Home Latest News ನಿಯಂತ್ರಣ ಕಳೆದುಕೊಂಡ ಕಾರು- ಸ್ಥಳದಲ್ಲೇ ಯವಕನ ಸಾವು
Latest NewschikamagalurCrime NewsHomenamma chikmagalur

ನಿಯಂತ್ರಣ ಕಳೆದುಕೊಂಡ ಕಾರು- ಸ್ಥಳದಲ್ಲೇ ಯವಕನ ಸಾವು

Share
Share

ಮೂಡಿಗೆರೆ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–173ರ ಹೊರಟ್ಟಿ ಗ್ರಾಮದ ಬಡವನದಿಣ್ಣೆ ಬಳಿ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕೀಡಾಗಿ ಯುವಕನೊಬ್ಬ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ತಾಲ್ಲೂಕಿನ ಬಾಳೂರು ಹೋಬಳಿಯ ಕೂವೆ ಗ್ರಾಮದ ಹುಯಿಲುಮನೆಯ ಅಕ್ಷಯ್ (25) ಮೃತಪಟ್ಟವರು.  ಅದೇ ಗ್ರಾಮದ ವಿಕಾಸ್ ಗಾಯಗೊಂಡಿದ್ದಾರೆ.

ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಬ್ಬೇನಹಳ್ಳಿ ಗ್ರಾಮದ ಬಳಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬಂದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

ಕಾರಿನಲ್ಲಿ ಸಿಲುಕಿದ್ದ ಅಕ್ಷಯ್ ಹಾಗೂ ವಿಕಾಸ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆ ತಲುಪುವ ವೇಳೆಗೆ ಅಕ್ಷಯ್ ಸಾವನ್ನಪ್ಪಿದ್ದಾರೆ.

ಇನ್ನೊಂದು ಕಾರಿನಲ್ಲಿದ್ದವರಿಗೂ ಗಾಯಗಳಾಗಿದ್ದು, ಹಾಸನ, ಬೆಂಗಳೂರು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ತಾಲ್ಲೂಕಿ ನಲ್ಲಿ ಜಿಟಿ–ಜಿಟಿ ಮಳೆಯಾಗುತ್ತಿದ್ದು, ದಟ್ಟವಾದ ಮಂಜು ಆವರಿಸುತ್ತಿರುವುದರಿಂದ ವಾಹನ‌ ಸವಾರರು ಜಾಗೃತಿಯಾಗಿ ವಾಹನ ಚಲಾಯಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Young man dies on the spot after car loses control

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...