ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾರಾಕಾರ ಮಳೆ ಮುಂದುವರೆದಿದ್ದು ಎಲ್ಲೆಡೆಯು ಪ್ರವಾಹದ ಸ್ಥಿತಿ ಮುಂದುವರಿದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜಮೀನು ಹಾಗೂ ತೋಟಗಳಿಗೆ ನೀರು ನುಗ್ಗಲಾರಂಭಿಸಿದೆ.
ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲುಸೀಮೆ ಭಾಗದಲ್ಲಿಯೂ ಭಾರಿ ಮಳೆ ಮುಂದುವರೆದಿದೆ. ಅದರಲ್ಲೂ ಮಲೆನಾಡು ಭಾಗದಲ್ಲಂತೂ ವಾಡಿಕೆಗಿಂತಲೂ ನಾಲ್ಕು ಪಟ್ಟು ಮಳೆ ಹೆಚ್ಚಾಗಿರುವುದರಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಶೃಂಗೇರಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ತುಂಗಾ ನದಿ ಅಹಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದಾಗಿ ಶೃಂಗೇರಿ ಪಟ್ಟಣದ ರಸ್ತೆಗಳು ಜಿಲಾವೃತವಾಗಿದ್ದು, ಶೃಂಗೇರಿ ದೇಗುಲದ ಕಪ್ಪೆ ನಾರಾಯಣ ದೇಗುಲ, ಗುರುಗಳ ಸಂಧ್ಯಾವಂದನೆ ಮಂಟಪವು ಮುಳುಗಡೆಯಾಗಿದೆ. ಶೃಂಗೇರಿಯ ಗಾಂಧಿ ಮೈದಾನ ಸೇರಿದಂತೆ ದೇವಸ್ಥಾನದ ಹಾರ್ಕಿಂಗ್ ಜಾಗದ ಹ್ಯಾರಲಲ್ ರಸ್ತೆಗಳು ಕೂಡ ಮುಳುಗಡೆಯಾಗಿವೆ.
ಇನ್ನು ಕೆಮ್ಮಣ್ಣುಗುಂಡಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಂಡೇಖಾನ್ ಹಳ್ಳದ ಮೇಲ್ಬಾಗದ ರಸ್ತೆಯಲ್ಲಿ ಗುಡ್ಡ ಕುಸಿತ ಆರಂಭಗೊಂಡಿದೆ. ಇದರಿಂದಾಗಿ ಕೆಸರು ಮಣ್ಣು ರಸ್ತೆ ಮೇಲೆ ಬಂದು ನಿಂತಿದ್ದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಕೆಲ ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನಿಂದ ರಸ್ತೆ ಮೇಲೆ ಹರಿಯುತ್ತಿದ್ದ ಕೆಸರು ನೀರನ್ನು ಬೇರೆ ಕಡೆ ತಿರುಗಿಸುವ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಅದಲ್ಲಿ ದೊಡ್ಡಮಟ್ಟದಲ್ಲಿ ಭೂ ಕುಸಿತ ಸಂಭವಿಸುವ ಸಾಧ್ಯತೆಯಿದೆ. ಇನ್ನು ಮಲೆನಾಡು ಭಾಗದ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಕಳಸ, ಚಿಕ್ಕಮಗಳೂರು ತಾಲೂಕುಗಳಲ್ಲಿಯೂ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ನದಿ, ಹಳ್ಳ ಕೊಳ್ಳಗಳು ಅಹಾಯದ ಮಟ್ಟ ಮೀರಿ ಹರಿಯಲಾರಂಭಿಸಿವೆ. ಹೀಗಾಗಿ ಜನರು ಹಾಗೂ ಪ್ರವಾಸಿಗರು ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಅಂಗನವಾಡಿ, ಶಾಲೆಗಳಿಗೆ ರಜೆ
ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದೂವರೆದಿದ್ದು, ಅ.೧೯ ರಂದು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಂಗನವಾಡಿ ಕೇಂದ್ರ, ಶಿಶುಪಾಲನಾ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಅವತಿ, ಜಾಗರ, ವಸ್ತಾರೆ, ಅಲ್ಲೂರು, ಖಾಂಡ್ಯ ಹೋಬಳಿಗಳು, ತರೀಕೆರೆ ತಾಲೂಕಿನ ಲಕ್ಕವಳ್ಳಿ ಮತ್ತು ಲಿಂಗದಹಳ್ಳಿ ಹೋಬಳಿಗಳು ಸೇರಿದಂತೆ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ ತಾಲೂಕು ವ್ಯಾಪ್ತಿಯಲ್ಲಿ ರಜೆ ಘೋಷಣೆ ಮಾಡಲಾಗಿದೆ.
Heavy rains in the coffee land Chikmagalur district
Leave a comment