ಚಿಕ್ಕಮಗಳೂರು: ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಮುಂದೆ ತಮ್ಮಲ್ಲಿರುವ ವಿವಿಧ ರೀತಿಯ ಸುಪ್ತ ಪ್ರತಿಭೆಗಳು ಹೊರಬರಲು ನೆರವಾಗುತ್ತದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಕರೆನೀಡಿದರು.
ಅವರು ಇಂದು ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿ.ಪಂ, ತಾ.ಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳು, ಸಮೂಹ ಸಂಪನ್ಮೂಲ ಕೇಂದ್ರ, ಶಾಲಾ ಶಿಕ್ಷಣ ಇಲಾಖೆ ಉಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಸಬಾ-೧ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ೨೦೨೫-೨೬ ನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾಕೂಟಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವುದು ಮುಖ್ಯ. ಕ್ರೀಡಗಳಲ್ಲಿ ಗೆದ್ದವರು ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು. ನ್ಯಾಯ ನಿರ್ಣಾಯಕರು ಪಾರದರ್ಶಕ ತೀರ್ಪು ನೀಡಬೇಕು. ಜೊತೆಗೆ ನಿಜವಾದ ಪ್ರತಿಭೆಗಳನ್ನು ಹೊರತರುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುವ ಅಗತ್ಯವಿದೆ ಎಂದು ತಿಳಿಸಿದರು.
ಆಯಾ ಶಾಲೆಯ ದೈಹಿಕ ಶಿಕ್ಷಕರು ವಿದ್ಯಾರ್ಥಿಗಳಿಗೆ ಯಾವ ಯಾವ ಕ್ರೀಡೆಗಳಲ್ಲಿ ಆಸಕ್ತಿ ಇದೆ ಎಂಬುದನ್ನು ಗುರ್ತಿಸಿ ಹೊರತಂದರೆ ಆ ಮಗು ರಾಷ್ಟ್ರದ ಆಸ್ತಿಯಾಗುತ್ತದೆ. ಇದನ್ನು ಮನಗಂಡು ವಿದ್ಯಾರ್ಥಿಯ ಗೆಲುವಿಗೆ ಶ್ರಮಿಸಿದಾಗ ಕೊನೆಯವರೆಗೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ ಎಂದು ವಿವರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಪ್ರಾಸ್ತವಿಕವಾಗಿ ಮಾತನಾಡಿ, ಇಂದು ನಡೆಯುತ್ತಿರುವ ಕ್ರೀಡಾಕೂಟಕ್ಕೆ ಉತ್ತಮವಾದ ವಾತಾವರಣ ಲಭಿಸಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತಮ್ಮ ಪ್ರತಿಭೆಯನ್ನು ಹೊರಹಾಕಿ ದೈಹಿಕ ಶಿಕ್ಷಕರು ನೀಡಿರುವ ತರಬೇತಿ ತಂತ್ರಾಂಶವನ್ನು ಬಳಸಿಕೊಂಡು ಜಯಶೀಲರಾಗಬೇಕೆಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆಸೀಫ್ ಪಾಷ ಮಾತನಾಡಿ, ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ. ಗೆದ್ದವರು ಬೀಗದೆ ಸೋತವರು ಬಾಗದೆ ಚೆನ್ನಾಗಿ ಆಟವಾಡಿ ಜಯಶೀಲರಾಗಬೇಕೆಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ವಿವಿಧ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಅನ್ಸಾರ್, ಸುಧೀರ್, ಪರಮೇಶ್ವರಪ್ಪ, ಅಜ್ಜಯ್ಯ, ಚಂದ್ರಯ್ಯ, ರವಿ, ಸುಂದ್ರೇಶ್, ಅರಸ್, ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.ಮೊದಲಿಗೆ ಮುಖ್ಯ ಶಿಕ್ಷಕ ಸೋಮಶೇಖರ್ ಸ್ವಾಗತಿಸಿ, ಕೊನೆಯಲ್ಲಿ ಶಿಕ್ಷಕಿ ರಮ್ಯಶ್ರೀ ವಂದಿಸಿದರು.
Sports events help bring out the latent talent in students.
Leave a comment