Home namma chikmagalur ಇ-ಚಲನ್‌ನಲ್ಲಿ ಶೇಕಡಾ 50 ರಷ್ಟು ರಿಯಾಯಿತಿ
namma chikmagalurchikamagalurHomeLatest News

ಇ-ಚಲನ್‌ನಲ್ಲಿ ಶೇಕಡಾ 50 ರಷ್ಟು ರಿಯಾಯಿತಿ

Share
Share

ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

50 percent discount on e-challan

Share

Leave a comment

Leave a Reply

Your email address will not be published. Required fields are marked *

Don't Miss

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಕಾಂಗ್ರೆಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್...

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

Related Articles

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಸರಿನಲ್ಲಿ ಚಿನ್ನದ ಸರ ಪಡೆದು ವಂಚನೆ

ಚಿಕ್ಕಮಗಳೂರು: ತಾನು ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡು ಆಭರಣ ಮಳಿಗೆಯಿಂದ ₹1.82 ಲಕ್ಷ ಮೌಲ್ಯದ ಚಿನ್ನದ...

ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಚಿಕ್ಕಮಗಳೂರು-ಕಳಸ ಸೇರ್ಪಡೆ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಜಿಲ್ಲೆಯ ಎರಡು ತಾಲ್ಲೂಕುಗಳು...

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಮೆಸ್ಕಾಂ ಸಬ್‌ಸ್ಟೇಷನ್‌ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್‌ಫಾರ್ಮರ್ ಆಯಿಲ್ ಕಳವು

ಚಿಕ್ಕಮಗಳೂರು: ಹೊಸದಾಗಿ ನಿರ್ಮಿಸಲಾಗಿದ್ದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿನ ಟ್ರಾನ್ಸ್‌ಫಾರ್ಮರ್‌ಗೆ ತುಂಬಿಸಲಾಗಿದ್ದ ಸುಮಾರು 12,400 ಲೀಟರ್,...