Home Latest News ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ
Latest NewschikamagalurHomenamma chikmagalur

ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿಯಲ್ಲಿ ಧರ್ಮ ತಾರತಮ್ಯ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಚಿಕ್ಕಮಗಳೂರು ಜಾಯಿಂಟ್ ಆಕ್ಷನ್ ಕಮಿಟಿ ಮುಖಂಡರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರವು ಸಂವಿಧಾನದ ವಿಧಿ ೧೪, ೨೫, ೨೬ ಮತ್ತು ೨೯ರಲ್ಲಿ ಉಲ್ಲೇಖಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ. ವಕ್ಫ್ ಆಸ್ತಿಗಳಿಗೆ ನೀಡಲಾದ ರಕ್ಷಣೆ ಮತ್ತು ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ದೂರಿದರು.

ಭಾರತ ದೇಶದಲ್ಲಿ ಹಿಂದೂ, ಸಿಖ್, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳಿವೆ. ಆದರೆ ಇದೀಗ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸ್ವತಂತ್ರವಾಗಿ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕಿಗೆ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ. ಕನಿಷ್ಠ ನಾಲ್ಕು ವರ್ಷಗಳ ಓರ್ವ ಮುಸ್ಲಿಂ ವ್ಯಕ್ತಿ ತನ್ನ ಧರ್ಮ ಪಾಲಿಸದಿದ್ದಲ್ಲಿ ಆತ ತನ್ನ ಆಸ್ತಿಯನ್ನು ವಕ್ಫ್ಗೆ ದಾನ ಮಾಡುವ ಸ್ವಾತಂತ್ರÈವನ್ನು ನೂತನ ತಿದ್ದುಪಡಿಯಲ್ಲಿ ಉಲ್ಲಂಘಿಸಿದAತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ತಿದ್ದುಪಡಿಗಳು ಇತರ ಧಾರ್ಮಿಕ ಸಂಸ್ಥೆಗಳಿಗಿAತ ನಮ್ಮ ದತ್ತಿಗಳಿಗೆ ನೀಡಲಾದ ಹಕ್ಕುಗಳು ಮತ್ತು ರಕ್ಷಣೆಯನ್ನು ಕಸಿದುಕೊಳ್ಳುವ ತಾರತಮ್ಯದಿಂದ ಕೂಡಿದೆ. ತಿದ್ದುಪಡಿ ತನ್ನದೇ ಆದ ಮಿತಿಗಳಿಂದ ವಿನಾಯಿತಿಗಳನ್ನು ಕಸಿದುಕೊಳ್ಳುತ್ತಿದೆ. ಜೊತೆಗೆ ವಕ್ಫ್ ಆಸ್ತಿಗಳನ್ನು ನಿರ್ವಹಿಸುವ ಮತ್ತು ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದರು.

ವಕ್ಫ್ ಭೂಮಿಯನ್ನು ಅತಿಕ್ರಮಿಸಿದ್ದರೆ ತಿದ್ದುಪಡಿಯ ಪ್ರಕಾರ ಅತಿಕ್ರಮಿಸಿದವರೇ ಈಗ ಅವರು ಮಾಲೀಕರಾಗಬಹುದು. ಏಕೆಂದರೆ ವಿವಾದವನ್ನು ನಿರ್ಧರಿಸುವ ಅಧಿಕಾರವು ಗೊತ್ತುಪಡಿಸಿದ ಅಧಿಕಾರಿಯ ಪರವಾಗಿ ಹೋಗುತ್ತದೆ. ಮುಸ್ಲಿಮರು ಮಾತ್ರ ವಕ್ಫ್ ಮಂಡಳಿ ಮತ್ತು ಕೇಂದ್ರ ವಕ್ಫ್ ಮಂಡಳಿಯ ಸದಸ್ಯರಾಗಬಹುದು ಎಂಬ ಷರತ್ತು ತೆಗೆದು ಹಾಕಲಾಗಿದೆ. ಸಿಡಬ್ಲೂö್ಯಸಿ ಮತ್ತು ವಕ್ಫ್ ಮಂಡಳಿಗಳಿಗೆ ಚುನಾವಣೆಯನ್ನು ನಾಮನಿರ್ದೇಶನದಿಂದ ಬದಲಾಯಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಮರೂ ಹಿಂದುಳಿದಿದ್ದಾರೆ. ಹೀಗಾಗಿ ಲೋಕಸಭೆ ಮತ್ತು ರಾಜ್ಯಸಭೆ ಅಂಗೀಕರಿಸಿದ ಎಲ್ಲ ವಿವಾದಾತ್ಮಕ ತಿದ್ದುಪಡಿಗಳನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ವಿವಿಧ ಮಸೀದಿ ಗುರುಗಳಾದ ಮೌಲನಾ ಇಮ್ರಾನ್ ಮಸೂದ್ ಸಾಬ್, ಮುಪ್ತಿ ಇಫ್ತಿಕರ್ ಅಹ್ಮದ್ ಖುರೇಶಿ, ಮೌಲನಾ ಮಹಮ್ಮದ್ ಜುಬ್ರಿಕ್ ರಾಜ್‌ನೂರಿ, ಮೌಲನಾ ಗಯಾತ್ ಅಹ್ಮದ್ ರಶೀದ್, ಹೈ ಕೋರ್ಟ್ ವಕೀಲ ಸುಧೀರ್ ಕುಮಾರ್ ಮುರೊಳ್ಳಿ, ಸಿಡಿಎ ಅಧ್ಯಕ್ಷ ಮೊಹಮ್ಮದ್ ನಯಾಜ್ ಸೇರಿದಂತೆ ಮತ್ತಿತರರಿದ್ದರು.

Protest against amendment to Waqf Act

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...