Home ಹೆಲ್ಮೆಟ್ ನಿಯಮ ಪಾಲಿಸುವಂತೆ ವಿನೂತನ ಜಾಗೃತಿ
HomechikamagalurLatest Newsnamma chikmagalur

ಹೆಲ್ಮೆಟ್ ನಿಯಮ ಪಾಲಿಸುವಂತೆ ವಿನೂತನ ಜಾಗೃತಿ

Share
Share

ಚಿಕ್ಕಮಗಳೂರು: ದ್ವಿಚಕ್ರ ವಾಹನ ಚಾಲಕರಿಗೆ ಪೊಲೀಸ್ ಸಿಬ್ಬಂದಿಗಳು ಗುಲಾಬಿ ಹೂವುಗಳನ್ನು ನೀಡಿ ಜೀವರಕ್ಷಕ ಹೆಲ್ಮೆಟ್ ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ವಿನೂತನ ಜಾಗೃತಿ ಕಾರ್ಯಕ್ರಮ ವನ್ನು ಪೊಲೀಸ್ ಇಲಾಖೆಯಿಂದ ಶುಕ್ರವಾರ ನಡೆಸಲಾಯಿತು.

ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀಕಾಂತ್, ಉಪನಿರೀಕ್ಷಕರಾದ ತಿಪ್ಪೇಶ್ ಹಾಗೂ ಬೀರೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ವಿನೂತನ ಅಭಿಯಾನವನ್ನು ನಡೆಸಿದರು.

ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರಿಗೆ ಗುಲಾಬಿ ಹೂವುಗಳನ್ನು ನೀಡಿ ತಲೆಗೆ ಹೆಲ್ಮೆಟ್ ಧರಿಸದಿದ್ದರೆ ಆಗುವ ಅನಾಹುತ, ಜೀವದ ಮಹತ್ವ, ಕುಟುಂಬ ಸದಸ್ಯರ ಪರಿಸ್ಥಿತಿ ವಿವರಿಸಿ ಆತ್ಮರಕ್ಷಣೆಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಜತೆಗೆ ಉತ್ತಮ ಗುಣಮಟ್ಟದ ಹೆಲ್ಮೆಟ್‌ಗಳನ್ನು ಧರಿಸುವಂತೆ ಜಾಗೃತಿ ಮೂಡಿಸಿದರು.

ಜತೆಗೆ ಅತಿವೇಗ ಅಜಾಗುರೂಕತೆಯಿಂದ ವಾಹನ ಚಾಲನೆ ಮಾಡದಂತೆ, ಅಪ್ರಾಪ್ತರಿಗೆ ವಾಹನ ನೀಡದಂತೆ, ಸೀಟ್ ಬೆಲ್ಟ್ ಧರಿಸುವಂತೆ ರಸ್ತೆ ಸಂಚಾರ ನೀತಿ ನಿಯಮಗಳನ್ನು ಪಾಲಿಸುವಂತೆ ವಾಹನ ಸವಾರರಿಗೆ ತಿಳು ವಳಿಕೆ ನೀಡಿದರು.

Innovative awareness campaign to follow helmet rules

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...