Home Latest News ರೈತರ ಸಂಘದ ಮೇಲೆ ಮಾಡಿರುವ ಆರೋಪ ನಿರಾಧಾರ
Latest NewschikamagalurHomenamma chikmagalur

ರೈತರ ಸಂಘದ ಮೇಲೆ ಮಾಡಿರುವ ಆರೋಪ ನಿರಾಧಾರ

Share
Share

ಚಿಕ್ಕಮಗಳೂರು: ಮರ್ಲೆ ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಗೆ ಸಂಬಂಧಿಸಿದಂತೆ ಮಹಿಳೆ ಕಲ್ಪನಾ ಅವರು ರೈತರ ಸಂಘದ ಮೇಲೆ ಮಾಡಿರುವ ಆರೋಪ ನಿರಾಧಾರವಾಗಿದೆ. ಆರೋಪ ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ರೈತ ಸಂಘಟನೆಯ ಕ್ಷಮೆ ಕೇಳಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ಮತ್ತು ಮಾಜಿ ಅಧ್ಯಕ್ಷ ಗುರುಶಾಂತಪ್ಪ ಒತ್ತಾಯಿಸಿದರು.

ಜಂಟಿಸುದ್ದಿಗೋಷ್ಟಿಯಲ್ಲಿ ಸೋಮವಾರ ಮಾತನಾಡಿ,ಸೈದ್ಧಾಂತಿಕ ಹಿನ್ನಲೆಯಿಂದ ಶಿಸ್ತುಬದ್ಧವಾಗಿ ಕಟ್ಟಿದ ಜನಪರ ಸಂಘಟನೆಯ ಮೇಲೆ ಆರೋಪ ಮಾಡುವಾಗ ಎಚ್ಚರಿಕೆ ಇರಬೇಕು. ಆಧಾರಸಹಿತವಾಗಿರಬೇಕು. ಕೇಳಿದ ತಕ್ಷಣ ನ್ಯಾಯಕೊಡಿಸಲು ಅಂಗಡಿಯಲ್ಲಿ ಮಾರಾಟವಾಗುವ ಸಲಕರಣೆಯಲ್ಲ, ಅನ್ಯಾಯವಾಗಿದ್ದರೆ ಹೋರಾಟದ ಮೂಲಕ ನ್ಯಾಯಪಡೆದುಕೊಳ್ಳಬೇಕಾಗುತ್ತದೆ ಎಂಬ ಸಾಮಾನ್ಯ ತಿಳುವಳಿಕೆ ಇರಬೇಕಾಗುತ್ತದೆ ಎಂದು ಹೇಳಿದರು.

ರೈತ ಸಂಘಟನೆ ಯಾರಹಣ, ಯಾರ ಪ್ರಾಯೋಜಕತ್ವದಲ್ಲಿ ನಡೆಯುವ ಸಂಘಟನೆಯಲ್ಲ, ನಿಮ್ಮ ಮರ್ಜಿಗೆ ಕುಣಿಯಲು ಸಂಘದ ಕಾರ್ಯಕರ್ತರು ನಿಮ್ಮ ಮನೆಯ ಆಳುಗಳಲ್ಲ, ಸಮಸ್ಯೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳಿಗಾಗಿ ಜಿಲ್ಲಾಧಿಕಾರಿ ಕಚೇರಿ,ಅರಣ್ಯ ಇಲಾಖೆ,ಮಾಲಿನ್ಯ ನಿಯಂತ್ರಣ ಮಂಡಳಿ,ಭೂ ವಿಜ್ಞಾನ ಇಲಾಖೆಗಳಿಗೆ ರೈತ ಸಂಘ ಪತ್ರ ಬರೆದು ಉತ್ತರಕ್ಕಾಗಿ ಕಾಯುತ್ತಿದೆ. ಗಣಿಗಾರಿಕೆ ನಡೆಯುತ್ತಿರುವ ಸ್ಥಳದಿಂದಲೇ ಹೋರಾಟಕ್ಕೆ ಚಾಲನೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿತ್ತು ಅಷ್ಟರೊಳಗೆ ಮಹಿಳೆ ರೈತ ಸಂಘದ ಮೇಲೆ ಆರೋಪಮಾಡಿರುವುದು ಸರಿಯಲ್ಲವೆಂದು ತಿಳಿಸಿದರು.

ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮಪಂಚಾಯಿತಿ ಸದಸ್ಯರು, ಗ್ರಾಮಸ್ಥರನ್ನು ಸಂಪರ್ಕಿಸುವಂತೆ ಮಹಿಳೆಯ ಪತಿಗೆ ತಿಳಿಸಿದ್ದು, ಸರಿಯಾಗಿ ಸ್ಪಂದಿಸಲಿಲ್ಲ,ದಲಿತ ಸಂಘಟನೆಯೊಂದಿಗೆ ಮರ್ಲೆ ಕೊಲ್ಲಾಪುರದಮ್ಮನ ದೇವಾಲಯದಿಂದ ಪಾದಯಾತ್ರೆನಡೆಸಿ ಸಮಸ್ಯೆಯ ಗಂಭೀರತೆಯನ್ನು ಸಂಬಂಧಿಸಿದ ಇಲಾಖೆ ಗಮನ ಸೆಳೆಯಲು ಕಾರ್ಯಕ್ರಮ ರೂಪಿಸಲು ಚರ್ಚಿಸುತ್ತಿರುವಾಗಲೇ ಪಲಾಯನ ಮಾಡಿರುವುದು ಅನುಮಾನಕ್ಕೆ ಎಡೆಮಾಡಿದೆ ಎಂದು ಆರೋಪಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಎಂ.ಬಿ. ಚಂದ್ರಶೇಖರ್, ಜಿಲ್ಲಾಗೌರವಾಧ್ಯಕ್ಷ ಎಂ.ಸಿ.ಬಸವರಾಜ್, ಜಿಲ್ಲಾ ಉಪಾಧ್ಯಕ್ಷ ಡಿ.ಕುಮಾರಸ್ವಾಮಿ, ಮುಖಂಡರಾದ ಪ್ರದೀಪ,. ಎಸ್.ಬಿ.ನಿರಂಜನ ಮೂರ್ತಿ ಇದ್ದರು.

The allegations against the farmers’ association are baseless.

Share

Leave a comment

Leave a Reply

Your email address will not be published. Required fields are marked *

Don't Miss

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಕಾಂಗ್ರೆಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್...

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

Related Articles

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಸರಿನಲ್ಲಿ ಚಿನ್ನದ ಸರ ಪಡೆದು ವಂಚನೆ

ಚಿಕ್ಕಮಗಳೂರು: ತಾನು ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡು ಆಭರಣ ಮಳಿಗೆಯಿಂದ ₹1.82 ಲಕ್ಷ ಮೌಲ್ಯದ ಚಿನ್ನದ...

ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಚಿಕ್ಕಮಗಳೂರು-ಕಳಸ ಸೇರ್ಪಡೆ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಜಿಲ್ಲೆಯ ಎರಡು ತಾಲ್ಲೂಕುಗಳು...

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಮೆಸ್ಕಾಂ ಸಬ್‌ಸ್ಟೇಷನ್‌ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್‌ಫಾರ್ಮರ್ ಆಯಿಲ್ ಕಳವು

ಚಿಕ್ಕಮಗಳೂರು: ಹೊಸದಾಗಿ ನಿರ್ಮಿಸಲಾಗಿದ್ದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿನ ಟ್ರಾನ್ಸ್‌ಫಾರ್ಮರ್‌ಗೆ ತುಂಬಿಸಲಾಗಿದ್ದ ಸುಮಾರು 12,400 ಲೀಟರ್,...