ಚಿಕ್ಕಮಗಳೂರು: ಲೋಕಾಯುಕ್ತ ಅಧಿಕಾರಿಗಳು ಚಿಕ್ಕಮಗಳೂರು ಆರ್ ಟಿ ಓ ಕಛೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಆರ್ ಟಿ ಓ ಕಚೇರಿಯಲ್ಲಿ ಅತಿ ಹೆಚ್ಚು ಭ್ರಷ್ಟಚಾರ ನಡೆಯುತ್ತಿರುವ ಆರೋಪ ನಿರಂತರವಾಗಿ ಕೇಳಿ ಬಂದ ಹಿನ್ನಲೆಯಲ್ಲಿ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಕೇಶ್ ಕುಮಾರ್, ಇನ್ಸ್ಪೆಕ್ಟರ್ಗಳಾದ ಮಂಜುನಾಥ್ ಹಾಗೂ ವಿಜಯ್ ಕುಮಾರ್ ಅವರ ಕೊಠಡಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಪೊಲೀಸರು ದಾಳಿ ನಡೆಸುತ್ತಿದ್ದಂತೆಯೇ ದಲ್ಲಾಳಿಗಳು ದಿಕ್ಕಾಪಾಲಾಗಿ ಓಡಿದ್ದಾರೆ. ಜನಸಾಮಾನ್ಯರು ಸಾರಿಗೆ ಇಲಾಖೆಯ ಕೆಲಸಗಳನ್ನು ಮಾಡಿಸಿಕೊಳ್ಳಲು ಕಚೇರಿಗೆ ತೆರಳಿದ ಸಂದರ್ಭದಲ್ಲಿ ಸಿಬ್ಬಂದಿಗಳು ನೇರವಾಗಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದ ಆರೋಪಗಳು ಕೇಳಿ ಬರುತ್ತಿದ್ದವು.
ಈ ವರ್ಷದ ಆರಂಭದಲ್ಲೇ ಲೋಕಾಯುಕ್ತ ಅಧಿಕಾರಿಗಳು ಆರ್ ಟಿ ಓ ಕಚೇರಿ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದರೂ ಬುದ್ದಿ ಕಲಿಯದ್ದರಿಂದ ಮತ್ತೊಮ್ಮೆ ಲೋಕಾಯುಕ್ತ ಅಧಿಕಾರಿಗಳು ಕಚೇರಿ ಮೇಲೆ ದಾಳಿ ನಡೆಸಿ ಬಿಸಿಮುಟ್ಟಿಸಿದ್ದಾರೆ.
Lokayukta raids RTO office
Leave a comment