ಚಿಕ್ಕಮಗಳೂರು: ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಏ.೮, ೨೦೨೨ರಂದು ನರಸಿಂಹರಾಜಪುರ ತಾಲೂಕು ಪೊಲೀಸ್ ಠಾಣಾ ವ್ಯಾಪ್ತಿಯ ಮೆಣಸೂರು ಗ್ರಾಮದ ಮೆಣಸೂರು ಬಳಿ ಆರೋಪಿ ಬಾಬು ನರಸಿಂಹರಾಜಪುರ ತಾಲೂಕು ಬಡಗಬೈಲು ಗ್ರಾಮದ ಅಳಲಗೆರೆ ಎ.ವೈ. ಶಿರೀಶ್ (೨೮) ಆತನಿಗೆ ಬಾಕಿ ಹಣ ಕೊಡುವುದಾಗಿ ಹೇಳಿ ಮನೆಗೆ ಕರೆಸಿಕೊಂಡು ಬಾಬು ಕತ್ತಿಯಿಂದ ತಲೆಗೆ ಹಲ್ಲೆ ನಡೆಸಿದ್ದನು.
ಹಲ್ಲೆಗೊಳಗಾದ ಶಿರೀಶ್‌ನನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ನರಸಿಂಹರಾಜ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಕೆ.ಪಿ.ಬಾಬುನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದರು.
ಪೊಲೀಸ್ ವೃತ್ತ ನಿರೀಕ್ಷರಾಗಿದ್ದ ವಸಂತ್ ಶಂಕರ್ ಭಾಗವತ್ (ನಿವೃತ್ತ) ಅವರು ಪ್ರಕರಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಾದ ಪ್ರತಿವಾದ ಆಲಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ಪಿ.ವೀಣಾ ವಾದ ಮಂಡಿಸಿದ್ದರು.
Murder accused gets life sentence
Leave a comment