ಮೂಡಿಗೆರೆ: ತಾಲ್ಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ಭಾನುವಾರ ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಕ್ಕನಾಯಕನಹಳ್ಳಿಯ ಭಾಗ್ಯಶ್ರೀ, ಪುಷ್ಪ, ಗಾಯತ್ರಿ, ವಿದ್ಯಾಶ್ರೀ ಹಾಗೂ ಹರೀಶ್ ಗಾಯಗೊಂಡವರು. ಧರ್ಮಸ್ಥಳದಿಂದ ಹೊಸಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಚಿಕ್ಕನಾಯಕನಹಳ್ಳಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರು, ಘಾಟಿಯ ತಿರುವಿನಲ್ಲಿ ಡಿಕ್ಕಿ ಹೊಡೆದವು. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ.
ಗಾಯಗೊಂಡ ನಾಲ್ವರೂ ಒಂದೇ ಕುಟುಂಬದವರಾಗಿದ್ದು, ಅವರನ್ನು ತಕ್ಷಣವೇ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತು.
ಸ್ಥಳಕ್ಕೆ ಬಂದ ಬಣಕಲ್ ಪೊಲೀಸರು ಅಪಘಾತಗೊಂಡ ವಾಹನಗಳನ್ನು ತೆರವುಗೊಳಿಸಿ, ಸಂಚಾರ ಅನುವು ಮಾಡಿಕೊಟ್ಟರು. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bus-car collision at Charmadi Ghat
Leave a comment