ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಹವಾಮಾನ ಇಲಾಖೆಯಿಂದ ಆಗಸ್ಟ್ ೧೭ ರಿಂದ ೨೦ರವರೆಗೆ ಜಿಲ್ಲೆಗೆ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರತೀ ಗಂಟೆಗೆ ಸುಮಾರು ೪೦-೫೦ ಕಿ.ಮೀ. ವೇಗದಲ್ಲಿ ನಿರಂತರ ಗಾಳಿ ಬೀಸುವ ಸಂಭವವಿದೆ
ಅತೀಯಾದ ಮಳೆಯಿಂದ ಧರೆ/ ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಕ್ತ ಮುಂಜಾಗೃತಾ ಕ್ರಮ ವಹಿಸಬೇಕಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ಹಾಗೂ ರಾಜ್ಯದ ವಿವಿಧ ಸ್ಥಳಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ತೆರಳುವಾಗ ಹಾಗೂ ಚಾರಣಿಗರು ಟ್ರೆಕ್ಕಿಂಗ್ ಮಾಡುವಾಗ ಎಚ್ಚರಿಕೆ ವಹಿಸಿ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Orange-Red Alert Declared for District 17-20
Leave a comment