ್ಞಾವಂತರಾಗಬೇಕು. ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕಿನ ಮಡಿವಾಳ ಸಂಘದ ಅರಿವನ್ನು ಮೂಡಿಸುವುದು ಜಿಲ್ಲಾ ಮುಖಂಡರುಗಳ ಕರ್ತವ್ಯವಾಗಿದ್ದು ಆಗ ಮಾತ್ರ ಮಡಿವಾಳ ಜೀವನ ಉದ್ದಾರವಾ ಗಲು ಸಾಧ್ಯ ಎಂದು ತಿಳಿಸಿದರು.

ರಾಜಕೀಯವಾಗಿ ಜನಾಂಗದ ಯಾವುದೇ ಮುಖಂಡರುಗಳು ಜನಪ್ರತಿನಿಧಿಗಳಾಗಿಲ್ಲ. ಆ ನಿಟ್ಟಿನಲ್ಲಿ ಜಿ ಲ್ಲಾವಾರು ಮುಖಂಡರುಗಳೇ ಒಟ್ಟಾಗಿ ಕೈಜೋಡಿಸಬೇಕು. ಪ್ರತಿ ಜಿಲ್ಲೆಗಳಲ್ಲಿ ಸರ್ಕಾರದ ಸೌಲಭ್ಯ ಹಾಗೂ ದಾನಿಗಳ ಸಹಕಾರದಲ್ಲಿ ಒಂದೊಂದು ಭವನವನ್ನು ನಿರ್ಮಿಸಿಕೊಂಡಲ್ಲಿ ಆರ್ಥಿಕ ಏಳಿಗೆ ಹೊಂದುವ ಜೊ ತೆಗೆ ಸಮಾಜವು ಅಭಿವೃಧ್ದಿ ಹೊಂದಲಿದೆ ಎಂದರು.

ಚಿಕ್ಕಮಗಳೂರಿನ ಭವ್ಯವಾದ ಸಮುದಾಯ ಭವನ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಕಟ್ಟಡದ ಅಭಿವೃಧ್ದಿಗೂ ಮಠದಿಂದ ಮುಖ್ಯಮಂತ್ರಿಗಳಿಗೆ ಅನುದಾನಕ್ಕೆ ಕೋರಿ ಪತ್ರವು ಬರೆಯಲಾಗಿದೆ ಎಂ ದ ಅವರು ಮುಂದಿನ ಶ್ರಾವಣ ಮಾಸದ ಆರಂಭದೊಳಗೆ ಕಟ್ಟಡವನ್ನು ಸಂಪೂರ್ಣಗೊಳಿಸಿ ಉದ್ಘಾಟಿಸಲು ಜನಾಂಗವು ಮುಂದಾಗಬೇಕಿದೆ ಎಂದು ತಿಳಿಸಿದರು.

ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ ಜಿಲ್ಲೆಯಲ್ಲಿ ಸುಮಾರು ೧೦ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಸಮಾಜದವರು ನೆಲೆಸಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಸಮಾಜದ ಏಳಿ ಗೆಗೆ ಸರ್ವರು ಒಗಟ್ಟಿನಿಂದ ಕೈಜೋಡಿಸಿದಾಗ ಮಾತ್ರ ಭವನದ ಕಟ್ಟಡವನ್ನು ಪೂರ್ಣಗೊಳಿಸಿ ಲೋಕಾರ್ಪ ಣೆಗೊಳಿಸಲು ಸಾಧ್ಯವಾಗಲಿದೆ ಎಂದರು.

ಈಗಾಗಲೇ ಸರ್ಕಾರದಿಂದ ಅನುದಾನವು ಹಂತ ಹಂತವಾಗಿ ಬಿಡುಗಡೆಗೊಂಡು ಶೇ.೮೫ರಷ್ಟು ಕಟ್ಟಡ ಪೂರ್ಣಗೊಂಡಿದೆ. ಇನ್ನಷ್ಟು ಸಣ್ಣಪುಟ್ಟ ಕೆಲಸಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಜನಾಂಗದ ಮುಖಂಡರು ಕಟ್ಟಡಕ್ಕೆ ಅವಶ್ಯವಿರುವ ವಸ್ತುಗಳನ್ನು ಖರೀದಿಸಿಕೊಟ್ಟಲ್ಲಿ ಸಹಾಯವಾಗಲಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿಯವರಿಗೆ ಭಕ್ತಾಧಿಗಳು ಪಾದ ಪೂಜೆ ನೆರವೇರಿಸಿದರು. ಇದೇ ವೇಳೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಅತಿಹೆಚ್ಚು ಅಂಕ ಗಳಿ ಸಿದ ಸಮಾಜದ ಮುಖಂಡರುಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪ್ರಸನ್ನ ದೇವನೂರು, ಕಾರ್ಯದರ್ಶಿ ರಾಮಚಂದ್ರ, ಸಮಾಜ ದ ಮುಖಂಡರಗಳಾದ ಷಡಕ್ಷರಿ, ಜಗದೀಶ್, ಸತೀಶ್, ಗುರುತಮೂರ್ತಿ, ನವೀನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Development is possible only if society is organized.

 

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...