Home Latest News ಪೋಕ್ಸೋ ಕಾಯ್ದೆಯಡಿ ಇಬ್ಬರಿಗೆ ಹತ್ತು ವರ್ಷ ಜೈಲು ಶಿಕ್ಷೆ
Latest NewschikamagalurHomenamma chikmagalur

ಪೋಕ್ಸೋ ಕಾಯ್ದೆಯಡಿ ಇಬ್ಬರಿಗೆ ಹತ್ತು ವರ್ಷ ಜೈಲು ಶಿಕ್ಷೆ

Share
Share

ಚಿಕ್ಕಮಗಳೂರು: ಬಾಲಕಿಯನ್ನು ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ನಡೆಸಿ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ ಚಿಕ್ಕಮಗಳೂರಿನ ಪೋಕ್ಸೋ ನ್ಯಾಯಾಲಯ ತಲಾ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ ಮೊದಲ ಆರೋಪಿಗೆ ೪೧ ಸಾವಿರ ರೂ. ಹಾಗೂ ಎರಡನೇ ಆರೋಪಿಗೆ ೧೧ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕಡೂರು ತಾಲೂಕು ಚಿಕ್ಕಂಗಳ ಗ್ರಾಮದ ಕಿರಣ ನಾಯ್ಕ ಹಾಗೂ ಅಭಿಷೇಕ ನಾಯ್ಕ ಶಿಕ್ಷೆಗೆ ಗುರಿಯಾದವರು. ಕಿರಣ ನಾಯ್ಕ ಎರಡನೇ ಆರೋಪಿಯಾದ ಅಭಿಷೇಕ ನಾಯ್ಕ ಸಹಾಯದಿಂದ ಅಪ್ರಾಪ್ತೆಯನ್ನು ಕಡೂರು ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದರು.

ವಿಷಯ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿರುವ ಬಗ್ಗೆ ನೊಂದ ಬಾಲಕಿ ಕಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಕರಣದ ವಿಚಾರಣೆ ನಡೆಸಿ ಚಿಕ್ಕಮಗಳೂರು ಫೋಕ್ಸೋ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಅಂದು ಕಡೂರು ವೃತ್ತ ನಿರೀಕ್ಷಕರಾಗಿದ್ದ ಕೆ.ಆರ್.ಶಿವಕುಮಾರ್ ಪ್ರಕರಣದ ಸಂಪೂರ್ಣ ತನಿಖೆಯನ್ನು ಕೈಗೊಂಡಿದ್ದರು. ಬಳಿಕ ಪ್ರಭಾರ ವೃತ್ತ ನಿರೀಕ್ಷಕರಾಗಿದ್ದ ಶ್ರೀಕಾಂತ್ ಆರೋಪಿತರ ವಿರುದ್ಧ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೊದಲ ಆರೋಪಿ ಕಿರಣ ನಾಯ್ಕನಿಗೆ ಹತ್ತು ವರ್ಷ ಜೈಲು ಹಾಗೂ ೪೧ ಸಾವಿರ ರೂ. ದಂಡ ಮತ್ತು ಎರಡನೇ ಆರೋಪಿ ಅಭಿಷೇಕ ನಾಯ್ಕನಿಗೆ ೧೦ ವರ್ಷ ಜೈಲು ಹಾಗೂ ೧೧ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಇದಲ್ಲದೆ ನೊಂದ ಬಾಲಕಿಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಭರತ್ ಕುಮಾರ್ ವಾದ ಮಂಡಿಸಿದ್ದರು.

Two sentenced to ten years in prison under POCSO Act

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....