ಚಿಕ್ಕಮಗಳೂರು: ಗೌರಿ,ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಪ್ರಯುಕ್ತ ಮೆರವಣಿಗೆಗಳು ಸಾಗುವ ಪ್ರಮುಖ ಸ್ಥಳ, ಸೂಕ್ಷ್ಮ, ಅತೀ ಸೂಕ್ಷ್ಮ ಸ್ಥಳಗಳು ಹಾಗೂ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ನಡೆಯಿತು.
ಜಿಲ್ಲೆಯಾದ್ಯಂತ ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಪ್ರಯುಕ್ತ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಮುಖ ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳ ಮತ್ತು ಪ್ರದೇಶಗಳಲ್ಲಿ ಮೆರವಣಿಗೆಗಳು ಸಾಗುವ ಸ್ಥಳ, ಮಾರ್ಗಗಳಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಪರಿಶೀಲನೆ ನಡೆಸಿದ್ದು ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆ ಹಿತದೃಷ್ಟಿಯಿಂದ ಕಾಲ್ನಡಿಗೆಯಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.
ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಂ ಅಮಟೆ ಅವರು ಜಿಲ್ಲೆಯಲ್ಲಿನ ಪೊಲೀಸ್ ಅಧಿಕಾರಿ ಸಿಬ್ಬಂದಿಯವರ ಜೊತೆ ಬಂದೋಬಸ್ತ್ ಸಂಬಂಧ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ಸಮಾಲೋಚಿಸಿ ಸೂಕ್ತ ಸಲಹೆ, ಸೂಚನೆ ಮತ್ತು ತಿಳುವಳಿಕೆಗಳನ್ನು ನೀಡಿರುತ್ತಾರೆ. ಜಿಲ್ಲೆಯಾದ್ಯಂತ ಪ್ರಮುಖ ಸೂಕ್ಷ್ಮ ಸ್ಥಳಗಳಲ್ಲಿ ರೂಟ್ ಮಾರ್ಚ್ ನಡೆಸಿ ಬಂದೋಬಸ್ತ್ ಸಂಬಂಧ ಸೂಕ್ತ ಕ್ರಮವಹಿಸಲಾಗುತ್ತಿದೆ.
Gauri-Ganesha-Root March for Eid Milad festival Bandobast
Leave a comment