Home Crime News ಅತ್ತೆ ಕೊಲೆ ಪ್ರಕರಣದ ಆರೋಪಿ ಸೊಸೆ – ಪ್ರಿಯಕರನ ಬಂಧನ
Crime NewsajjampuraHomeLatest Newsnamma chikmagalur

ಅತ್ತೆ ಕೊಲೆ ಪ್ರಕರಣದ ಆರೋಪಿ ಸೊಸೆ – ಪ್ರಿಯಕರನ ಬಂಧನ

Share
Share

ಅಜ್ಜಂಪುರ: ಅತ್ತೆಗೆ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿದ್ದ ಆರೋಪಿ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪಟ್ಟಣ ಪೊಲೀಸರು ಮಂಗಳವಾರ ಬಂಧಿಸಿದ್ದು, ಆರೋಪಿಗಳಿಂದ ₹36 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಟೆಂಪೊ ಟ್ರಾವಲರ್‌, ಬೈಕ್‌ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ತಡಗ ಗ್ರಾಮದ ದೇವಿರಮ್ಮ ಕೊಲೆಯಾದವರು. ಅವರ ಸೊಸೆ ಅಶ್ವಿನಿ (34), ಆಕೆಯ ಪ್ರಿಯಕರ ಶಿವನಿ ಗ್ರಾಮದ ಆಂಜನೇಯ ಎಸ್‌.ಎಸ್‌. (30) ಆರೋಪಿಗಳು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸೊಸೆ ಅಶ್ವಿನಿ ಮತ್ತು ಆಂಜನೇಯ ನಡುವೆ ಅಕ್ರಮ ಸಂಬಂಧವಿತ್ತು. ಇದನ್ನೇ ದುರುಪಯೋಗಪಡಿಸಿಕೊಂಡ ಆಂಜನೇಯ, ಅಶ್ವಿನಿಯಿಂದ ದೇವಿರಮ್ಮ ಅವರಿಗೆ ಸೇರಿದ್ದ ಚಿನ್ನಾಭರಣವನ್ನು ಪಡೆದುಕೊಂಡಿದ್ದ. ಅಶ್ವಿನಿ, ನಕಲಿ ಕೀ ಬಳಸಿ, ಚಿನ್ನಾಭರಣ ತೆಗೆದುಕೊಂಡಿದ್ದರು. ಇದು ಅತ್ತೆ ದೇವಿರಮ್ಮಗೆ ಗೊತ್ತಾಗುತ್ತದೆ ಎಂದು ಭಾವಿಸಿ ಕೊಲೆಗೆ ಸಂಚು ರೂಪಿಸಿ ಆಗಸ್ಟ್ 10ರಂದು ದೇವಿರಮ್ಮ ಅವರಿಗೆ ಊಟದಲ್ಲಿ 20 ನಿದ್ರೆ ಮಾತ್ರೆ ಹಾಕಿದ್ದರು.

ಊಟದ ಬಳಿಕ ದೇವಿರಮ್ಮ ಅವರು ಸುಸ್ತಾದರೂ ಆಸ್ಪತ್ರೆಗೆ ದಾಖಲಿಸಲು ತಡ ಮಾಡಿದ್ದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದರು. ವಿಷಯ ಮರೆಮಾಚಿ ಆ.11ರಂದು ಸಂಬಂಧಿಕರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಈ ಬಗ್ಗೆ ಅನುಮಾನಗೊಂಡ ಮೃತರ ಪುತ್ರಿ ವೀಣಾ ಅವರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ, ₹20.34 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಚಿನ್ನಾಭರಣ ಅಡವಿಟ್ಟು ಖರೀದಿಸಿದ ₹16 ಲಕ್ಷ ಮೌಲ್ಯದ ಟೆಂಪೊ ಟ್ರಾವೆಲರ್ ಮತ್ತು ಬಜಾಜ್ ಪಲ್ಸರ್ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಇನ್‌ಸ್ಪೆಕ್ಟರ್ ವೀರೇಂದ್ರ, ಪಿಎಸ್ಐ ಗಜೇಂದ್ರ, ಚಂದ್ರಮ್ಮ ಹಾಗೂ ಸಿಬ್ಬಂದಿ ಪ್ರಕರಣ ಭೇದಿಸಿದ್ದಾರೆ. ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಅವರು ಬಹುಮಾನ ಘೋಷಿಸಿದ್ದಾರೆ.

Daughter-in-law and boyfriend arrested in mother-in-law murder case

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...