ಚಿಕ್ಕಮಗಳೂರು: ನಗರದ ನಾಗರೀಕರಲ್ಲಿ ಸ್ವಚ್ಚತೆಯ ಬಗ್ಗೆ ಹೆಚ್ಚು ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಚತಾ ರ್ಯಾಲಿ, ಮ್ಯಾರಥಾನ್ ಫ್ಲಾಗಿಂಗ್ ಅಭಿಯಾನ ನಡೆಸಲಾಗುತ್ತಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.
ಅವರು ಇಂದು ತಾಲ್ಲೂಕು ಕಛೇರಿ ಆವರಣದಲ್ಲಿ ನಗರಸಭೆ, ಸ್ವಚ್ಚ ಭಾರತ್ ಮಿಷನ್, ೨.೦ ಯೋಜನೆಯಡಿಯಲ್ಲಿ ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವ ಸ್ವಚ್ಚತಾ ರ್ಯಾಲಿ, ಮ್ಯಾರಥಾನ್ ಫ್ಲಾಗಿಂಗ್ ಅಭಿಯಾನ, ಸಹಿ ಅಭಿಯಾನ ಜಾಥಕ್ಕೆ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
೨೦೦೧-೦೨ ರಲ್ಲಿ ನಗರದಲ್ಲಿ ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಚಾ ಟ್ರಸ್ಟ್ ಪ್ರಾರಂಭಿಸಲಾಯಿತು, ಮನೆ-ಮನೆ ಕಸ ಸಂಗ್ರಹದ ಮೂಲಕ ಸ್ವಚ್ಚತೆ ಕಾಪಾಡಬೇಕೆಂದು ನಾಗರೀಕರಲ್ಲಿ ಅರಿವು ಮೂಡಿಸಲಾಗಿತ್ತು, ಸ್ವಚ್ಚತೆ ಕಾಪಾಡುವಲ್ಲಿ ನಗರಸಭೆ ರಾಜ್ಯದಲ್ಲೇ ೨ನೇ ಸ್ಥಾನದಲ್ಲಿ ಇದೇ ಎಂದು ಹೇಳಿದರು.
ಪ್ರಪಂಚದಲ್ಲಿ ಸ್ವಿಡ್ಜರ್ ಲ್ಯಾಂಡ್ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದ್ದು, ಅದೇ ರೀತಿ ಮಿನಿ ಸ್ವಿಡ್ಜರ್ ಲ್ಯಾಂಡಾಗಿ ಚಿಕ್ಕಮಗಳೂರು ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ, ಪ್ಲಾಸ್ಟಿಕ್ ಬಾಟಲಿ, ಕಸ ಸಂಪೂರ್ಣವಾಗಿ ನಿಷೇಧಿಸಲಾಗದಿದ್ದರೂ ಕಡಿಮೆ ಮಾಡಿ ನಿಯಂತ್ರಿಸಬೇಕೆಂದು ಕರೆ ನೀಡಿದರು.
ಪ್ರಕೃತಿ ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಕೈ ಜೊಡಿಸಬೇಕು ಜೊತೆಗೆ ಜಲಮೂಲಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ಹಾಕಿ ಕಲಿಷಿತಗೊಳಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪರಿಸರ ಹಾಗೂ ನಗರಸಭೆ ಸಿಬ್ಬಂದಿಗಳಿಗೆ ಸೂಚನೆ ನೀಡಿ, ಬಾವಿ ಪ್ರಜೆಗಳಾದ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಸ್ವಚ್ಚತೆ ಬಗ್ಗೆ ಶಾಲೆಗಳಿಗೆ ತೆರಳಿ ಪರಿಸರ, ಪ್ರಕೃತಿ, ಕಸ ವಿಲೇವಾರಿ ಬಗ್ಗೆ ಪ್ರಾಥಮಿಕ ಹಂತದಲ್ಲಿ ಅರಿವು ಮೂಡಿಸಬೇಕಾದ ಅಗತ್ಯ ಇದೆ ಎಂದು ಹೇಳಿದರು.
