ಬೆಂಗಳೂರು: ದೇಶದ ಹಲವು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಭೂಕುಸಿತ, ಪ್ರವಾಹ ಸೃಷ್ಟಿಯಾಗಿದೆ. ಹಲವು ಸಾವು ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಇತ್ತ ಕರ್ನಾಟಕದಲ್ಲೂ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.
ಮಳೆ ಬೆನ್ನಲ್ಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಿದ್ದರೆ,ಬೆಂಗಲೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಪರಿಣಾಮ ರಾಜ್ಯದ 5 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ 5 ಜಿಲ್ಲೆಯ ಶಾಲಾ ಕಾಲೇಜಿಗೆ ಇಂದು (ಆಗಸ್ಟ್ 28) ರಜೆ ಘೋಷಿಸಲಾಗಿದೆ.
ಈ ಪೈಕಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇನ್ನುಳಿದಂತೆ ಉಡುಪಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರಿ ಮಳೆಯಾಗುತ್ತಿರುವ ಕಾರಣ ಬೀದರ್ ಜಿಲ್ಲೆಯ ಔರಾದ್ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ತಹಸೀಲ್ದಾರ ಮಹೇಶ ಪಾಟೀಲ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಗೆ ಮುನ್ನಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.
Orange alert for coastal districts due to heavy rain
Leave a comment