Home ಅಮೇರಿಕದ ವ್ಯಾಪಾರ ಒಪ್ಪಂದ ನೀತಿ ಖಂಡಿಸಿ ರೈತ ಸಂಘ ಪ್ರತಿಭಟನೆ
HomechikamagalurLatest Newsnamma chikmagalur

ಅಮೇರಿಕದ ವ್ಯಾಪಾರ ಒಪ್ಪಂದ ನೀತಿ ಖಂಡಿಸಿ ರೈತ ಸಂಘ ಪ್ರತಿಭಟನೆ

Share
????????????????????????????????????
Share

ಚಿಕ್ಕಮಗಳೂರು: ರಾಷ್ಟ್ರೀಯ ಸಾರ್ವಭೌಮತ್ವ, ಜನರ ಜೀವನಕ್ಕೆ ಧಕ್ಕೆ ತರುವ ಎಲ್ಲಾವ್ಯಾಪಾರ ಮಾತುಕತೆಗಳನ್ನು ಕೇಂದ್ರಸರ್ಕಾರ ಹಿಂಪಡೆಯಬೇಕೆಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ಬುಧವಾರ ತಾಲೂಕು ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.

ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ಟ್ರಂಪ್ ಬೆದರಿಕೆಗೆ ಮತ್ತು ಐರೋಪ್ಯ ಒಪ್ಪಂದದ ವಿರುದ್ಧ ಪಾಶ್ಚಿಮಾತ್ಯ ಸಾಮ್ರಾಜ್ಯಶಾಹಿ ಶಕ್ತಿಗಳಿಗೆ ಭಾರತ ಅಡಿಯಾಳಾಗುತ್ತಿದ್ದು, ಕೇಂದ್ರ ಸರ್ಕಾರದ ವ್ಯಾಪಾರ ಒಪ್ಪಂದ ನೀತಿಯನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತಿ ಕಿಸಾನ್ ಮೋರ್ಚಾ ಮತ್ತು ರೈತ ಸಂಘದ ಮುಖಂಡರು ಹೇಳಿದರು.

ಭಾರತೀಯ ಸರಕಿನ ಮೇಲೆ ಶೇ.೩೫ ರಷ್ಟು ಸುಂಕ ವಿಧಿಸುವ, ರಷ್ಯಾದೊಂದಿಗೆ ತೈಲ ವ್ಯಾಪಾರದ ಮೇಆಲೆ ದಂಡನಾತ್ಮಕ ತೆರಿಗೆ ವಿಧಿಸುವ ಟ್ರಂಪ್ ಬೆದರಿಕೆಯನ್ನು ಆರ್ಥಿಕ ದಬ್ಬಾಳಿಕೆ ಎಮದು ಮನಗಾಣಬೇಕಾಗಿದೆ. ಭಾರತ ರಷ್ಯಾದೊಂದಿಗೆ ವ್ಯಾಪಾರ ಸಂಬಂಧಗಳನ್ನು ತ್ಯಜಿಸುವಂತೆ ಬಲವಂತವಾಗಿ ಹೇರಿಕೆ ಮಾಡಲಾಗುತ್ತಿದೆ. ಇದನ್ನು ಭಾರತ ತಿರಸ್ಕರಿಸಬೇಕೆಂದು ಒತ್ತಾಯಿಸಿದರು.

ವಿದೇಶಿ ಹಸ್ತಕ್ಷೇಪವಿಲ್ಲದೆ ಯಾವುದೇ ದೇಶದೊಂದಿಗೆ ವ್ಯಾಪರವನ್ನು ತೊಡಗಿಸಿಕೊಳ್ಳುವ ತನ್ನ ಸಾರ್ವಭೌಮ ಹಕ್ಕನ್ನು ಭಾರತ ಪ್ರತಿಪಾದಿಸಬೇಕು. ಅಮೇರಿಕದ ನಡೆಎದುರು ಕೇಂದ್ರ ಸರ್ಕಾರ ಮೌನವಾಗಿರುವುದು ಸಾಮ್ರಾಜ್ಯಶಾಹಿ ದೇಶಗಳಿಗೆ ಶರಣಾಗತಿ ಎಂದು ನಾವೆಲ್ಲ ತಿಳಿದುಕೊಳ್ಳಬೇಕಾಗುತ್ತದೆ ಎಂದು ತಹಸೀಲ್ದಾರ್‌ಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಲಾಗಿದೆ.