ಬಸವತತ್ವ ಪೀಠ ತತ್ವದ ಪೀಠಾಧ್ಯಕ್ಷ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ ದೇವರನ್ನು ಹೊರತುಪಡಿಸಿ ಸ್ವಚ್ಚತೆ ಅಗತ್ಯವಾಗಿದ್ದು, ನಗರ ಅತ್ಯಂತ ಸ್ವಚ್ಚ ನಗರ ಎಂದು ಹೆಸರುಗಳಿಸಿದ್ದು, ಪ್ರವಾಸೋದ್ಯಮದ ಮೂಲಕ ಅತಿ ಹೆಚ್ಚು ಹೆಸರು ಮಾಡುವ ಅವಕಾಶ ಜಿಲ್ಲಾ ಕೇಂದ್ರಕ್ಕೆ ಇದೇ ಎಂದು ತಿಳಿಸಿದರು.
ನಗರದಲ್ಲಿ ವಾಸಿಸುವ ಎಲ್ಲರೂ ಸ್ವಚ್ಚತೆಯ ಬಗ್ಗೆ ಅಪಾರವಾದ ಕಾಳಜಿಯನ್ನು ವಹಿಸುವುದು ಅಗತ್ಯ ಎಂದು ಮನೆಯಲ್ಲಿ ಉತ್ಪತ್ತಿಯಾದ ಕಸವನ್ನು ಬೀದಿಗೆ ಹಾಕದೆ, ನಗರಸಭೆ ಗಂಟೆ ಗಾಡಿಗೆ ಹಾಕುವುದು ರೂಢಿಗತವಾಗಬೇಕೆಂದು ಕರೆ ನೀಡಿದರು. ಸ್ವಚ್ಚತೆ ಕುರಿತು ಗಂಭೀರ ಆಲೋಚನೆ ಮಾಡಬೇಕು ಈ ನಿಟ್ಟಿನಲ್ಲಿ ನಗರಸಭೆ ಮನೆ-ಮನೆ ಕಸ ಸಂಗ್ರಹಿಸಲು ಕೈಗೊಂಡ ದೊಡ್ಡ ಉಪಕ್ರಮದಿಂದ ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಈ ವಿಚಾರದಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯವಾಗಿದ್ದು ಸಣ್ಣ-ಸಣ್ಣ ಕೊಡುಗೆ ಬಹಳ ದೊಡ್ಡ ಪರಿಣಾಮ ಬೀರುತ್ತದೆ ಎಂದು ಕಿವಿಮಾತು ಹೇಳಿದರು. ನಗರಸಭಾ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ ಬೀದಿ ನಾಟಕ ಮತ್ತು ಗೋಡೆ ಬರಹಗಳ ಮೂಲಕ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ, ಇದರ ಜೊತೆಗೆ, ನಗರದ ನಾಗರೀಕರ ಮನೆ-ಮನೆ ಕಸ ಸಂಗ್ರಹಣೆಗೆ ಗಂಟೆ ಗಾಡಿಗಳ ಮೂಲಕ ಆದ್ಯತೆ ನೀಡಬೇಕೆಂದು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಕುಮಾರೆ ಗೌಡ, ಪರಮೇಶ್, ಲಕ್ಷ್ಮಣ್, ಸ್ವಚ್ಚ ಟ್ರಸ್ಟ್ನ ಡಾ. ಶುಭ ವಿಜಯ್, ಬ್ರಹ್ಮ ಕುಮಾರೀಸ್ನ ರಾಜಯೋಗಿನಿ ಬಿ.ಕೆ ಭಾಗ್ಯಕ್ಕ, ರೋಟರಿ ಮತ್ತು ಲಯನ್ಸ ಕ್ಲಬ್ ಸದಸ್ಯರು, ನಗರಸಭೆ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.
A cleanliness rally to create awareness among the public about cleanliness
Leave a comment