ದೇಶದ ರೈತರ ಜೀವನೋಪಾಯವನ್ನು ಧ್ವಂಸಗೊಳಿಸಲಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕಬಳಿಕೆಗೆ ಅನುವುಮಾಡಿಕೊಡಲಾಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸಲಾಗುತ್ತಿದೆ. ಔಷಧಿಕ್ಷೇತ್ರದಲ್ಲಿನ ಏಕಸ್ವಾಮ್ಯವನ್ನು ಬಲಪಡಿಸಲಾಗುತ್ತಿದೆ ಇದರಿಂದ ಜನಸಾಮಾನ್ಯರಿಗೆ ಆರೋಗ್ಯ ಸೇವೆ ಕೈಗೆಡುಕದಂತೆ ಕೇಂದ್ರ ಸರ್ಕಾರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಇತ್ತೀಚೆಗೆ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಸಿದ್ದರೂ ಜನವಿರೋಧಿ ನೀತಿಯನ್ನು ಹಿಂಪಡೆದುಕೊಂಡಿಲ್ಲ, ನೀರು, ಅರಣ್ಯ, ಭೂಮಿ ಮೇಲಿನ ದಾಳಿ ಖಂಡನೀಯವಾಗಿದೆ. ಕಾರ್ಪೋರೇಟ್ ಸಂಸ್ಥೆಗಳಿಗೆ ಭೂ ಕಬಳಿಕೆಯನ್ನು ಅನುವು ಮಾಡಿಕೊಡಲಾಗುತ್ತಿದ್ದು, ಸಾರ್ವಜನಿಕ ಸೇವಾಕ್ಷೇತ್ರವನ್ನು ಖಾಸಗೀಕರಣಗೊಳಿಸುವುದನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

ಕಷ್ಟಪಟ್ಟುಗಳಿಸಿದ ದೇಶದ ಪ್ರಜಾಪ್ರಭುತ್ವ, ಭದ್ರಬುನಾದಿಯಂತೆ ಹಾಕಿರುವ ಆರ್ಥಿಕ ಅಡಿಪಾಯವನ್ನು ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ ಜಿಲ್ಲಾ ಸಂಚಾಲಕ ಗೌಸ್‌ಮೊಹಿಯುದ್ದೀನ್, ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್, ಪ್ರಧಾನಕಾರ್ಯದರ್ಶಿ ಎಂ.ಬಿ.ಚಂದ್ರಶೇಖರ್, ರೈತ ಮುಖಂಡ ಗುರುಶಾಂತಪ್ಪ, ತಾಲೂಕು ಅಧ್ಯಕ್ಷ ವೈ.ಸಿ.ಸುನಿಲ್‌ಕುಮಾರ್, ಡಿ.ಆರ್.ಪುಟ್ಟಸ್ವಾಮೇಗೌಡ, ದೇವರಾಜೇಗೌಡ ಇದ್ದರು.

Farmers’ association protests against US trade deal policy

Share

Leave a comment

Leave a Reply

Your email address will not be published. Required fields are marked *

Don't Miss

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

ಪ್ರೀತಿ ನಿರಾಕರಣೆ : ಬಾಲಕಿ ಮೇಲೆ ಹಲ್ಲೆ

ಚಿಕ್ಕಮಗಳೂರು: ಕಾಫಿನಾಡಿನ ಹೃದಯ ಭಾಗದಲ್ಲಿರುವ ಎಸ್ಪಿ ಮತ್ತು ಡಿಸಿ ಕಚೇರಿ ಪಕ್ಕದಲ್ಲೇ ಇರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರನ್ನ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಕಡೂರು ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ಚಿಕ್ಕಮಗಳೂರಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡು...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...